ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ಇಂದಿನಿಂದ ಹೊಸ ದರಗಳು ಅನ್ವಯ

ಬೆಂಗಳೂರು: ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿದ್ದು, ಇಂದಿನಿಂದಲೇ ಹೊಸ ದರಗಳು ಅನ್ವಯವಾಗಲಿದೆ.  ಮಂಗಳವಾರ ಬೆಳಗ್ಗೆಯೇ ಎಲ್‌ಪಿಜಿ ಸಿಲಿಂಡರ್ ಬೆಲೆ ಹೆಚ್ಚಳ ಮಾಡಲಾಗಿದೆ. ವಾಣಿಜ್ಯ 

ಇಂಧನ ಕಂಪನಿಗಳು 1ನೇ ಅಕ್ಟೋಬರ್ 2024ರಿಂದಲೇ  ಬೆಲೆಯನ್ನು ಹೆಚ್ಚಳ ಮಾಡಿಕೊಂಡಿವೆ. ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಮಾತ್ರ ಏರಿಕೆಯಾಗಿದೆ. ಗೃಹ ಬಳಕೆಯ 14 ಕೆಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಐಓಸಿಎಲ್ ವೆಬ್‌ಸೈಟ್ ಪ್ರಕಾರ, 19 ಕೆಜಿ ಸಿಲಿಂಡರ್‌ನ ಹೊಸ ಬೆಲೆಗಳು ಇಂದಿನಿಂದ ಅನ್ವಯವಾಗಲಿವೆ. ಆದ್ರೆ ಬೆಲೆಗಳು ನಗರದಿಂದ ನಗರಕ್ಕೆ ವ್ಯತ್ಯಾಸವಾಗಿರುತ್ತವೆ. ದೆಹಲಿಯಿಂದ ಮುಂಬೈನವರೆಗೂ ಬೆಲೆಗಳು ಭಿನ್ನವಾಗಿರುತ್ತವೆ. ಮುಂಬೈನಲ್ಲಿ 1644 ರೂಪಾಯಿಯಿದ್ದ 19 ಕೆಜಿ ಸಿಲಿಂಡರ್ ಬೆಲೆ ಇದೀಗ 1,692.50 ರೂ ಆಗಿದೆ. ಸೆಪ್ಟೆಂಬರ್‌ನಲ್ಲಿ 39 ರೂ.ಗಳಷ್ಟು ಏರಿಕೆಯಾಗಿತ್ತು.

ಇದನ್ನು ಓದಿ : ಮೂಲಸೌಕರ್ಯದ ಕೊರತೆಯನ್ನು ನೀಗಿಸಲು ಬಿಬಿಎಂಪಿ ಯೋಜನೆ: ₹ 39,000 ಕೋಟಿ ಸಾಲ ಪಡೆಯಲು ಅನುಮತಿ ಕೋರಿ ಪತ್ರ

ಕೋಲ್ಕತ್ತಾದಲ್ಲಿ 1,802.50 ರೂ.ನಿಂದ 1,850.50 ರೂ.ಆಗಿದೆ. ಚೆನ್ನೈನಲ್ಲಿ 1,855 ರೂ.ಯಿದ್ದ 19 ಕೆಜಿ ಸಿಲಿಂಡರ್ ಬೆಲೆ 1,903 ರೂ.ಆಗಿದೆ. ಬೆಂಗಳೂರಿನಲ್ಲಿಯೂ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ 48 ರೂಪಾಯಿ ಏರಿಕೆಯಾಗಿದೆ. ಸದ್ಯ 19 ಕೆಜಿ ಸಿಲಿಂಡರ್ ಬೆಲೆ 1,818 ರೂಪಾಯಿ ಆಗಿದೆ.

ಜುಲೈ-2024 ನಂತರ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಜುಲೈನಲ್ಲಿ ಆಯಿಲ್ ಮಾರ್ಕೆಟಿಂಗ್ ಕಂಪನಿಗಳು ಬೆಲೆಗಳನ್ನು ಕೊಂಚ ಇಳಿಕೆ ಮಾಡಿಕೊಂಡಿದ್ದವು. ದೇಶದ ರಾಜಧಾನಿ ದೆಹಲಿಯಲ್ಲಿ 30 ರೂಪಾಯಿವರೆಗೂ ಇಳಿಕೆಯಾಗಿತ್ತು. ಆದರೆ ಆಗಸ್ಟ್‌ನಲ್ಲಿ 8.50 ರೂಪಾಯಿ ಏರಿಕೆಯಾಗಿತ್ತು. ನಂತರ ಇದೀಗ ಮೂರು ತಿಂಗಳು ಸೇರಿ ಒಟ್ಟು 39 ರೂಪಾಯಿ ಬೆಲೆ ಏರಿಕೆಯಾಗಿದೆ.

19 ಕೆಜಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ ನಿರಂತರ ಬದಲಾವಣೆಯಾಗುತ್ತಿದ್ದರೆ, ಮತ್ತೊಂದೆಡೆ, ತೈಲ ಮಾರುಕಟ್ಟೆ ಕಂಪನಿಗಳು ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಮಾತ್ರ ಸ್ಥಿರವಾಗಿದೆ. ಮಹಿಳಾ ದಿನಾಚರಣೆಯಂದು ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಸುವ ಮೂಲಕ ಕೇಂದ್ರ ಸರ್ಕಾರ ಬಿಗ್ ರಿಲೀಫ್ ನೀಡಿತ್ತು. ಸದ್ಯ ಗೃಹ ಬಳಕೆಯ 14 ಕೆಜಿ ಎಲ್‌ಪಿಜಿ ಒಂದು ಸಿಲಿಂಡರ್ ಬೆಲೆ ದೆಹಲಿಯಲ್ಲಿ 803 ರೂ., ಕೋಲ್ಕತ್ತಾದಲ್ಲಿ 829 ರೂ., ಮುಂಬೈನಲ್ಲಿ 802.50 ರೂ. ಮತ್ತು ಚೆನ್ನೈನಲ್ಲಿ 818.50 ರೂ. ಮತ್ತು ಬೆಂಗಳೂರಿನಲ್ಲಿ 805.50 ರೂಪಾಯಿ ಆಗಿದೆ.

ಇದನ್ನು ನೋಡಿ : ಸಾಹಿತ್ಯ ಮತ್ತು ಸೌಹಾರ್ದತೆ – ಡಾ. ನಾಗಭೂಷಣ್‌ ಬಗ್ಗನಡುJanashakthi Media

Donate Janashakthi Media

Leave a Reply

Your email address will not be published. Required fields are marked *