ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ
ವಿಜಯಪುರದ ಕರ್ನಾಟಕ ಹೌಸಿಂಗ್ ಬೋರ್ಡ್‌ನ ಎಫ್ ಡಿ ಎ ಶಿವಾನಂದ ಕೆಂಭಾವಿ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಕೇಸ್ ನಲ್ಲಿ ಕೆಂಭಾವಿ ಮನೆ ಮೇಲೆ ದಾಳಿ ನಡೆಸಿರುವ ಪೊಲೀಸರು ಶೋಧ ಕಾರ್ಯಾಚರಣೆಗಿಳಿದಿದ್ದಾರೆ.ಇದನ್ನು ಓದಿ:IPS ಅಧಿಕಾರಿಗಳ ಕಿತ್ತಾಟ: ವರ್ತಿಕಾ ವರ್ಗಾವಣೆ ಬೆನ್ನಲ್ಲೇ ರೂಪಾ ಮೌದ್ಗಿಲ್ ಎತ್ತಂಗಡಿ
ವಿಜಯಪುರದ ತಿಡಗುಂದಿ ಗ್ರಾಮದ ಬಳಿಯ ಶಿವಾನಂದ ಕೆಂಭಾವಿರವರ ಫಾರ್ಮ್‌ಹೌಸ್ ಹಾಗೂ ಜಿಲ್ಲೆಯ ಸುಕೂನ್ ಕಾಲೋನಿಯಲ್ಲಿರುವ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇದರೊಂದಿಗೆ ತುಮಕೂರು, ಕಲಬುರಗಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ
ತುಮಕೂರಿನ ಶಿರಾ ತಾಲೂಕಿನ ತಾವರೇಕೆರೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯರಾದ ಡಾ.ಜಗದೀಶ್ ವೈದ್ಯ ಡಾ. ಜಗದೀಶ್ ಮನೆ ಸೇರಿ ಒಟ್ಟು 6 ಕಡೆಗಳಲ್ಲಿ ಲೋಕಾ ದಾಳಿ ನಡೆಸಿದ್ದಾರೆ.ಇದನ್ನು ಓದಿ:ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಬೈಕ್ ಸವಾರರಿಗೆ ನೋ ಎಂಟ್ರಿ!