ಬೆಂಗಳೂರು| ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಎಂ.ಕೆ. ಸ್ಟಾಲಿನ್‌ ಪತ್ರ

ಬೆಂಗಳೂರು: ಲೋಕಸಭಾ ಕ್ಷೇತ್ರ ಮರುವಿಂಗಡಣೆಯನ್ನು ತೀವ್ರವಾಗಿ ವಿರೋಧಿಸುತ್ತಿರುವ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್‌, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಇದಕ್ಕೆ ಬೆಂಬಲಯಾಚಿಸುವ ಸಲುವಾಗಿ ಪತ್ರ ಬರೆದಿದ್ದಾರೆ. ಲೋಕಸಭಾ ಕ್ಷೇತ್ರ ಮರುವಿಂಗಡಣೆ ವಿರುದ್ಧವಾಗಿ ಮಾರ್ಚ್ 22ರಂದು ನಡೆಯುವ ಸಭೆಗೆ ಬರುವಂತೆ ಪತ್ರದ ಮೂಲಕ ಸಿದ್ದರಾಮಯ್ಯನವರಿಗೆ ಆಹ್ವಾನ ನೀಡಿದ್ದಾರೆ. ಬೆಂಗಳೂರು

ಎನ್‌ಡಿಎಯೇತರರ ಆಡಳಿತವಿರುವ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಸಭೆಗೆ ಆಹ್ವಾನಿಸಿದ್ದಾರೆ. ಬೆಂಗಳೂರು

ಮಾರ್ಚ್ 22ರಂದು ತಮಿಳುನಾಡಿನಲ್ಲಿ ನಡೆಯಲಿರುವ ಸಭೆಗೆ ದಕ್ಷಿಣ ಭಾರತದ ಸುಮಾರು 7 ರಾಜ್ಯಗಳ ಸಿಎಂ ಸಭೆಯಲ್ಲಿ ಭಾಗಿಯಾಗಲಿದ್ದು, ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಹಿಂದಿ ಹೇರಿಕೆ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆ ಕುರಿತು ಸಭೆ ನಡೆಸಲು ನಿರ್ಧರಿಸಲಾಗಿದೆ. ಈಗಾಗಲೇ ಸಭೆಗೆ ಬರುವಂತೆ ಆಹ್ವಾನ ನೀಡಲು ಆಗಮಿಸಿದ್ದ ಸ್ಟಾಲಿನ್ ಅವರು ತಮ್ಮ ಸಚಿವರ ನಿಯೋಗವನ್ನು ಕರ್ನಾಟಕ ಸೇರಿ 7 ರಾಜ್ಯಗಳಿಗೆ ತಮ್ಮ ನಾಯಕರನ್ನು ಕಳುಹಿಸಿ ಆಹ್ವಾನ ಕೊಡಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಖುದ್ದು ತಾವು ಸಹ ಸಿಎಂಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಹೋಳಿಯನ್ನು ಶಾಂತಿಯುತವಾಗಿ ಆಚರಿಸಲು ಅನುವಾಗುವಂತೆ ಕೇಂದ್ರ ಸರಕಾರ ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕು-ಸಿಪಿಐ(ಎಂ) ಪೊಲಿಟ್‌ಬ್ಯುರೊ

ತಮಿಳುನಾಡು, ಕೇರಳ, ಕರ್ನಾಟಕ, ಪುದುಚೆರಿ, ತೆಲಂಗಾಣ, ಆಂಧ್ರ ಪ್ರದೇಶ, ಪಂಜಾಬ್, ಪಶ್ಚಿಮ ಬಂಗಾಳ ರಾಜ್ಯದ ಪ್ರತಿನಿಧಿಗಳು ಈ ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಇನ್ನು ಕರ್ನಾಟಕದ ಪರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

ಡಿಕೆ ಶಿವಕುಮಾರ್ ಹೇಳಿದ್ದಿಷ್ಟು

ಇನ್ನು ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್, ತಮಿಳುನಾಡು ಸಚಿವ ಪೊನ್ನ ಮುಡಿ ಮತ್ತು ಅಬ್ದುಲ್ಲಾ ಭೇಟಿಯಾಗಿದ್ದು, ಲೋಕಸಭಾ ಕ್ಷೇತ್ರಗಳ ಪುನರ್​ವಿಂಗಡಣೆ ಮೂಲಕ ಸೀಟು ಕಡಿಮೆ ಮಾಡುವ ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಹೀಗಾಗಿ ಈ ಸಂಬಂಧ ಚರ್ಚಿಸಲು ಮಾರ್ಚ್​ 22ರಂದು ನಡೆಯುವ ಸಭೆಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಸಭೆಗೆ ಬರುವಂತೆ ನಮಗೂ, ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ್ದಾರೆ. ಪಕ್ಷದ ವರಿಷ್ಠರ ಜೊತೆ ಮಾತನಾಡಿ ಎಂದು ಹೇಳಿದ್ದೇನೆ. ನಾವು ಕೂಡ ಈ ವಿಚಾರವನ್ನು ಹೈಕಮಾಂಡ್​​​​ ಗಮನಕ್ಕೆ ತರುತ್ತೇವೆ ಎಂದು ಹೇಳಿದರು.

ಜನಸಂಖ್ಯೆ ಆಧಾರದಲ್ಲಿ ಕ್ಷೇತ್ರಗಳ ಮರುವಿಂಗಡಣೆಯಿಂದಾಗಿ ತಮಿಳುನಾಡು ಸೇರಿ, ಕುಟುಂಬ ಯೋಜನೆಯನ್ನು ಕಟ್ಟುನಿಟ್ಟಾಗಿ ಪಾಲಿಸಿದ ರಾಜ್ಯಗಳ ಲೋಕಸಭಾ ಸ್ಥಾನಗಳು ಕಡಿಮೆಯಾಗಿ ಅನ್ಯಾಯವಾಗುತ್ತದೆ ಎಂದು ಡಿಎಂಕೆ ಆರೋಪಿಸುತ್ತಿದೆ. ಇನ್ನು ಈ ಕ್ಷೇತ್ರಗಳ ಮರುವಿಂಗಡಣೆ ಬಗ್ಗೆಯೂ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಖಂಡಿಸಿದ್ದರು.

ಇದನ್ನೂ ನೋಡಿ: LIVE: ಜನಚಳುವಳಿಗಳ ಬಜೆಟ್‌ ಅಧಿವೇಶನ |2ನೇ ದಿನ

Donate Janashakthi Media

Leave a Reply

Your email address will not be published. Required fields are marked *