ಎಂ.ಬಿ‌. ಪಾಟೀಲರ ಹೇಳಿಕೆ ಒಡೆದಾಳುವ ತಂತ್ರವಲ್ಲದೆ ಮತ್ತೇನೂ ಅಲ್ಲ – ಸಂಯುಕ್ತ ಹೋರಾಟ ಕರ್ನಾಟಕ

ಬಲವಂತದ ಭೂ ಸ್ವಾಧೀನಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ; ಕೆಎಐಡಿಬಿ ಭೂ ಸ್ವಾಧೀನ ಸಂಪೂರ್ಣ ರದ್ದಾಗದೆ ಹೋರಾಟ ನಿಲ್ಲುವುದಿಲ್ಲ
ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿ ಹದಿಮೂರು ಗ್ರಾಮಗಳ ಸುಮಾರು 1777 ಎಕರೆ ಪೂರ್ಣ ಭೂ ಸ್ವಾಧೀನ ದಿಂದ ಕೈ ಬಿಡಬೇಕು ಎಂದು ಆಗ್ರಹಿಸಿ ಜೂನ್‌ 25ರಂದು ಹಮ್ಮಿಕೊಂಡಿರುವ ದೇವನಹಳ್ಳಿ ಚಲೋ ವನ್ನು ದಿಕ್ಕು ತಪ್ಪಿಸಲು ರಾಜ್ಯ ಸರ್ಕಾರ ಒಡೆದು ಆಳುವ ತಂತ್ರವನ್ನು ಅನುಸರಿಸುತ್ತಿದೆ ಎಂದು  ಸಂಯುಕ್ತ ಹೋರಾಟ ಕರ್ನಾಟಕ ಆರೋಪಿಸಿದೆ.ಹೇಳಿಕೆ

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ನಾಯಕರು,  13 ಹಳ್ಳಿಗಳ ಪೈಕಿ 3 ಹಳ್ಳಿಯ ಐದುನೂರು ಎಕರೆ ಭೂಮಿಯನ್ನು ಭೂ ಸ್ವಾಧೀನದಿಂದ ಕೈ ಬಿಡುತ್ತೇವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲರು ಜೂನ್‌ 24ರಂದು ಹೇಳಿಕೆ ನೀಡಿದ್ದಾರೆ. ಇಂತಹ ಒಡೆದಾಳುವ ಕುಟಿಲ ಕುತಂತ್ರವನ್ನು ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ಸಂಪೂರ್ಣವಾಗಿ ತಿರಸ್ಕರಿಸಿದೆ. ನಾಳೆ ದೇವನ ಹಳ್ಳಿ ಚಲೋ ಹೋರಾಟ ದೊಡ್ಡ ಮಟ್ಟದಲ್ಲಿ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಹೇಳಿಕೆ

ಇದನ್ನೂ ಓದಿ: ಬ್ರಾಂಡ್ ಬೆಂಗಳೂರಿನಲ್ಲಿ ಬಡವರಿಗೆ ಜಾಗವಿಲ್ಲವೆ? ಬೀದಿ ವ್ಯಾಪಾರಿಗಳ ಎತ್ತಂಗಡಿ ನಿಲ್ಲಿಸಿ!

ಚನ್ನರಾಯಪಟ್ಟಣ ಹೋಬಳಿಯ ಭೂ ಸ್ವಾಧೀನ ವು ಕರಾಳ ಕೆಎಐಡಿಬಿ ಭೂ ಸ್ವಾಧೀನ ಪ್ರಕಾರ ನಡೆಸಲಾಗುತ್ತಿದೆ. ಇಂತಹ ಅನ್ಯಾಯದ ಭೂ ಸ್ವಾಧೀನವು,
ಭೂ ಸ್ವಾಧೀನ ಕಾಯ್ದೆ 2013 ರ ಕಾಯ್ದೆಗೆ ವಿರುದ್ದವಾಗಿದೆ. ಕರಾಳ ಕೆಎಐಡಿಬಿ ಭೂ ಸ್ವಾಧೀನ ಕಾಯ್ದೆ ಪ್ರಕಾರ ಹಿಂದಿನ ಬಿಜೆಪಿ ಸರ್ಕಾರ ರೈತರ ವಿರೋಧ ಧಿಕ್ಕರಿಸಿ ಪ್ರಾಥಮಿಕ ಅಧಿಸೂಚನೆ ಹೊರಡಿಸಿತ್ತು. ಇದನ್ನು ವಿರೋಧಿಸಿ ರೈತರು ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ಅನಿರ್ದಿಷ್ಟವಾಧಿ ಹೋರಾಟ ನಡೆಸುತ್ತಾ ಬಂದಿದ್ದಾರೆ.

ಹಿಂದೆ ವಿರೋಧ ಪಕ್ಷದ ನಾಯಕರಾಗಿ ಧರಣಿ ಸ್ಥಳಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ತಾನು ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಭೂ ಸ್ವಾಧೀನ ಪ್ರಕಟಣೆ ರದ್ದುಪಡಿಸಲಾಗುವುದು ಎಂದು ಭರವಸೆ ನೀಡಿದ್ದರು ಆದರೆ ಭೂ ಸ್ವಾಧೀನ ಕ್ಕೆ ಹಠ ಮಾರಿ ಧೋರಣೆ ಅನುಸರಿಸುತ್ತಾ ಒಡೆದು ಆಳುವ ತಂತ್ರವನ್ನು ಅನುಸರಿಸುತ್ತಿದೆ. ಈ ಕುಟಿಲ ತಂತ್ರದಿಂದ ರೈತ ಹೋರಾಟ ಬಗ್ಗು ಬಡಿಯಲು ಸಾಧ್ಯವಿಲ್ಲ .

ಜೂನ್‌ 25ರಂದು ದೇವನಹಳ್ಳಿ ತಹಶಿಲ್ದಾರ್ ಕಛೇರಿ ಎದುರು ನಡೆಯುತ್ತಿರುವ ಭೂ ಸ್ವಾಧೀನ ವಿರೋಧಿ ಹೋರಾಟ ಕ್ಕೆ ಎಲ್ಲಾ ಭೂ ಸ್ವಾಧೀನ ವಿರೋಧಿ ಹೋರಾಟಗಾರರು, ರೈತರು, ಕಾರ್ಮಿಕರು ವಿದ್ಯಾರ್ಥಿ ಯುವಜನ ಮಹಿಳೆಯರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮತ್ತೊಮ್ಮೆ ಮನವಿ ಮಾಡುತ್ತದೆ.

ಶೇಕಡಾ 90ಕ್ಕಿಂತ ಹೆಚ್ಚು ರೈತರು ವಿರೋಧ ದಾಖಲಿಸಿರುವ ಈ ಅನ್ಯಾಯದ ಭೂ ಸ್ವಾಧೀನ ಮಾಡಿಕೊಳ್ಳಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಮುಖ್ಯಮಂತ್ರಿಗಳು ತಮ್ಮ ಭರವಸೆಯಂತೆ ನಡೆದುಕೊಳ್ಳಬೇಕು ಎಂದು ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ಹಾಗೂ ಸಂಯುಕ್ತ ಹೋರಾಟ ಕರ್ನಾಟಕ ಸಂಯೋಜಕರಾದ ಬಡಗಲಪುರ ನಾಗೇಂದ್ರ, ಟಿ ಯಶವಂತ, ನೂರ್ ಶ್ರೀಧರ್, ಕಾರಹಳ್ಳಿ ಶ್ರೀನಿವಾಸ್, ಚಂದ್ರ ತೇಜಸ್ವಿ, ನಂಜಪ್ಪ,  ಪ್ರಭಾ ಎನ್ ಬೆಳವಂಗಲ, ರಮೇಶ್ ಚೀಮಾಚನಹಳ್ಳಿ, ರಘು ನಾಯಕನಹಳ್ಳಿ ಸೇರಿದಂತೆ ಅನೇಕರು ಆಗ್ರಹಿಸಿದ್ದಾರೆ.

ಇದನ್ನೂ ನೋಡಿ: ಭೂಸ್ವಾಧೀನ ವಿರೋಧಿಸಿ ‘ಸಂಯುಕ್ತ ಹೋರಾಟ’ದಿಂದ ‘ದೇವನಹಳ್ಳಿ ಚಲೋJanashakthi Media

Donate Janashakthi Media

Leave a Reply

Your email address will not be published. Required fields are marked *