ತುಮಕೂರು: ಮಹಿಳೆಯ ಮೇಲೆ ತಮ್ಮ ಕಚೇರಿಯಲ್ಲೇ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪ ಎದುರಿಸುತ್ತಿದ್ದ ಮಧುಗಿರಿ ಡಿವೈಎಸ್‌ಪಿ ಎ. ರಾಮಚಂದ್ರಪ್ಪ ರನ್ನು ಪೊಲೀಸರು ಬಂಧಿಸಿದ್ದಾರೆ. ದೌರ್ಜನ್ಯ
ಮಧುಗಿರಿ ಪೊಲೀಸ್ ಠಾಣೆಯಲ್ಲಿ ಮಹಿಳೆ ನೀಡಿದ ದೂರಿನ ಮೇರೆಗೆ ಸೆಕ್ಸನ್ 68, 75, 79 ಅತ್ಯಾಚಾರ ಕೇಸ್ ಅಡಿಯಲ್ಲಿ ದೂರು ದಾಖಲಾಗಿದ್ದು, ಈ ದೂರಿನ ಮೇರೆಗೆ ಇದೀಗ ಮಧುಗಿರಿ ಉಪವಿಭಾಗ ದಿವೈಎಸ್ ಪಿ ರಾಮಚಂದ್ರಪ್ಪನನ್ನು ಅರಸ್ ಮಾಡಲಾಗಿದೆ. ದೌರ್ಜನ್ಯ
ಮಧುಗಿರಿ ಪೊಲೀಸ್ ಠಾಣೆಯಲ್ಲಿ ಸ್ಥಳೀಯ ಮಹಿಳೆಯೊಬ್ಬರು ತಮ್ಮ ಜಮೀನಿನ ಕುರಿತಾಗಿ ವ್ಯಾಜ್ಯ ಆರಂಭವಾಗಿದ್ದು, ನೀವು ನಮಗೆ ನ್ಯಾಯ ಕೊಡಿಸಬೇಕು ಎಂದು ಮಹಿಳೆ ದೂರು ನೀಡಿದ್ದರು. ಆಗ ಮಹಿಳೆಗೆ ನಿಮಗೆ ವ್ಯಾಯ ಕೊಡಿಸುವುದಾಗಿ ಭರವಸೆ ನೀಡಿ ಧನಾತ್ಮಕವಾಗಿ ಮಾತನಾಡಿದ್ದ ಡಿವೈಎಸ್‌ಪಿ ರಾಮಚಂದ್ರಕ್ಕೆ ನಾವು ವಿಚಾರಣೆಗೆ ಕರೆದಾಗ ಪೊಲೀಸ್ ಠಾಣೆಗೆ ಬರಬೇಕು. ನಾವು ಕೇಳಿದಾಗ ನೀವು ಮಾಹಿತಿ ಕೊಡಬೇಕು ಎಂದು ಹೇಳಿರುತ್ತಾರೆ. ಇದಕ್ಕೆ ಮಹಿಳೆಯೂ ಒಪ್ಪಿಕೊಂಡಿದ್ದಾರೆ.
ಇದನ್ನೂ ಓದಿ: ಬೆಂಗಳೂರು| 2023, 2024ನೇ ಸಾಲಿನ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಕಟ
ಬಳಿಕ ಈ ಸಂಬಂಧ ಮಹಿಳೆಯೊಂದಿಗೆ ಮಾತುಕತೆ ನಡೆಸಬೇಕು ಕೆಲವು ವಿಚಾರಣೆ ಮಾಡಬೇಕು ಎಂದು ಡಿವೈಎಸ್ ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನು ಪುಸಲಾಯಿಸಿರುವ ಡಿವೈಎಸ್‌ಪಿ ರಾಮಚಂದ್ರನ್ನ ದೂರು ಕೊಡಲು ಬಂದ ಮಹಿಳೆಯನ್ನ ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ.
ತನಗೆ ನ್ಯಾಯ ಸಿಗಬೇಕಾದರೆ ಇಂಥ ಕೆಲಸವನ್ನೂ ಮಾಡಬೇಕು ಎಂದು ಮಹಿಳ ಡಿವೈಎಸ್‌ಪಿಯ ಕಾಮಕೃಷೆ ತೀರಿಸಲು ಮುಂದಾಗಿದ್ದಾಳ ಇದಾದ ನಂತರ ಡಿವೈಎಸ್‌ಪಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋದ ರಾಮಚಂದ್ರಪ್ಪ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ್ದಾರೆ.
ಆದರೆ, ಡಿವೈಎಸ್‌ಪಿ ರಾಮಚಂದ್ರಪ್ಪನ ರಾಸಲೀಲೆಯ ದೃಶ್ಯ ಯಾರೋ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲಿ ಮಹಿಳೆಯೊಂದಿಗೆ ಬಲವಂತವಾಗಿ ನಡೆದುಕೊಳ್ಳುತ್ತಿದ್ದ ದೃಶ್ಯಗಳು ಸೆರೆ ಸಿಕ್ಕಿವೆ. ಇದೀಗ ರಾಸಲೀಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶುಕ್ರವಾರ ರಾತ್ರಿ ಬಂಧಿಸಲಾಗಿದೆ.
ಆರಂಭಿಕ ಪ್ರಕ್ರಿಯೆ ಮುಗಿದ ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ತಿಳಿಸಿದ್ದಾರೆ.ಈ ಬಗ್ಗೆ ಜಿಲ್ಲೆಯ ವಿವಿಧೆಡೆ ಪ್ರತಿಭಟನೆಗಳು ನಡೆದು, ಡಿವೈಎಸ್‌ಪಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿತ್ತು. ಸಾಮಾಜಿಕ ಜಾಲತಾಣದಲ್ಲೂ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು.
ಇದನ್ನೂ ನೋಡಿ: ಸೈಬರ್ ಕಳ್ಳರ ಬಗ್ಗೆ ಎಚ್ಚರವಿರಲಿ Janashakthi Media #Cybercrime #Cyberfraud #CyberPolice