ಲಖನೌ| ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆಯನ್ನು ಧ್ವಂಸಗೊಳಿಸಿದ ಕಿಡಿಗೇಡಿಗಳು

ಖನೌ: ಕಿಡಿಗೇಡಿಗಳು ಉತ್ತರ ಪ್ರದೇಶದ ವಾರಣಾಸಿ ಜಿಲ್ಲೆಯಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಸೋಮವಾರ ತಡರಾತ್ರಿ ವಾರಣಾಸಿಯ ಲಚ್ಚಿರಾಂಪುರ ಗ್ರಾಮದ ಅಂಬೇಡ್ಕರ್ ಪ್ರತಿಮೆಗೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮಂಗಳೂರು ನಗರ ಪಾಲಿಕೆ ಆಯುಕ್ತರ ಮೇಲೆ ಭ್ರಷ್ಟಾಚಾರದ ಗಂಭೀರ ಆರೋಪ : ವಿಶೇಷ ತನಿಖಾ ತಂಡ ರಚನೆಗೆ ಸಿಪಿಐ(ಎಂ) ಒತ್ತಾಯ

ಈ ಘಟನೆ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ನೋಡಿ: ಐಸಿಡಿಎಸ್ 50| ಅಂಗನವಾಡಿ ಬಲಗೊಳಿಸಲು ಹುಟ್ಟಿದ ಸಂಘಟನೆ ಐಫ್ಹಾ (AIFAWH-35) Janashakthi Media

Donate Janashakthi Media

Leave a Reply

Your email address will not be published. Required fields are marked *