ಬಳ್ಳಾರಿ: ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಳ್ಳಾರಿ ಜಿಲ್ಲಾಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಎಸ್‌ಪಿ ಸಿದ್ದರಾಜು ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು ಅಧಿಕಾರಿಗಳು ಹೆರಿಗೆ ವಾರ್ಡ್, ಐಸಿಯು, ಔಷಧಿ ದಾಸ್ತಾನು ಉಗ್ರಾಣದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ನನ್ನ ತಪ್ಪಿದ್ದರೆ ನಾನು ರಾಜೀನಾಮೆ ಕೊಡಲು ಸಿದ್ಧ: ಆರೋಗ್ಯ ಸಚಿವ
IV ಹಾಗೂ RL ಪೂಯಿಡ್ ಔಷಧಿ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಬಾಣಂತಿಯರು ಅಸ್ವಸ್ಥರಾಗಲು ಕಾರಣವೇನು ಎಂಬುವುದರ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ನಿಯೋಗವು ಡಿಸೆಂಬರ್ 06ರಂದು ಲೋಕಾಯುಕ್ತಕ್ಕೆ ದೂರು ನೀಡಿತ್ತು. ಇದರ ಬೆನ್ನಲ್ಲೇ ಆಸ್ಪತ್ರೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ನೋಡಿ : ಸಾರ್ವಜನಿಕ ಆರೋಗ್ಯ ವ್ಯವಸ್ಥೆಗೆ ಕೇರಳ ಮಾದರಿ ಜಾರಿಯಾಗಲಿ – ಡಾ. ಅನೀಲ್ Janashakthi Media