ಮಹದಾಯಿ ಯೋಜನೆ ಬಗ್ಗೆ ಸಮಜಾಯಿಷಿ | ರೈತರು ತಿರುಗೇಟು! ಪೇಚಿಗೆ ಸಿಲುಕಿದ ಕೇಂದ್ರ ಸಚಿವ!!

ಹುಬ್ಬಳ್ಳಿ, : ಮಹದಾಯಿ ಯೋಜನೆಯ ಜಾರಿಗಾಗಿ ರೈತರು ಮಾಡಿರುವ ನಿರಂತರ ಹೋರಾಟದ ನಡುವೆಯೂ ಕೇಂದ್ರದಿಂದ ಅನುಮತಿ ಸಿಕ್ಕಲ್ಲ ಎಂದು ಹೇಳಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ರೈತರು ತರಾಟೆಗೆ ತೆಗೆದುಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಕರ್ನಾಟಕದ ಮಹದಾಯಿ ಯೋಜನೆಗೆ ಅನುಮತಿ ಕೊಡದ ರಾಷ್ಟ್ರೀಯ ವನ್ಯಜೀವಿ ಮಂಡಳಿ ಕರ್ನಾಟಕದ 435 ಎಕರೆ ಅರಣ್ಯ ಬಳಕೆಯಾಗುವ ಗೋವಾ- ತಮ್ನಾರ್ 400 ಕೆ.ವಿ. ವಿದ್ಯುತ್ ಮಾರ್ಗಕ್ಕೆ ಷರತ್ತು ಬದ್ಧ ಒಪ್ಪಿಗೆ ನೀಡಿದಕ್ಕೆ ರೈತರು ಅಸಮಾಧಾನ ವ್ಯಕ್ತಪಡಿಸಿದರು.

ನಗರದ ಮಯೂರ ಗಾರ್ಡನ್ ನಲ್ಲಿರುವ ಗೃಹ ಕಚೇರಿಯಿಂದ ಹೊರಬರುತ್ತಿದ್ದಂತೆ ಸಿಟ್ಟಿನಿಂದಲೇ ರೈತರು ಸಚಿವರನ್ನ ತರಾಟೆಗೆ ತೆಗೆದುಕೊಂಡರು. “ಗೋವಾದ ಹೆಚ್ಚುವರಿ ವಿದ್ಯುತ್ ಮಾರ್ಗ ಯೋಜನೆಗೆ ರಾಜ್ಯದ ಕಾಡು ಒದಗಿಸುವ ಯೋಜನೆಗೆ ವಿರೋಧ ಇದೆ. ಹೀಗಿದ್ದರೂ ವನ್ಯಜೀವಿ ಮಂಡಳಿಯ ತೀರ್ಮಾನವು ರಾಜ್ಯಕ್ಕೆ ಕಹಿಯಾಗಿದ್ದರೆ, ಗೋವಾಕ್ಕೆ ಸಿಹಿಯಾಗಿದೆ. ಗೋವಾ ವಿದ್ಯುತ್ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ಕೊಡಿಸಿದ್ರೆ, ಮಹದಾಯಿಯ ಕಳಸಾ ನಾಲಾ ತಿರುವು ಯೋಜನೆಗೆ ವನ್ಯಜೀವಿ ಅನುಮೋದನೆ ನೀಡಲು ರಾಷ್ಟ್ರೀಯ ವನ್ಯಜೀವಿ ಮಂಡಳಿ ಮತ್ತೆ ನಿರಾಕರಿಸಿದೆ ಯಾಕೆ ಎಂದು ರೈತರು ಆಕ್ರೋಶವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜೋಷಿಯವರು ಒಂದಿಷ್ಟು ಸಮಜಾಯಿಷಿ ವಿವರಣೆ ಕೊಟ್ಟರೂ ತಲೆಕೆಡೆಸಿಕೊಳ್ಳದ ರೈತರು ಮತ್ತಷ್ಟು ವಾಸ್ತವವನ್ನು ತೆರೆದಿಡುವ ಮೂಲಕ ಸಚಿವರ ಬಾಯಿ ಮುಚ್ಚಿಸಿದರು. ಈ ಸಂದರ್ಭದಲ್ಲಿ ಸಚಿವರು ಸ್ವಲ್ಪ ಪೇಚಿಗೆ ಸಿಲುಕಿದಂತಾಯಿತು.

ಮಹದಾಯಿ ಯೋಜನೆಗೆ ತಕರಾರು ಎತ್ತಿ ಗೋವಾ ಸರ್ಕಾರ ಸುಪ್ರೀಂ ಕೋರ್ಟ್ ಮೊರೆಹೋಗಿರುವ ಕಾರಣ ಅದನ್ನೇ ಮುಂದಿಟ್ಟುಕೊಂಡು ಕಳಸಾ ನಾಲಾ ತಿರುವು ಯೋಜನೆಗೆ ವನ್ಯಜೀವಿ ಅನುಮೋದನೆ ನೀಡಲು ರಾಷ್ಟ್ರೀಯ ವನ್ಯಜೀವಿ ಮಂಡಳಿ ನಿರಾಕರಿಸಿದೆ. ಇದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಿರ್ಲಕ್ಷ್ಯವೇ ಕಾರಣ ಎಂದು ಮಹದಾಯಿ ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ಹಾಗೂ ಹಸಿರು ರೈತ ಸೇನೆ ಆಕ್ರೋಶ ವ್ಯಕ್ತಪಡಿಸಿತು.

ಇದನ್ನೂ ಓದಿಸರ್ಕಾರದಿಂದ ಎಸ್‍ಸಿಎಸ್‍ಪಿ-ಟಿಎಸ್‍ಪಿ ಹಣ ದುರುಪಯೋಗ – ರಾಜಶೇಖರ ಮೂರ್ತಿ ಆರೋಪ

ಕಳಸಾ ಬಂಡೂರಿ ಹಾಗೂ ಮಹದಾಯಿ, ಕಳಸಾ-ಬಂಡೂರಿ ಯೋಜನೆಗೆಗಾಗಿ ಉತ್ತರ ಕರ್ನಾಟಕ ಭಾಗದ ನಾಲ್ಕು ಜಿಲ್ಲೆಯ 11 ತಾಲೂಕಿನ ರೈತರು ಸತತ 44 ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದ್ದಾರೆ. ಇದರ ಪ್ರತಿಫಲವಾಗಿ ಅನ್ನದಾತರಿಗೆ ಸಿಕ್ಕಿದ್ದು ಲಾಠಿ ಏಟು, ಜೈಲಿನ ಊಟ. ಮಹದಾಯಿ ನೀರು ಮಾತ್ರ ಸಿಕ್ಕಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ವನ್ಯಜೀವಿ ಮಂಡಳಿ ಅನುಮತಿ ನಿರಾಕರಿಸಿಲ್ಲ. ರಾಷ್ಟ್ರೀಯ ಹುಲಿ ಪ್ರಾಧಿಕಾರ ಯಾವುದೇ ವರದಿ ಕೊಟ್ಟಿಲ್ಲ. ಹೀಗಾಗಿ ವನ್ಯಜೀವಿ ಮಂಡಳಿ ಯಾವುದೇ ನಿರ್ಧಾಕ್ಕೆ ಬಂದಿಲ್ಲ ಎಂದು ರೈತರನ್ನ ಸಮಜಾಯಿಷಿದ್ದಾರೆ‌. ಮಹದಾಯಿ ಯೋಜನೆಗೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಹುಬ್ಬಳ್ಳಿ-ಧಾರವಾಡ, ಸುತ್ತಮುತ್ತಲಿನ ಪಟ್ಟಣಗಳು, ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ ಗುರಿ ಹೊಂದಿರುವ ಈ ಯೋಜನೆಗೆ ಮಹದಾಯಿ ನದಿ ನೀರು ವಿವಾದ ನ್ಯಾಯಮಂಡಳಿಯು 2018ರ ಆಗಸ್ಟ್ 14ರಂದು 3.90 ಟಿಎಂಸಿ ಅಡಿ ನೀರಿನ ಹಂಚಿಕೆ ಮಾಡಿತ್ತು. ಈ ಯೋಜನೆಯ ಅನುಷ್ಠಾನಕ್ಕೆ ಅವಕಾಶ ನೀಡಬಾರದೆಂದು ಆಗ್ರಹಿಸಿ ಗೋವಾ ಫೌಂಡೇಷನ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಈ ಕುರಿತು ವರದಿ ನೀಡುವಂತೆ ಸಿಇಸಿಗೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಈ ಮಹದಾಯಿ ಯೋಜನೆಗೆ 2 ಲಕ್ಷ ಗಿಡ ಕತ್ತರಿಸಬೇಕಾಗುತ್ತದೆ. ಹೀಗಾಗಿ ಅಷ್ಟು ಸಲುಭವಾಗಿ ಇದಕ್ಕೆ ಅನುಮತಿ ಸಿಗಲ್ಲ ಎಂದು ವಿವರಿಸಿದರು.

“ಮಹದಾಯಿ ವಿಚಾರದಲ್ಲಿ ರೈತರನ್ನು ತಪ್ಪುದಾರಿಗೆಳೆಯುವ ಕೆಲಸ ನಡೀತಿದೆ. ರಾಷ್ಟ್ರೀಯ ಹುಲಿ ಪ್ರಾಧಿಕಾರ ವರದಿ ಕೊಡದೇ ಇರುವುದರಿಂದ ವನ್ಯಜೀವಿ ಮಂಡಳಿ ಕ್ರಮ ಕೈಗೊಂಡಿಲ್ಲ. ಗೋವಾಕ್ಕೆ ಬೇಕಾದ ವಿದ್ಯುತ್ ಯೋಜನೆಗೆ ಅನುಮತಿ ಕೊಡಲಾಗಿದೆ. ಗೋವಾ ರಾಜ್ಯಕ್ಕೆ ಮಾತ್ರ ವಿದ್ಯುತ್ ಅಂತ ಅಲ್ಲ. ದಾಬೋಲ್ ನಿಂದ ಬರುವ ಮಾರ್ಗಗಳಲ್ಲಿ ಬರುವ ಪ್ರದೇಶಕ್ಕೆ ಅದರಿಂದ ನೆರವಾಗುತ್ತೆ. ರೈತರಿಗೆ, ಸಾಮಾನ್ಯ ಜನರಿಗೆ 24 ತಾಸು ವಿದ್ಯುತ್ ಕೊಡುವ ಯೋಜನೆ ಇದಾಗಿದೆ. ಮಹದಾಯಿ ಯೋಜನೆಯಲ್ಲಿ ಸುಮಾರು 2 ಲಕ್ಷ ಮರಗಳನ್ನು ಕತ್ತರಿಸಬೇಕಾಗುತ್ತದೆ. ಹೀಗಾಗಿ ಅನುಮತಿ ಸಿಗೋದು ವಿಳಂಬವಾಗುತ್ತಿದೆ’’ ಎಂದರು. ‌

 

Donate Janashakthi Media

Leave a Reply

Your email address will not be published. Required fields are marked *