ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಮಗನಿಂದ ಪ್ರೀತಿ ಹೆಸರಲ್ಲಿ ವಂಚನೆ ಆರೋಪ | ದೂರು ದಾಖಲಿಸಿದ ಯುವತಿ

ಬೆಂಗಳೂರು: ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನ ವಿರುದ್ಧ ಪ್ರೀತಿ ಹೆಸರಲ್ಲಿ ವಂಚನೆ ಆರೋಪ ಕೇಳಿಬಂದಿದೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸರಾಗಿ ಕಾರ್ಯನಿರ್ವಹಿಸುತ್ತಿರುವ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ವಂಚನೆ ದೂರು ದಾಖಲಾಗಿದೆ.

ಒಂದೂವರೆ ವರ್ಷದ ಹಿಂದೆ ಸ್ನೇಹಿತರ ಮೂಲಕ 42 ವರ್ಷದ ರಂಗನಾಥ್‌ಗೆ 24 ವರ್ಷದ ಯುವತಿಯ ಪರಿಚಯವಾಗಿತ್ತು. ನಂತರ ಯುವತಿಯೊಂದಿಗೆ ರಂಗನಾಥ್ ಪ್ರೀತಿ ಪ್ರೇಮ ನಾಟಕವಾಡಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂಬ ಆರೋಪ ಬಂದಿದೆ.

ಇದನ್ನೂ ಓದಿ:ವಂಚನೆ ಪ್ರಕರಣ : ಇಬ್ಬರು ಬಿಜೆಪಿ ಶಾಸಕರಿಗೆ ಜೈಲು ಶಿಕ್ಷೆ ಪ್ರಕಟ

ಕಳೆದ ಜನವರಿಯಲ್ಲಿ ಮೈಸೂರಿನ ಖಾಸಗಿ ಹೋಟೇಲ್ ಒಂದರಲ್ಲಿ ಇಬ್ಬರೂ ಲೈಂಗಿಕ ಸಂಪರ್ಕ ಬೆಳೆಸಿದ್ದರು. ಬಳಿಕ ಯುವತಿ ರಂಗನಾಥ್‌ಗೆ ತನ್ನನ್ನು ಮದುವೆಯಾಗುವಂತೆ ಕೇಳಿಕೊಂಡಿದ್ದಳು. ಆದರೆ ಬಳಿಕ ರಂಗನಾಥ್ ಯುವತಿಯನ್ನು ಕಡೆಗಣಿಸಲು ಪ್ರಾರಂಭಿಸಿದ್ದರು. ನಿನ್ನನ್ನು ಮದುವೆ ಆಗಲ್ಲ, ಏನು ಮಾಡ್ತೀಯೋ ಮಾಡಿಕೋ ಎಂದು ರಂಗನಾಥ್ ಹೇಳಿರುವುದಾಗಿ ಸಂತ್ರಸ್ತೆ ಯುವತಿ ಆರೋಪಿಸಿದ್ದಾಳೆ.

ಒಂದೂವರೆ ವರ್ಷದ ಹಿಂದೆ ರಂಗನಾಥ್ ಪಾರ್ಟಿಯೊಂದರಲ್ಲಿ ಯುವತಿಯನ್ನು ಪರಿಚಯ ಮಾಡಿಕೊಂಡಿರುವ ಬಗ್ಗೆ ತಿಳಿದುಬಂದಿದೆ. ಈ ದೂರಿನ ಮೇರೆಗೆ ಬೆಂಗಳೂರಿನ ಬಸವನಗುಡಿ ಮಹಿಳಾ ಠಾಣೆಯಲ್ಲಿ ಬಳ್ಳಾರಿ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ಐಪಿಸಿ ಸೆಕ್ಷನ್ 420, 417, 506 ಅಡಿಯಲ್ಲಿ ಎಫ್​ಐಆರ್ ದಾಖಲಾಗಿದೆ.

ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟಿದ್ದಾರೆ ಎಂದು ಯುವತಿ ದೂರು ದಾಖಲಿಸಿದ ಬೆನ್ನಲ್ಲೇ ಇತ್ತ ರಂಗನಾಥ್ ಸಹ ಪ್ರತಿದೂರು ದಾಖಲಿಸಿದ್ದಾರೆ. ​ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಯುವತಿ ವಿರುದ್ಧ ದೂರು ದಾಖಲಿಸಿದ್ದು, ಫೋಟೋ, ಆಡಿಯೋ ಇಟ್ಟುಕೊಂಡು 15 ಲಕ್ಷ ಹಣ ನೀಡುವಂತೆ ಬ್ಲ್ಯಾಕ್​ಮೇಲ್ ಮಾಡುತ್ತಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಿಂದ ಇಬ್ಬರಿಗೂ ನೋಟಿಸ್ ಜಾರಿಯಾಗಿದೆ. ಸೂಕ್ತ ದಾಖಲೆಗಳ ಜೊತೆ ವಿಚಾರಣಗೆ ಹಾಜರಾಗುವಂತೆ ಇಬ್ಬರಿಗೂ ತಿಳಿಸಲಾಗಿದೆ.

ವಿಡಿಯೋ ನೋಡಿ:ಮಾನವೀಯತೆ ಜಾಗಕ್ಕೆ ಮತೀಯತೆ ಬಂದಿದೆ – ಬರಗೂರು ರಾಮಚಂದ್ರಪ್ಪ Janashakthi Media

Donate Janashakthi Media

Leave a Reply

Your email address will not be published. Required fields are marked *