ಬಳ್ಳಾರಿ: ನಗರದ ಅನಂತಪುರ ರಸ್ತೆಯ ಆಟೋನಗರದಲ್ಲಿ ಲಾರಿಗೆ ಆಕಸ್ಮಿಕವಾಗಿ ಏಕಾಏಕಿ ಬೆಂಕಿ ತಗುಲಿದ್ದೂ, ಲಾರಿಯಲ್ಲಿ ಇದ್ದಂತಹ ಸುಮಾರು 45 ಲಕ್ಷಕ್ಕೂ ಹೆಚ್ಚು ಮೌಲ್ಯದ 40 ಬೈಕುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ಬೆಂಕಿಯ ಕೆನ್ನಾಲಿಗೆಗೆ ಸಿಕ್ಕು ಲಾರಿಯಲ್ಲಿದ್ದ 45 ಲಕ್ಷ ರೂ. ಮೌಲ್ಯದ 40 ಬೈಕ್‌ಗಳು ಸುಟ್ಟು ಕರಕಲಾಗಿವೆ.
ಇದನ್ನೂ ಓದಿ: ಗಜೇಂದ್ರಗಡ | ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ
ರಸ್ತೆ ಬದಿ ನಿಂತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು ದಟ್ಟ ಹೊಗೆ ಕಾಣಿಸಿಕೊಂಡಿದೆ. ಲಾರಿಯಲ್ಲೇ ಕುಳಿತಿದ್ದ ಚಾಲಕ ಕೂಡಲೇ ಎಚ್ಚೆತ್ತುಕೊಂಡು ಲಾರಿಯಿಂದ ಕೆಳಗೆ ಇಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸುವಷ್ಟರಲ್ಲಿ ಲಾರಿಯಲ್ಲಿದ್ದ ಬೈಕ್‌ಗಳು ಸುಟ್ಟು ಕರಕಲಾಗಿದ್ದವು. ಘಟನೆ ಸಂಬಂಧ ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ನೋಡಿ: ಧರ್ಮಸ್ಥಳ| ಕೊಂದವರು ಯಾರು?ಏಕವ್ಯಕ್ತಿ ಪ್ರದರ್ಶನ Janashakthi Media
