ಬೆಂಗಳೂರಿನಲ್ಲಿ 190 ಕಿಲೋಮೀಟರ್ ಉದ್ದದ ಸುರಂಗ ರಸ್ತೆ ನಿರ್ಮಾಣ| ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಬೆಂಗಳೂರಿನಲ್ಲಿ 190 ಕಿಲೋಮೀಟರ್ ಉದ್ದದ ಸುರಂಗ ರಸ್ತೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು, ಎಂಟು ಕಂಪನಿಗಳು ಈ ಯೋಜನೆ ಕೈಗೊಳ್ಳಲು ಅರ್ಹತೆ ಪಡೆದಿವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ತಿಳಿಸಿದ್ದಾರೆ.ಬೆಂಗಳೂರಿನಲ್ಲಿ
ಇದನ್ನೂ ಓದಿ:ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ಸಿಟಿ ರೌಂಡ್ಸ್: ಹೆಬ್ಬಾಳ ಜಂಕ್ಷನ್‌ ವೀಕ್ಷಣೆ

ಈ ಕಂಪನಿಗಳು ಕಾರ್ಯಸಾಧ್ಯತೆಯ ವರದಿಯನ್ನು ಸಲ್ಲಿಸುತ್ತಿವೆ ಮತ್ತು ನಾವು 45 ದಿನಗಳಲ್ಲಿ ಸಾರ್ವಜನಿಕ ಟೆಂಡರ್ ಕರೆಯಲು ತಯಾರಿ ನಡೆಸುತ್ತಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಅ-05 ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ನಗರದ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಕಾರಿಡಾರ್ ಅಭಿವೃದ್ಧಿಗೆ ಟೆಂಡರ್ ಕರೆಯಲಾಗಿದೆ ಎಂದರು.  ಹಲವರು ತಮ್ಮ ಪ್ರಸ್ತಾವನೆಗಳನ್ನು ಸಲ್ಲಿಸಿದ್ದಾರೆ. ರಸ್ತೆ ಮೂಲಸೌಕರ್ಯ, ಟ್ರಾಫಿಕ್ ಜಾಮ್ ತೆರವು, ಸುರಂಗ ರಸ್ತೆ ನಿರ್ಮಾಣ ಮತ್ತು ರಸ್ತೆ ವಿಸ್ತರಣೆ ಬಗ್ಗೆಯೂ ಸಲಹೆಗಳು ಬಂದಿವೆ.

ಇನ್ನು ಸುರಂಗ ಮಾರ್ಗ ಯೋಜನೆಗೆ ಬಂಡವಾಳ ಖಾತ್ರಿಪಡಿಸಬೇಕು ಎಂದು ನಿರ್ದೇಶನ ನೀಡಿದ್ದೆವು. ಈ ನಿಟ್ಟಿನಲ್ಲಿ ಜಾಗತಿಕ ಮಟ್ಟದಲ್ಲಿ ಬಿಡ್ಡಿಂಗ್ ನಡೆದಿದ್ದರಿಂದ ಒಂಬತ್ತು ಕಂಪನಿಗಳು ಯೋಜನೆಗೆ ಆಸಕ್ತಿ ವ್ಯಕ್ತಪಡಿಸಿವೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ವಿಡಿಯೋ ನೋಡಿ:ದ್ವಾರಕಾ ಎಕ್ಸ್‌ಪ್ರೆಸ್‌ವೇನಲ್ಲಿ ಅಕ್ರಮ? ನಿಗದಿತ ಮೊತ್ತಕ್ಕಿಂತ 14 ಪಟ್ಟು ಹೆಚ್ಚು ವೆಚ್ಚ Janashakthi Media

Donate Janashakthi Media

Leave a Reply

Your email address will not be published. Required fields are marked *