ದೆಹಲಿ: ಅಡುಗೆ ಅನಿಲ (ಎಲ್‌ಪಿಜಿ) ಸಿಲಿಂಡರ್‌ಗಳಿಗೆ ನೀಡಲಾಗುತ್ತಿದ್ದ ಸಬ್ಸಿಡಿಯನ್ನು ಇನ್ನು ಮುಂದೆ ಜನರ ಖಾತೆಯಲ್ಲಿ ಜಮೆ ಆಗುವುದಿಲ್ಲ. ಎಲ್‌ಪಿಜಿ ಸಿಲಿಂಡರ್‌ಗಳಿಗೆ ನೀಡಲಾಗುತ್ತಿದ್ದ ಸಬ್ಸಿಡಿಯನ್ನು ಕೇಂದ್ರ ಸರಕಾರ ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ.
ಜಾಗತಿಕ ಮಟ್ಟದಲ್ಲಿ ತೈಲ ದರ ಕುಸಿತ ಹಾಗೂ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರದಲ್ಲಿನ ನಿಯಮಿತ ಏರಿಕೆಯಿಂದಾಗಿ ಎಲ್‌ಪಿಜಿ ದರವು ಮಾರುಕಟ್ಟೆ ದರಕ್ಕೆ ಸಮವಾಗಿರುವ ಕಾರಣ ಎಲ್‌ಪಿಜಿ ಸಬ್ಸಿಡಿಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.
ಇನ್ನು ಮುಂದೆ ಸಬ್ಸಿಡಿ ಸಿಲಿಂಡರ್ ನಾನ್ ಸಬ್ಸಿಡಿ ಸಿಲಿಂಡರ್ ಯಾವ ಸಿಲಿಂಡರ್ ಪಡೆದರೂ ಏಕರೂಪದ ಬೆಲೆ ಪಾವತಿಸಬೇಕು.
ಈ ನಿಯಮ ಸೆಪ್ಟೆಂಬರ್ 1 ರಿಂದಲೇ ಜಾರಿಗೆ ಬಂದಿದ್ದು, ಸರ್ಕಾರವು ನೇರ ಲಾಭ ವರ್ಗಾವಣೆ ಯೋಜನೆ (ಡಿಬಿಟಿ) ಅಡಿ ಫಲಾನುಭವಿಗಳ ಖಾತೆಗೆ ಸಬ್ಸಿಡಿಯನ್ನು ಪಾವತಿಸುವುದಿಲ್ಲ ಎಂದು ಸರಕಾರ ತಿಳಿಸಿದೆ.