ಬೆಂಗಳೂರು : ಕಾಮಗಾರಿಯನ್ನೇ ನಡೆಸದೆ ₹ 55 ಕೋಟಿ ಬಿಲ್ ಪಾವತಿಸುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು, ಶೋಧ ನಡೆಸುತ್ತಿದ್ದಾರೆ.
ಕಾಮಗಾರಿಯೊಂದಕ್ಕೆ ಮಂಜೂರಾಗಿದ್ದ ₹ 55 ಕೋಟಿಯನ್ನು ಸಂಸ್ಥೆಯ ಅಧ್ಯಕ್ಷ ಡಿ.ಎಸ್. ವೀರಯ್ಯ ಮತ್ತು ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಶಂಕರಪ್ಪ ಅಕ್ರಮವಾಗಿ ವರ್ಗಾವಣೆ ಮಾಡಲು ಪ್ರಯತ್ನಿಸುತ್ತಿರುವ ಕುರಿತು ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿತ್ತು. ಈ ಕುರಿತು ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್ ಘಟಕದ ಅಧಿಕಾರಿಗಳು ಪ್ರಾಥಮಿಕ ತನಿಖೆ ನಡೆಸಿದ್ದರು. ಆರೋಪದಲ್ಲಿ ಮೇಲ್ನೋಟಕ್ಕೆ ಸತ್ಯಾಂಶವಿರುವುದು ಕಂಡುಬಂದಿರುವ ಕಾರಣದಿಂದ ಶಾಂತಿನಗರದ ಬಿಎಂಟಿಸಿ ಕಟ್ಟಡದಲ್ಲಿರುವ ಸಂಸ್ಥೆಯ ಕೇಂದ್ರ ಕಚೇರಿ ಮೇಲೆ ದಾಳಿ ಮಾಡಿದ್ದು, ದಾಖಲೆಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ : ಬಿಡಿಎ ಕಚೇರಿಗೆ ಲೋಕಾಯುಕ್ತ ದಾಳಿ-ದಾಖಲೆಗಳ ಪರಿಶೀಲನೆ
ಲೋಕಾಯುಕ್ತದ ಬೆಂಗಳೂರು ನಗರ ಎಸ್ ಪಿ ಕೆ.ವಿ. ಅಶೋಕ್ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದಾರೆ.