ಬೆಂಗಳೂರು: ಜುಲೈ 23 ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ಎದುರಾಗಿದೆ. ಮೈಸೂರು, ಬಳ್ಳಾರಿ, ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದೂ, ಅವರು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಮೈಸೂರಿನಲ್ಲಿ ಪಾಲಿಕೆ ಉಪವಿಭಾಗಾಧಿಕಾರಿ ಮನೆ ಮೇಲೆ ದಾಳಿ ನಡೆಸಲಾಗಿದೆ.
ಇದನ್ನೂ ಓದಿ: ಬಿಎಂಟಿಸಿಗೆ ಮತ್ತೊಬ್ಬ ಮಹಿಳೆ ಬಲಿ; ಸವು
ಮೈಸೂರಿನ ಸಿದ್ಧಾರ್ಥ್ ಬಡಾವಣೆಯಲ್ಲಿರುವ ಪಾಲಿಕೆ ಉಪ ವಿಭಾಗಧಿಕಾರಿ ವೆಂಕಟರಾಮ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಸಾತಗಳ್ಳಿಯ ಜೆಪಿ ನಗರದಲ್ಲಿರುವ ಕೌಶಲ್ಯಾಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್ ಸ್ವಾಮಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ನೋಡಿ: ಬಿಹಾರ ಚುನಾವಣೇ | “ವಿಶೇಷ ತೀವ್ರ ಪರಿಷ್ಕರಣೆ”ಎನ್‌ಡಿಎ ಕೂಟದ ಹೊಸ ನಾಟಕ Janashakthi Media
