ದೆಹಲಿಯಲ್ಲಿ ಅಧಿಕಾರಕ್ಕೆ ಬಂದರೆ 500 ರೂ. ಗೆ ಎಲ್‌ಪಿಜಿ ಸಿಲಿಂಡರ್ – ಕಾಂಗ್ರೆಸ್ ಭರವಸೆ

ವದೆಹಲಿ: ದೆಹಲಿಯಲ್ಲಿ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ತಾನು ನೀಡಿರುವ ಐದು ಭರವಸೆಗಳನ್ನು ಪೂರೈಸುತ್ತದೆ ಎಂದು ಎಐಸಿಸಿ ದೆಹಲಿ ಉಸ್ತುವಾರಿ ಖಾಜಿ ನಿಜಾಮುದ್ದೀನ್ ಮತ್ತು ದೆಹಲಿ ಕಾಂಗ್ರೆಸ್ ಮುಖ್ಯಸ್ಥ ದೇವೇಂದ್ರ ಯಾದವ್ ರೊಂದಿಗೆ  ಸುದ್ದಿಗೋಷ್ಠಿಯಲ್ಲಿ ಗುರುವಾರದಂದು ಮಾತನಾಡಿದ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಭರವಸೆ ನೀಡಿದ್ದಾರೆ.

ದೆಹಲಿಯಲ್ಲಿ ಅಧಿಕಾರಕ್ಕೆ ಬಂದರೆ ನಗರದ ನಿವಾಸಿಗಳಿಗೆ 500 ರೂ. ದರದಲ್ಲಿ ಎಲ್‌ಪಿಜಿ ಸಿಲಿಂಡರ್, ಉಚಿತ ಪಡಿತರ ಕಿಟ್ ಮತ್ತು 300 ಯುನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಘೋಷಣೆಯನ್ನು ಮಾಡಿದರು.

ಜನವರಿ 6 ರಂದು ಕಾಂಗ್ರೆಸ್ ತನ್ನ ‘ಪ್ಯಾರಿ ದೀದಿ ಯೋಜನೆ’ಯನ್ನು ಘೋಷಿಸಿತು. ದೆಹಲಿಯಲ್ಲಿ ಗದ್ದುಗೆ ಏರಿದರೆ ಮಹಿಳೆಯರಿಗೆ ಮಾಸಿಕ 2,500 ರೂ. ನೀಡುವುದಾಗಿ ಹೇಳಿತ್ತು.

ಇದನ್ನೂ ಓದಿ: ಬೀದರ್: ಎಟಿಎಂಗೆ ಹಣ ತುಂಬಿಸುವ ವೇಳೆ ಗುಂಡಿನ ದಾಳಿ – ಇಬ್ಬರು ಮೃತ

ಜನವರಿ 8 ರಂದು, ಪಕ್ಷವು ‘ಜೀವನ ರಕ್ಷಾ ಯೋಜನೆ’ಯನ್ನು ಘೋಷಿಸಿತು. ಅದರ ಅಡಿಯಲ್ಲಿ 25 ಲಕ್ಷದವರೆಗೆ ಉಚಿತ ಆರೋಗ್ಯ ವಿಮೆಯನ್ನು ಒದಗಿಸುವುದಾಗಿ ಭರವಸೆ ನೀಡಿತು. ದೆಹಲಿಯಲ್ಲಿರುವ ವಿದ್ಯಾವಂತ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 8,500 ರೂಪಾಯಿಗಳನ್ನು ಒಂದು ವರ್ಷದವರೆಗೆ ನೀಡುವುದಾಗಿ ಭಾನುವಾರ ಪಕ್ಷ ಭರವಸೆ ನೀಡಿದೆ.

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5 ರಂದು ಮತದಾನ ನಡೆಯಲಿದ್ದು, ಫೆಬ್ರುವರಿ 8ರಂದು ಮತ ಎಣಿಕೆ ನಡೆಯಲಿದೆ. ಮೂರನೇ ಬಾರಿಗೆ ಗದ್ದುಗೆ ಏರಲು ಎಎಪಿ ಹವಣಿಸುತ್ತಿದ್ದು, ಶತಾಯ ಗತಾಯ ಈ ಬಾರಿ ಅಧಿಕಾರಕ್ಕೇರಬೇಕು ಎಂದು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.

ಇದನ್ನೂ ನೋಡಿ: ಹೆಚ್ಚು ಗಂಟೆ ದುಡಿಮೆ : ಬಂಡವಾಳಿಗರ ಲಾಭಕ್ಕಾಗಿ ಕಾರ್ಮಿಕರ ಶೋಷಣೆ : ಸುಹಾಸ್‌ ಅಡಿಗ ಮತ್ತು ಗುರುರಾಜ ದೇಸಾಯಿ ಮಾತುಕತೆ

Donate Janashakthi Media

Leave a Reply

Your email address will not be published. Required fields are marked *