ಬೆಂಗಳೂರು: ಜೆಡಿಎಸ್ ಪಕ್ಷದ ಮಾಜಿ ಶಾಸಕ ಹಾಗೂ ವಕ್ತಾರರಾಗಿದ್ದ ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿದರು.
ಇಂದು ಬೆಳಿಗ್ಗೆ ವಿರೋಧ ಪಕ್ಷದ ನಾಯ ಸಿದ್ಧರಾಮಯ್ಯನವರನ್ನು ಭೇಟಿ ಮಾಡಿದ ಮಧು ಬಂಗಾರಪ್ಪರವರು ಸುಧೀರ್ಘವಾಗಿ ಮಾತುಕತೆ ನಡೆಸಿದರು.
ದೇಶಕ್ಕೆ ಕಾಂಗ್ರೆಸ್ ಪಕ್ಷದ ಅಗತ್ಯವಿದೆ. ಜೆಡಿಎಸ್ ಮುಖಂಡ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ನನಗೆ ವೈಯುಕ್ತಿಕ ಗೌರವಿದೆ. ಕಾಂಗ್ರೆಸ್ ಪಕ್ಷ ನನಗೆ ನೀಡುವ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ. ಜೆಡಿಎಸ್‌ನಲ್ಲಿ ಅಧಿಕಾರ ಅನುಭವಿಸಲು ಆಗಲಿಲ್ಲ. ಕಾಂಗ್ರೆಸ್‌ನಲ್ಲಿ ದೊಡ್ಡ ಮಟ್ಟದಲ್ಲಿ ಬೆಳೆಯಲು ಸಾಕಷ್ಟು ಅವಕಾಶಗಳು ನನಗಿದೆ. ಎಂದು ಮಧು ಬಂಗಾರಪ್ಪ ತಿಳಿಸಿದರು.
ಕಾಂಗ್ರೆಸ್ ಪಕ್ಷ ಸೇರಲು ನಿರ್ಧರಿಸಿರುವ ಮಧು ಬಂಗಾರಪ್ಪ ಅವರು ಇಂದು ನನ್ನನ್ನು ಭೇಟಿಮಾಡಿ ಮಾತುಕತೆ ನಡೆಸಿದರು. pic.twitter.com/9Mid1pbYRZ
— Siddaramaiah (@siddaramaiah) March 11, 2021
ಏಪ್ರಿಲ್ 13ರಂದು ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಮೇಲೆ ಹಾಕಲಾದ ಪ್ರಕರಣ ಖಂಡಿಸಿ ಕಾಂಗ್ರೆಸ್ ಪಕ್ಷ ಶಿವಮೊಗ್ಗ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದಕ್ಕೂ ಈ ಹಿಂದೆ ಶಾಸಕರಾಗಿ ಕಾರ್ಯನಿರ್ವಹಿಸಿದ ಸೊರಬ ಕ್ಷೇತ್ರದಲಿ ಏಪ್ರಿಲ್ ದೊಡ್ಡ ಸಮಾವೇಶವನ್ನು ಹಮ್ಮಿಕೊಳ್ಳುವ ಮೂಲಕ ಅಧಿಕೃತವಾಗಿ ಕಾಂಗ್ರೆಸ್‌ಗೆ ಸೇರ್ಪಡೆಯಾಗುವ ಬಗ್ಗೆ ತಿಳಿಸಿದರು.
ಇಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯರವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವೆ. ನಮ್ಮ ತಂದೆಯೂ ದೊಡ್ಡ ರಾಜಕಾರಣಿಯಾಗಿ, ಮುಖ್ಯಂತ್ರಿಯಾಗಿ ಅಧಿಕಾರ ನಡೆಸಿದ್ದವರು. ಕಾಂಗ್ರೆಸ್‌ನಲ್ಲಿ ಸಿದ್ಧರಾಮಯ್ಯರವರು ಸಹ ಹಿರಿಯ ನಾಯಕರು ಹಾಗೂ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದವರು. ಹಾಗಾಗಿ ಅವರನ್ನು ಭೇಟಿ ಮಾಡಿದೆ ಎಂದು ಹೇಳಿದರು.
ನಾಳೆ ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರನ್ ಭೇಟಿ ಮಾಡಲಿದ್ದೇನೆ ಎಂದು ತಿಳಿಸಿದರು.