ರಾಜ್ಯದ ಹಲವು ಕಡೆ ಲೋಕಾಯುಕ್ತ ದಾಳಿ

ಬೆಂಗಳೂರು: ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು, ಆರೋಪಿತ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಧಾರವಾಡ,ಚಿತ್ರದುರ್ಗ, ದಾವಣಗೆರೆ, ಕೊಪ್ಪಳ, ಬೀದರ್ ಸೇರಿ ಹಲವು ಕಡೆ ಲೋಕಾಯುಕ್ತ ದಾಳಿ ನಡೆದಿದೆ. ನಿದ್ದೆಯಲ್ಲಿಯಲಿದ್ದ ಅಧಿಕಾರಿಗಳಿಗೆ ಸಂಕಷ್ಟ ಎದುರಾಗಿದೆ.

ಧಾರವಾಡದಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು, ಬೆಳಗಾವಿ ಪಾಲಿಕೆ ಸಹಾಯಕ ಆಯುಕ್ತ ಸಂತೋಷ ಆನಿಶೆಟ್ಟರ್ ನಿವಾಸದಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಧಾರವಾಡದ ನಗರದ ಸಪ್ತಾಪುರ ಬಡಾವಣೆಯ ಮಿಚಿಗನ್ ಲೇಔಟ್​​ನಲ್ಲಿರುವ ಸಂತೋಷ ನಿವಾಸದ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ಮನೆಯಲ್ಲಿ ದಾಖಲೆಗಳ‌ ಪರಿಶೀಲನೆ ನಡೆಸಲಾಗುತ್ತಿದೆ. ಈ ಮೊದಲು ಸಂತೋಷ ಅವರು ಹುಬ್ಬಳ್ಳಿ – ಧಾರವಾಡ ಪಾಲಿಕೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಕೆಲ ವರ್ಷಗಳ ಹಿಂದೆ ಬೆಳಗಾವಿಗೆ ವರ್ಗಾವಣೆ ಆಗಿದ್ದಾರೆ. ಸಂತೋಷ ಅವರು ಧಾರವಾಡದಲ್ಲಿಯೇ ಮನೆ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಹೊಳಲ್ಕೆರೆ ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ಆದ ಕೆ. ಮಹೇಶ್ ಹಾಗೂ ಅವರ ಪತ್ನಿ ಬಿಬಿಎಂಪಿ ಎ ಇ ಹೆಚ್. ಭಾರತಿ ಮನೆ ಮೇಲೆ ದಾಳಿ ನಡೆಸಿದ್ದಾರೆ.

ದಾವಣಗೆರೆ ಜಯನಗರದಲ್ಲಿನ ಮಹೇಶ್ ಮನೆ ಮೇಲೆ ದಾಳಿ ನಡೆಸಿದ್ದು, ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಯಾದ ಮಹೇಶ್ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.ಬೆಂಗಳೂರಿನ ಬಿಬಿಎಂಪಿ ಕಛೇರಿ ಮೇಲು ದಾಳಿ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಸಂಪಾದನೆ ದೂರು ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೀದರ್ ಜಿಲ್ಲೆಯಲ್ಲೂ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿ ಕಾನ್ಸ್ಟೇಬಲ್ ವಿಜಯಕುಮಾರ್ ಎನ್ನುವವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ. ಹುಮನಾಬಾದ್ ಪಟ್ಟಣದ ಟೀಚರ್ ಕಾಲೋನಿಯ ಮನೆ ಮೇಲೆ ಹಾಗೂ ಹುಚಕನಳ್ಳಿ ಗ್ರಾಮದ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಅಲ್ಲದೆ ಕೊಡಗು ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ಮನೆ ಮೇಲೆ ದಾಳಿ ನಡೆಸಿದ್ದಾರೆ.ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತದ ಬಳಿ ಇರುವ ಮನೆಯಲ್ಲಿ ಚಿನ್ನ, ನಗದು ಪತ್ತೆ. ಪ್ರಿಯಾಪಟ್ಟಣ ತಾಲೂಕಿನ ಮಾಕನಳ್ಳಿಯ ಮಾವನ ಮನೆ ಹಾಗೂ ಮೈಸೂರು ನಲ್ಲಿರುವ ಭಾವ ಮೈದನ ಮನೆಯಲ್ಲೂ ಅಧಿಕಾರಿಗಳು ಶೋಧಕಾರ್ಯ ನಡೆಸಿದ್ದಾರೆ.

ಕೊಪ್ಪಳದಲ್ಲು ಲೋಕಾಯುಕ್ತ ಅಧಿಕಾರಿಗಳ ತಂಡದಿಂದ ದಾಳಿ ನಡೆಸಲಾಗಿದೆ. ಮಂಜುನಾಥ್ ಬನ್ನಿಕೊಪ್ಪಗೆ ಸೇರಿದ ನಿವಾಸ ಕಚೇರಿಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ.ಕೊಪ್ಪಳ ನಗರದ ಮಂಗಳ ಆಸ್ಪತ್ರೆ ಹಿಂಭಾಗದ ಮನೆ ನಿರ್ಮಿತಿ ಕೇಂದ್ರ, ಹೊಲಗೆ ಗ್ರಾಮದಲ್ಲಿನ ಲಾಡ್ಜ್ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲೆ ನಡೆಸುತ್ತಿದ್ದಾರೆ. ರಾಯಚೂರು ಲೋಕಾಯುಕ್ತ ಎಸ್ ಪಿ ಆರ್ ಎಲ್ ಅರಸಿದ್ದಿ ನೇತೃತ್ವದಲ್ಲಿ ನಡೆಸುತ್ತಿದ್ದಾರೆ.

ಚೆನ್ನಗಿರಿ ಅರಣ್ಯ ಇಲಾಖೆ ಆರ್‌ಎಫ್‌ಓ ಸತೀಶ್ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಶಿವಮೊಗ್ಗದಲ್ಲಿರುವ ಸತೀಶ್ ಮನೆ ಮೇಲು ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಚನ್ನಗಿರಿ ಅರಣ್ಯ ಇಲಾಖೆಯ ಕ್ವಾರ್ಟರ್ಸ್ ಮನೆ ಮೇಲೂ ಅಧಿಕಾರಿಗಳು ದಾಳಿ ಮಾಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *