ದಾವಣಗೆರೆ: ಆದಾಯಕ್ಕಿಂತ ಹೆಚ್ಚು ಹಾಗೂ ದಾಖಲೆ ರಹಿತ ಹಣ ಹೊಂದಿರುವ ಅಧಿಕಾರಿಗಳ ಕಚೇರಿ, ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸುತ್ತಾರೆ. ಹಾಗೆಯೇ ಇದೀಗ ಇಂದು ದಾವಣಗೆರೆ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ ನಡೆದಿದೆ.
ಜಿಲ್ಲಾ ಆಹಾರ ಸುರಕ್ಷತಾ ಹಾಗೂ ಗುಣಮಟ್ಟ ಘಟಕದ ಜಿಲ್ಲಾ ಸಾಂಖಿಕ ಅಧಿಕಾರಿ ಡಾ.ಜಿ.ಎಸ್.ನಾಗರಾಜು ಗೆ ಸೇರಿದ 5 ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಇಂದು (ಮಾರ್ಚ್ 06) ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ಇಂದು ಪಾಲ್ ಸ್ವೀಜಿಯ ಮರು ಓದಿನ ಜರೂರು ಇದೆ
ನಗರದ ಎಸ್.ನಿಜಲಿಂಗಪ್ಪ ಬಡಾವಣೆಯ ನಾಗರಾಜು ಅವರ ಮನೆ, ತಂದೆ ಷಣ್ಮುಖಪ್ಪ ಅವರ ನಿವಾಸ, ಫಾರಂಹೌಸ್, ಕಚೇರಿ ಹಾಗೂ ಕುಟುಂಬದ ಕಿಡಿತದಲ್ಲಿರುವ ಸಹಕಾರ ಸಂಘದ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಚಿನ್ನಾಭರಣ, ಹಣ ಸೇರಿದಂತೆ ಅಪಾರ ಸಂಪತ್ತು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಆದಾಯಕ್ಕಿಂತ ಹೆಚ್ಚು ಸಂಪತ್ತು ಹೊಂದಿದ ಆರೋಪದ ಮೇಲೆ ನಾಗರಾಜು ಅವರಿಗೆ ಸೇರಿದ 5 ಸ್ಥಳಗಳ ಮೇಲೆ ದಾಳಿ ನಡೆದಿದೆ. ಡಿವೈಎಸ್‌ಪಿ, ಎನ್ಸ್‌ಪೆಕ್ಟರ್ ಸೇರಿ ಹಲವು ಸಿಬ್ಬಂದಿ ದಾಳಿ ನಡೆಸಿದ್ದಾರೆ. ಇದೀಗ ದಾಳಿ ಸ್ಥಳಗಳಲ್ಲಿ ಪರಿಶೀಲನೆ ಕಾರ್ಯ ನಡೆಯುತ್ತಿದೆ ಎಂದು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್.ಕೌಲಾಪುರ ಮಾಹಿತಿ ನೀಡಿದ್ದಾರೆ.
ಇದನ್ನೂ ನೋಡಿ: ಅಹೋರಾತ್ರಿ ಹೋರಾಟಕ್ಕೆ ಚಾಲನೆ | ಶ್ರಮಿಕರ ಸಮಸ್ಯೆಗಳಿಗೆ ಪರಿಹಾರ ನೀಡಿ – ಮೀನಾಕ್ಷಿ ಸುಂದರಂ