ಬೆಂಗಳೂರಿನಲ್ಲಿ ನವೆಂಬರ್ 26-28 ರವರೆಗೆ 72 ಗಂಟೆಗಳ ಬೃಹತ್ ರಾಜ ಭವನ್ ಚಲೋ- ಮಹಾಧರಣಿ

ಬೆಂಗಳೂರು: ಸ್ವಾತಂತ್ರ್ಯ, ಪಜಾಪಭುತ್ವ, ಸಾಮಾಜಿಕ ನ್ಯಾಯ, ಒಕ್ಕೂಟ ರಚನೆ ಮುಂತಾದವುಗಳ ಮೇಲಿನ ಆಕ್ರಮಣ ವಿರೋಧಿಸಿ, ಧರ್ಮನಿರಪೇಕ್ಷ (ಜಾತ್ಯಾತೀತ), ಪಜಾಪಭುತ್ವ ಗಣತಂತ್ರದ ಸಂವಿಧಾನ ರಕ್ಷಣೆಗಾಗಿ, ಐತಿಹಾಸಿಕ ದೆಹಲಿ ರೈತ ಹೋರಾಟ ಹಾಗೂ ಕಾರ್ಮಿಕರ ಅಖಿಲ ಭಾರತ ಹರತಾಳದ ನೆನಪಿನಲ್ಲಿ, ರೈತ ಕಾರ್ಮಿಕ ವಿರೋಧಿ ರಾಜ್ಯ ಕೃಷಿ ಕಾಯ್ದೆಗಳು ಹಾಗೂ ಕಾರ್ಮಿಕ ಕಾಯ್ದೆಗಳನ್ನು ರದ್ದುಗೊಳಿಸಲು. ಜನ ವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು, ಪರ್ಯಾಯ ಜನಪರ ನೀತಿಗಳಿಗಾಗಿ ಬೆಂಗಳೂರಿನಲ್ಲಿ 72ಗಂಟೆಗಳ ಬೃಹತ್‌ ರೈತ ಕಾರ್ಮಿಕರ ರಾಜಭವನ್‌ ಚಲೋ- ಮಹಾಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಸಂಯುಕ್ತ ಹೋರಾಟ – ಕರ್ನಾಟಕ  ಪ್ರತ್ರಿಕಾಗೋಷ್ಠಿಯ ಮೂಲಕ ತಿಳಿಸಿದೆ.ಮಹಾಧರಣಿ

ಸಂಯುಕ್ತ ಹೋರಾಟ-ಕರ್ನಾಟಕ ನೇತೃತ್ವದಲ್ಲಿ, ಈ ಬೃಹತ್ ರಾಜಭವನ್ ಚಲೋ ಮಹಾಧರಣಿ ಹಮ್ಮಿಕೊಂಡಿದ್ದು ಸಹಸ್ರಾರು ಸಂಖ್ಯೆಯಲ್ಲಿ ರೈತರು, ಕಾರ್ಮಿಕರು, ದಲಿತರು, ಮಹಿಳೆಯರು, ವಿದ್ಯಾರ್ಥಿ, ಯುವಜನರು ಭಾಗವಹಿಸಲಿದ್ದಾರೆ ಎಂದು ಸಂಯುಕ್ತ ಹೋರಾಟ-ಕರ್ನಾಟಕದ ನಾಯಕರು ತಿಳಿಸಿದ್ದಾರೆ.

ಇದನ್ನೂ ಓದಿ:ನವೆಂಬರ್ 26 ರಿಂದ ರೈತ – ಕಾರ್ಮಿಕರ ಮಹಾಧರಣಿ

2014 ರಿಂದಲೂ ದೇಶದಲ್ಲಿ ಅಧಿಕಾರದಲ್ಲಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆಕ್ರಮಣಕಾರಿಯಾಗಿ ರೂಪಿಸುತ್ತಿರುವ ಕಾರ್ಪೊರೇಟ್ ಬಂಡವಾಳ ಪರ ನವ ಉದಾರವಾದಿ ನೀತಿಗಳು ದೇಶದ ದುಡಿಯುವ ಜನರನ್ನು ಸಂಕಷ್ಟಕ್ಕೆ ದೂಡಿದೆ. ಕಾರ್ಪೊರೇಟ್ ತೆರಿಗೆಗಳನ್ನು ಕಡಿತ ಮಾಡುತ್ತಿರುವ ಕೇಂದ್ರ ಸರ್ಕಾರ, ಸಾಮಾನ್ಯ ಜನತೆಯ ಮೇಲೆ ಜಿ.ಎಸ್‌.ಟಿ. ಹೊರ ವಿಧಿಸಿದೆ. ಪೆಟ್ರೋಲಿಯಂ ಉತ್ಪನ್ನಗಳು ಸೇರಿದಂತೆ ಬಹುತೇಕ ಸಾರ್ವಜನಿಕ ಸೇವೆಗಳ ಬಳಕೆಗೆ ಹೆಚ್ಚಿನ ತೆರಿಗೆ ವಿಧಿಸುತ್ತಿರುವುದರಿಂದ ಎಲ್ಲಾ ಅಗತ್ಯ ಸರಕುಗಳ ಬೆಲೆಗಳು ತೀವ್ರವಾಗಿ ಏರಿಕೆಯಾಗುತ್ತಿದ್ದು, ಜನತೆ ತತ್ತರಿಸುವಂತಾಗಿದೆ ಎಂದರು.

ಸರ್ಕಾರ ‘ರಾಷ್ಟ್ರೀಯ ನಗದೀಕರಣ ಪೈಪ್‌ಲೈನ್‌ ಯೋಜನೆ’ ಮೂಲಕ ದೇಶದ ಸಂಪತ್ತಾದ ವಿದ್ಯುತ್, ರೈಲ್ವೆ ಕೇಂದ್ರ ಕಲ್ಲಿದ್ದಲು, ದೂರ ಸಂಪರ್ಕ, ವಿಮಾ ಕ್ಷೇತ್ರ, ವಿಮಾನಯಾನ, ರಕ್ಷಣಾ ಸಾಮಾಗಿ ಉತ್ಪಾದನಾ ಕೈಗಾರಿಕೆ ಸೇರಿದಂತೆ ಸಾರ್ವಜನಿಕ ಉದ್ದಿಮೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲಾಗುತ್ತಿದೆ. ಜನರಿಗೆ ಸೇವೆ ಒದಗಿಸಬೇಕಾದ ಅಗತ್ಯ ವಲಯಗಳಾದ ಆರೋಗ್ಯ, ಶಿಕ್ಷಣ, ಸಾರಿಗೆ, ಆಹಾರ, ನೀರು, ಭೂಮಿ, ಗಣಿ, ಅರಣ್ಯ ಸೇರಿದಂತೆ ಎಲ್ಲವನ್ನೂ ಕಾರ್ಪೊರೇಟ್ ವಲಯಕ್ಕೆ ಹಸ್ತಾಂತರಿಸಿ ಸೇವೆಯನ್ನು ಸರಕಾಗಿಸಲು ಹೊರಟಿದೆ. ಹಲವು ಸ್ವೀಂ ಯೋಜನೆಗಳನ್ನು ದುರ್ಬಲಗೊಳಿಸುತ್ತಿದೆ. ಸರ್ಕಾರದ ಇಂತಹ ಜನ ವಿರೋಧಿ ಕ್ರಮಗಳು ಕಾರ್ಪೊರೇಟ್ ವರ್ಗದ ಸಂಪತ್ತು ಮತ್ತು ಆದಾಯವನ್ನು ಗಣನೀಯವಾಗಿ ಹೆಚ್ಚಿಸಿದ್ದರೆ, ಶೋಷಿತ ಜನ ಸಮೂಹದ ಜೀವನ ಮಟ್ಟವನ್ನು ದಾರಿದಕ್ಕೆ ತಳ್ಳಲ್ಪಟ್ಟಿದೆ. ರಾಷ್ಟ್ರೀಯ ಆದಾಯದಲ್ಲಿ ಭಾರತದ ಅತ್ಯಂತ ಮೇಲರದ ಶೇ.1 ರಷ್ಟು ಜನ ಶೇ.40.5 ರಷ್ಟು ಒಡೆತನ ಹೊಂದಿದ್ದರೆ, ಶೇ.50 ರಷ್ಟು ಸಾಮಾನ್ಯ ಜನರ ಒಡೆತನ ಶೇ.3ಕ್ಕೆ ಕುಸಿದಿದೆ. ನಿರುದ್ಯೋಗ, ಬಡತನ, ಹಸಿವು, ಮಹಿಳಾ ಮತ್ತು ಮಕ್ಕಳ ಅಪೌಷ್ಟಿಕತೆ ಹೆಚ್ಚಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ:ಐತಿಹಾಸಿಕ ದೆಹಲಿ ಹೋರಾಟದ ನೆನಪಿನಲ್ಲಿ | ಜನವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು, ಪರ್ಯಾಯ ನೀತಿಗಾಗಿ | ರಾಜ್ಯ ಮಟ್ಟದ ಸಮಾವೇಶ

ದೆಹಲಿಯಲ್ಲಿ ಸತತ 13 ತಿಂಗಳ ಕಾಲ ರೈತರು ಐತಿಹಾಸಿಕ ಹೋರಾಟ ನಡೆಸಿದ ಪರಿಣಾಮ ಮೋದಿ ಸರ್ಕಾರ ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ಸು ಪಡೆಯಿತು. ಆದರೂ ಕನಿಷ್ಠ ಬೆಂಬಲ ಬೆಲೆ (ಎಂ.ಎಸ್‌.ಪಿ) ಕಾಯ್ದೆ ಜಾರಿ, ವಿದ್ಯುತ್ ತಿದ್ದುಪಡಿ ಮಸೂದೆ ರದ್ದತಿ ಮುಂತಾದ ವಿಷಯಗಳಲ್ಲಿ ರೈತರಿಗೆ ನೀಡಿದ್ದ ಲಿಖಿತ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಸರ್ಕಾರದ ಈ ಧೋರಣೆಗಳು ರೈತಾಪಿ ವರ್ಗವನ್ನು ಸಾಲದ ಸುಳಿಗೆ ಸಿಲುಕಿಸಿ ಕೃಷಿಯಿಂದ ಹೊರ ದೂಡಲಾಗುತ್ತಿದೆ. ಸಾರ್ವಜನಿಕ ಪಡಿತರ ವ್ಯವಸ್ಥೆಯನ್ನು ದುರ್ಬಲಗೊಳಿಸಲಾಗುತ್ತಿದೆ. ಕೃಷಿ ಆರ್ಥಿಕತೆ ಬಿಕ್ಕಟ್ಟಿನಲ್ಲಿ ಸಾಗುತ್ತಿದೆ ಎಂದರು.

ಕೇಂದ್ರ ಸರ್ಕಾರ 29 ಕಾರ್ಮಿಕ ಕಾನೂನುಗಳನ್ನು ಬದಲಾಯಿಸಿ ಕಾರ್ಪೊರೇಟ್ ಬಂಡವಾಳಪರ ನಾಲ್ಕು ಸಂಹಿತೆಗಳಾಗಿ ರೂಪಿಸಿ, ಕಾರ್ಮಿಕರ ಹಕ್ಕುಗಳನ್ನು ಮೊಟಕುಗೊಳಿಸಲು ಹಾಗೂ ಬಂಡವಾಳಗಾರರ ಲಾಭವನ್ನು ಹೆಚ್ಚಿಸಲು ಶ್ರಮದ ಶೋಷಣೆಗೆ ಅನುವುಗೊಳಿಸಿದೆ. ಬಹುದೊಡ್ಡ ಸಂಖ್ಯೆಯ ಕೃಷಿ ಕೂಲಿಕಾರರು, ಅಸಂಘಟಿತ ಕಾರ್ಮಿಕರು ಸಾಮಾಜಿಕ ಭದ್ರತೆಯಿಲ್ಲದೆ ಸಂಕಷ್ಟಕ್ಕೆ ಗುರಿಯಾಗುತ್ತಿದ್ದಾರೆ.

ರಾಜ್ಯದ ನೂತನ ಕಾಂಗ್ರೇಸ್‌ ಸರ್ಕಾರ ಕೇಂದ್ರ ಸರ್ಕಾರದ ಹಾದಿಯಲ್ಲಿ ಸಾಗದೇ, ರೈತ-ಕಾರ್ಮಿಕ ವಿರೋಧಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ಸು ಪಡೆಯಬೇಕು. ಜನಪರ ಪರ್ಯಾಯ ನೀತಿಗಳಿಗಾಗಿ ರೈತರ-ಕಾರ್ಮಿಕರ- ಕೂಲಿಕಾರರ ದಲಿತರ ಮಹಿಳೆಯರ-ಅಲ್ಪಸಂಖ್ಯಾತರ-ಆದಿವಾಸಿಗಳ ರಕ್ಷಣೆಗೆ ತನ್ನ ಇಚ್ಚಾಶಕ್ತಿ ಪದರ್ಶಿಸಬೇಕಿದೆ ಎಂದರು. ಚಲೋ

ಇದನ್ನೂ ಓದಿ:ವಚನ ಪಾಲಿಸದೇ ದ್ರೋಹವೆಸಗಿದ ಕೇಂದ್ರ ಸರ್ಕಾರದ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕ ಧರಣಿ

ಹಕ್ಕೋತ್ತಾಯಗಳು

1. ರೈತರಿಗೆ ನೀಡುವ, ಬೀಜ, ರಸಗೊಬ್ಬರ, ಹಾಗೂ ವಿದ್ಯುತ್‌ ಚ್ಛಕ್ತಿ ಮೇಲಿನ ಸಬ್ಸಿಡಿ ಮೊತ್ತ ಹೆಚ್ಚಳವಾಗಬೇಕು. ರೈತರ ಉತ್ಪನ್ನಗಳಿಗೆ ಎಂ.ಎಸ್, ಸ್ವಾಮಿನಾಥನ್‌ ಶಿಪಾರಸ್ಸಿನ ಸೂತ್ರ 02+50% ಪ್ರಕಾರ ಕನಿಷ್ಟ ಬೆಂಬಲ ಬೆಲೆ ಹಾಗೂ ಖರೀದಿ ಖಾತರಿ ಒದಗಿಸುವ ಶಾಸನ ಜಾರಿ ಮಾಡಬೇಕು. ರೈತರ ಆತ್ಮಹತ್ಯೆ ತಡೆಯಲು ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳಬೇಕು. ರೈತ ವಿರೋಧಿ ರಾಜ್ಯ ಕೃಷಿ ಕಾಯ್ದೆಗಳಾದ “ಕರ್ನಾಟಕ ರಾಜ್ಯ ಭೂಸುಧಾರಣಾ ತಿದ್ದುಪಡಿ ಕಾಯ್ದೆ- 2020″, ‘ಕರ್ನಾಟಕ ಎ.ಪಿ.ಎಂಸಿ. ತಿದ್ದುಪಡಿ ಕಾಯ್ದೆ-2020″, “ಕರ್ನಾಟಕ ಜಾನುವಾರು ಸಂರಕ್ಷಣ ತಿದ್ದುಪಡಿ ಕಾಯ್ದೆ-2020” ರದ್ದು ಗೊಳಿಸಬೇಕು.

2. ರಾಷ್ಟ್ರೀಯ ಕನಿಷ್ಟ ವೇತನ ಮಾಸಿಕ 26000 ರೂ. ನಿಗದಿ, ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿ, ಖಾಯಂ ಸ್ವರೂಪದ ಕೆಲಸದಲ್ಲಿ ತೊಡಗುವ ಕಾರ್ಮಿಕರ ಖಾಯಂ ಶಾಸನ ರೂಪಿಸಬೇಕು. ನಾಲ್ಕು ಕಾರ್ಮಿಕ ಸಂಹಿತೆಗಳನ್ನು, ನಿಗದಿತ ಅವಧಿ ಉದ್ಯೋಗ (ಎಫ್‌ಟಿಐ) ಪದ್ಧತಿಯನ್ನು ಹಾಗೂ ಕೆಲಸದ ಅವಧಿಯ ಹೆಚ್ಚಳವನ್ನು ರದ್ದುಪಡಿಸಬೇಕು. ಮಹಿಳೆಯರ ರಾತ್ರಿ ಪಾಳಿ ಕಡ್ಡಾಯ ಎಂಬ ತಿದ್ದುಪಡಿ ರದ್ದು ಪಡಿಸಬೇಕು. ಮಹಾಧರಣಿ

3. ಕಾರ್ಪೊರೇಟ್ ಪರವಾದ ಪಿಎಂ ಫಸಲ್ ಭೀಮಾ ಯೋಜನೆಯನ್ನು ರದ್ದುಪಡಿಸಿ, ಹವಾಮಾನ ಬದಲಾವಣೆ, ಬರ, ಪ್ರವಾಹ, ಬೆಳೆ ರೋಗ ಮುಂತಾದ ವಿಕೋಪಗಳಿಗೆ ರೈತರಿಗೆ ಪರಿಹಾರ ಒದಗಿಸುವ, ಎಲ್ಲಾ ಬೆಳೆಗಳಿಗೂ ವಿಮ ಒದಗಿಸುವ, ಸಮಗ ಸಾರ್ವಜನಿಕ ವಿಮಾ ಯೋಜನೆಯನ್ನು ಜಾರಿಗೆ ತರಬೇಕು.

4. ಎಲ್ಲಾ ರೈತರು/ಕೃಷಿ ಕೂಲಿಕಾರರನ್ನು ಸಾಲಭಾದೆಯಿಂದ ರಕ್ಷಿಸಲು ಸಮಗ್ರ ಸಾಲ ಮನ್ನಾ ಯೋಜನೆ ಜಾರಿಗೆ ತರಬೇಕು. ಕೃಷಿ ಕೂಲಿಕಾರರ ಹಿತವನ್ನು ಸಮಗ್ರವಾಗಿ ಕಾಪಾಡುವ ಕೇಂದ್ರೀಯ ಶಾಸನ ಜಾರಿ ಮಾಡಬೇಕು.

5. ಐತಿಹಾಸಿಕ ದೆಹಲಿ ರೈತ ಹೋರಾಟದ ಸಂದರ್ಭದಲ್ಲಿ ನೀಡಿದ್ದ ಲಿಖಿತ ಭರವಸೆಗಳನ್ನು ಜಾರಿ ಮಾಡಬೇಕು. ಈ ಆಧಾರದಲ್ಲಿ ಹೋರಾಟವನ್ನು ಮುಂದೂಡಲಾಗಿತ್ತು. ಸಿಂಗು ಗಡಿಯಲ್ಲಿ ಹುತಾತ್ಮ ರೈತರ ಸಾರಕ ನಿರ್ಮಿಸಲು ಜಾಗ ನೀಡಬೇಕು, ಹುತಾತ್ಮ ರೈತ ಕುಟುಂಬಕ್ಕೆ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸಬೇಕು. ಹೋರಾಟ ಸಂದರ್ಭದಲ್ಲಿ ರೈತರ ಮೇಲೆ ಹಾಕಿರುವ ಎಲ್ಲಾ ಪೊಲೀಸ್ ಕೇಸ್ ಗಳನ್ನು ವಾಪಸ್ಸು ಪಡೆಯಬೇಕು. ರೈತರ ಹತ್ಯಾಕಾಂಡ ನಡೆಸಿದ ಅಜಯ್ ಮೀಶ್ರ ತೇಣಿ ಯನ್ನು ಕೇಂದ್ರ ಮಂತ್ರಿ ಮಂಡಲದಿಂದ ತೆಗೆಯಬೇಕು.

6. ಉದ್ಯೋಗದ ಹಕ್ಕನ್ನು ಮೂಲಭೂತ ಹಕ್ಕನ್ನಾಗಿ ಮಾಡಬೇಕು. ಖಾಲಿ ಇರುವ ಎಲ್ಲಾ ಉದ್ಯೋಗಗಳನ್ನು ಭರ್ತಿ ಮಾಡಬೇಕು. ನಿರುದ್ಯೋಗಿ ಯುವಜನತೆಗೆ ಕೆಲಸ ಒದಗಿಸಲು, ಉದ್ಯೋಗ ಸೃಷ್ಟಿಸಲು, ಸಾರ್ವಜನಿಕ ಹೂಡಿಕೆ ಹೆಚ್ಚಿಸಬೇಕು. ಗಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. 200 ದಿನಗಳಿಗೆ ವಿಸ್ತರಿಸಿ 600 ರೂ. ಕೂಲಿ ನಿಗದಿ ಮಾಡಬೇಕು.

7. ಗೃಹ ಕೃತ್ಯಗಳ ಕೆಲಸಗಾರರು ಹಾಗೂ ಗೃಹ ಆಧಾರಿತ ಕೆಲಸಗಾರರಿಗೆ – ILO ಸಮ್ಮೇಳನ ಶಿಪಾರಸ್ಸುಗಳನ್ನು ಖಾತರಿಪಡಿಸಲು ಸೂಕ್ತ ಕಾನೂನು ರಚಿಸಬೇಕು. ವಲಸೆ ಕಾರ್ಮಿಕರ ಕುರಿತು ಸಮಗ ಧೋರಣೆ ರೂಪಿಸಬೇಕು. ಈಗ ಇರುವ ಅಂತರ್ ರಾಜ್ಯ ವಲಸೆ ಕೆಲಸಗಾರರ (ಉದ್ಯೋಗ ನಿಯಂತ್ರಣ) ಕಾಯ್ದೆ 1979 ಅನ್ನು ಸಾಮಾಜಿಕ ಸುರಕ್ಷೆ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಬಲಪಡಿಸಬೇಕು.

8. ಹೊಸ ಪಿಂಚಣಿ ಯೋಜನೆ (NPS) ಅನ್ನು ರದ್ದು ಮಾಡಿ, ಹಳೇ ಪಿಂಚಣಿ ಯೋಜನೆ (OPS) ಜಾರಿ ಮಾಡಬೇಕು. ಎಲ್ಲರಿಗೂ ಸಾಮಾಜಿಕ ಭದ್ರತೆ ಒದಗಿಸಬೇಕು.

9. ಬೆಲೆ ಏರಿಕೆ ನಿಯಂತ್ರಿಸಬೇಕು. ಅಗತ್ಯ ವಸ್ತುಗಳಾದ ಆಹಾರ, ಔಷಧ, ಕೃಷಿ ಲಾಗುವಾಡು- ಯಂತ್ರೋಪಕರಣಗಳ ಮೇಲಿನ ಜಿ.ಎಸ್‌.ಟಿ. ರದ್ದುಪಡಿಸಬೇಕು. ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲದ ಮೇಲಿನ ಕೇಂದ್ರೀಯ ತೆರಿಗೆಯನ್ನು ಗಣನೀಯವಾಗಿ ಇಳಿಕೆ ಮಾಡಬೇಕು.

10. ಕೋವಿಡ್ ನೆಪದಲ್ಲಿ ಹಿರಿಯ ನಾಗರಿಕರು, ಮಹಿಳೆಯರು, ಅಂಗವಿಕಲರು, ಕ್ರೀಡಾಪಟುಗಳಿಗೆ ರದ್ದುಪಡಿಸಿದ್ದ ರೈಲ್ವೆ ಪ್ರಯಾಣ ರಿಯಾಯಿತಿಯನ್ನು ಪುನರ್ ಸ್ಥಾಪಿಸಬೇಕು.

11. ಆಹಾರ ಭದ್ರತೆ/ಪೋಷಕಾಂಶ ಸುರಕ್ಷತೆಯನ್ನು ಖಾತರಿಪಡಿಸಬೇಕು. ಸಾರ್ವತ್ರಿಕ ಪಡಿತರ ವ್ಯವಸ್ಥೆ ಜಾರಿಗೆ ಬರಬೇಕು. ಮೂಲಭೂತ ಅಗತ್ಯ ವಸ್ತುಗಳನ್ನು ಪಿಡಿಎಸ್ ಮೂಲಕ ವಿತರಿಸಬೇಕು. ನೇರ ನಗದು ವರ್ಗಾವಣೆ ರದ್ದುಪಡಿಸಬೇಕು.

12.ಉಚಿತ ಶಿಕ್ಷಣ, ಉಚಿತ ಆರೋಗ್ಯ ಸೇವೆ, ಉಚಿತ ನೀರು ಮತ್ತು ನೈರ್ಮಲ್ಯವನ್ನು ಮೂಲಭೂತ ಹಕ್ಕಾಗಿ ಒದಗಿಸಬೇಕು. ರಾಷ್ಟ್ರೀಯ ಶಿಕ್ಷಣ ನೀತಿ(ಎನ್.ಇ.ಪಿ.)-2020 ರದ್ದಾಗಬೇಕು.

13. ಪ್ರತಿಯೊಬ್ಬರಿಗೂ ವಸತಿ ಹಕ್ಕನ್ನು ಖಾತರಿಪಡಿಸಬೇಕು. ವಸತಿ-ನಿವೇಶನಕ್ಕಾಗಿ ಭೂ ಸ್ವಾಧೀನ ನೀತಿ ಜಾರಿ ಮಾಡಬೇಕು.

14.ಅರಣ್ಯ ಹಕ್ಕು ಕಾಯ್ದೆ-2006 ಅನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು. ಅರಣ್ಯಗಳನ್ನು ಕಾರ್ಪೊರೇಟ್ ಗೆ ಹಸ್ತಾಂತರಿಸಲು ಅವಕಾಶ ನೀಡಿರುವ ಅರಣ್ಯ ಸಂರಕ್ಷಣಾ ತಿದ್ದುಪಡಿ ಕಾಯ್ದೆ-2023 ಹಾಗೂ ಜೀವ ವೈವಿಧ್ಯ ಕಾಯ ಮತ್ತು ನಿಯಮಗಳನ್ನು ರದ್ದುಪಡಿಸಬೇಕು. ಬಗರ್ ಹುಕುಂ ಸಾಗುವಳಿದಾರರು, ಅರಣ್ಯ ಭೂಮಿ ಸಾಗುವಳಿದಾರರು ಸೇರಿದಂತೆ ಎಲ್ಲಾ ಉಳುಮೆ ರೈತರಿಗೆ ಭೂಮಿ ಹಕ್ಕು ಖಾತರಿಪಡಿಸಬೇಕು. ಬಲವಂತದ ಭೂ ಸ್ವಾಧೀನ ನಿಲ್ಲಿಸಬೇಕು ಮತ್ತು ಪರಿಹಾರ ಕ್ರಮ ವೈಜ್ಞಾನಿಕ ಹಾಗೂ ರೈತ ಸ್ನೇಹಿಯಾಗಿರಬೇಕು. ಮಹಾಧರಣಿಮಹಾಧರಣಿ

15. ವಿದ್ಯುತ್, ರಕ್ಷಣೆ, ಗಣಿಗಾರಿಕೆ, ಬಂದರು, ರೈಲ್ವೆ, ವಿಮಾನ ನಿಲ್ದಾಣ ಸೇರಿದಂತೆ ಎಲ್ಲಾ ಸಾರ್ವಜನಿಕ ಉದ್ದಿಮೆಗಳ ಹಾಗೂ ಸರ್ಕಾರಿ ಇಲಾಖೆಗಳ ಖಾಸಗೀಕರಣ ನಿಲ್ಲಬೇಕು. ಸಾರ್ವಜನಿಕ ಶಿಕ್ಷಣ, ಆರೋಗ್ಯ, ಮತ್ತಿತರೆ ಸಾರ್ವಜನಿಕ ಸೇವೆಗಳ ಖಾಸಗೀಕರಣ ನಿಲ್ಲಬೇಕು. ರಾಷ್ಟ್ರೀಯ ನಗದೀಕರಣ ಪೈಪ್ ಲೈನ್ ಯೋಜನೆ ರದ್ದಾಗಬೇಕು.ಮಹಾಧರಣಿ

16.ಖನಿಜ ಹಾಗೂ ಲೋಹ ಗಣಿಗಾರಿಕಾ ಕಾಯ್ದೆ ಗೆ ತಿದ್ದುಪಡಿ ತಂದು ಕಲ್ಲಿದ್ದಲು ಸೇರಿದಂತೆ ಗಣಿ ಕಂಪನಿಗಳ ಲಾಭದ ಶೇ.50 ರಷ್ಟನ್ನು ಆದಿವಾಸಿಗಳು, ರೈತರು ಮುಂತಾದ ಸ್ಥಳೀಯ ನಿವಾಸಿಗಳ ಅಭಿವೃದ್ಧಿಗೆ ಬಳಸಬೇಕು. ಖಾಸಗೀಕರಣಗೊಳಿಸುವ ವಿದ್ಯುತ್‌ ತಿದ್ದುಪಡಿ ಮಸೂದೆ-2022 ಅನ್ನು ಸಂಸತ್ತಿನಿಂದ ವಾಪಸ್ಸು

17. ವಿದ್ಯುತ್ ರಂಗವನ್ನು ಪಡೆಯಬೇಕು. ಯಾವುದೇ ಕಾರಣಕ್ಕೂ ಪೀ ಪೇಸ್ಟ್ ಮೀಟರ್ ಅಳವಡಿಸಬಾರದು. ವಿದ್ಯುತ್ ಉಪಕರಣಗಳ ಸಂಪೂರ್ಣ ವೆಚ್ಚ ಭರಿಸುವಂತೆ ಕೃಷಿ ಪಂಪ್‌ಸೆಟ್ ರೈತರನ್ನು ಬಲವಂತ ಪಡಿಸುವ ಆದೇಶವನ್ನು ರದ್ದುಪಡಿಸಬೇಕು.

18. ಭಾರತೀಯ ಕಾರ್ಮಿಕ ಸಮ್ಮೇಳನವನ್ನು ನಿಯಮಿತವಾಗಿ ಆಯೋಜಿಸಬೇಕು.

19.ಎಲ್ಲಾ ರೀತಿಯ ಅಸಂಘಟಿತ ವಲಯದ ಕಾರ್ಮಿಕರನ್ನು ನೊಂದಾಯಿಸಿ ಪಿಂಚಣಿ ಸೇರಿದಂತೆ ಸಮಗ್ರ ಸಾಮಾಜಿಕ ಸುರಕ್ಷತೆಯನ್ನು ಒದಗಿಸಬೇಕು. ಇ-ಶಮ್‌ ಪೋರ್ಟಲ್‌ನಲ್ಲಿ ನೊಂದಾಯಿಸಿರುವ ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ಆರೋಗ್ಯ ಯೋಜನೆ, ತಾಯ್ತನದ ಆರೈಕೆ ಸೌಲಭ್ಯ, ಜೀವಾ ಹಾಗೂ ಅಂಗವೈಕಲ್ಯ ವಿಮೆ, ಮತ್ತಿತರೆ ಕಲ್ಯಾಣ ಸೌಲಭ್ಯಗಳನ್ನು ಒದಗಿಸಬೇಕು.

20. ಐ.ಸಿ.ಡಿ.ಎಸ್., ಅಕ್ಷರ ದಾಸೋಹ, ಆಶಾ ಮುಂತಾದ ಯೋಜನೆಗಳನ್ನು ಯಾವುದೇ ಸ್ವರೂಪದಲ್ಲಿ ಖಾಸಗೀಕರಣ ಮಾಡಬಾರದು. ಗ್ರಾಮ ಪಂಚಾಯತಿ ನೌಕರರಿಗೆ ಕನಿಷ್ಠ ವೇತನ ಸಮರ್ಪಕವಾಗಿ ಜಾರಿ ಮಾಡಬೇಕು. ಮಹಾಧರಣಿ

21.ಕಲ್ಯಾಣ ಮಂಡಳಿಯ ನಿಧಿ ದುರ್ಬಳಕೆ ನಿಲ್ಲಿಸಿ, ಕಟ್ಟಡ ಕಾರ್ಮಿಕರಿಗೆ ಜಾರಿಯಲ್ಲಿರುವ ಸೌಲಭ್ಯಗಳ ಜೊತೆಗೆ ಇ.ಎಸ್‌.ಐ., ವಸತಿ ಸೌಲಭ್ಯವನ್ನು ಒದಗಿಸಬೇಕು. ಬಾಕಿ ಇರುವ ಶೈಕ್ಷಣಿಕ ಸಹಾಯ ಧನವನ್ನು ಕೂಡಲೇ ಬಿಡುಗಡೆ ಮಾಡಬೇಕು.

22. ಕೇಂದ್ರ-ರಾಜ್ಯ ಸರ್ಕಾರಗಳ ನಿಗಮ, ಮಂಡಳಿ, ವಿವಿಧ ಇಲಾಖೆಗಳಲ್ಲಿ, ಆಸತ್ರೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ, ಖಾಸಗಿ ಕೈಗಾರಿಕೆಗಳಲ್ಲಿ ನಿರಂತರ ಕೆಲಸಗಳಲ್ಲಿ ದುಡಿಯುತ್ತಿರುವ ಗುತ್ತಿಗೆ, ಹೊರಗುತ್ತಿಗೆ, ಕಾರ್ಮಿಕರ ಸೇವೆಗಳನ್ನು ಕಾಯಂಗೊಳಿಸಬೇಕು. ಮಹಾಧರಣಿ

23. ಕೆಲಸದ ಸ್ಥಳದಲ್ಲಿ ಸಮಾನತೆ ಹಾಗೂ ಸುರಕ್ಷಿತ ಖಾತರಿಪಡಿಸಬೇಕು. ಶ್ರಮವನ್ನು ಶಾಶ್ವತ ಖಾಯಂ ರಹಿತವಾಗಿ ದುಡಿಸಿಕೊಳ್ಳುವ ಪ್ರವೃತ್ತಿ ನಿಲ್ಲಬೇಕು. ಗೃಹ ಅಧಾರಿತ ಕಾರ್ಮಿಕರು, ಸಣ್ಣ ಪುಟ್ಟ ವ್ಯಾಪಾರಸ್ಥರು, ಚಿಂದಿ ಆಯುವವರು,ಮನೆಗೆಲಸಗಾರರು, ಕಟ್ಟಡ ಕಾರ್ಮಿಕರು, ವಲಸೆ ಕಾರ್ಮಿಕರು, ಅಂಗನವಾಡಿ, ಬಿಸಿಯೂಟ, ಆಶಾ ಸೇರಿದಂತೆ ಯೋಜನಾ ಕಾರ್ಮಿಕರು, ಕೃಷಿ ಕೂಲಿಕಾರರು, ಅಂಗಡಿ/ಮಳಿಗೆಗಳ ಕಾರ್ಮಿಕರು, ಹಮಾಲಿ ಕಾರ್ಮಿಕರು, ಗೀಗ್ ಕಾರ್ಮಿಕರು, ಊದುಬತ್ತಿ/ ಉಪ್ಪಿನಕಾಯಿ, ಕಾರ್ಮಿಕರು, ಕಾರ್ಮಿಕರು, ಕಾರ್ಮಿಕರು. ಎಳೆಯುವವರು, ಆಟೋ ರಿಕ್ಷಾ ಟ್ಯಾಕ್ಸಿ ಚಾಲಕರು, ವಿದೇಶಿ ಕಾರ್ಮಿಕರು, ಮೀನುಗಾರ ಸಮುದಾಯ ಮುಂತಾದ ಎಲ್ಲಾ ರೀತಿಯ ಅಸಂಘಟಿತ ವಲಯದ ಕಾರ್ಮಿಕರನ್ನು ನೊಂದಾಯಿಸಿ, ಪಿಂಚಣಿ ಸೇರಿದಂತೆ ಸಮಗ್ರ ಸಾಮಾಜಿಕ ಸುರಕ್ಷೆಯನ್ನು ಒದಗಿಸಬೇಕು. ಮಹಾಧರಣಿ

24. ಸಂವಿಧಾನದ ಮೂಲಭೂತ ಮೌಲ್ಯಗಳಾದ ಅಭಿವ್ಯಕ್ತಿ ಸ್ವಾತಂತ್ರ್ಯ, ಭಿನ್ನಾಭಿಪ್ರಾಯ ಹೊಂದುವ ಹಕ್ಕು, ಧಾರ್ಮಿಕ ಸ್ವಾತಂತ್ರ್ಯ, ಸಾಂಸ್ಕೃತಿಕ -ಭಾಷೆ ವೈವಿಧ್ಯತೆ ಗೆ ಮನ್ನಣೆ, ದೇಶದ ಕಾನೂನಿನ ಮುಂದೆ ಎಲ್ಲರೂ ಸಮಾನರು ಹಾಗೂ ಒಕ್ಕೂಟ ರಚನೆ ಮುಂತಾದವುಗಳ ಮೇಲಿನ ಆಕ್ರಮಣವನ್ನು ನಿಲ್ಲಿಸಬೇಕು.

ಈ ಸಂದರ್ಭದಲ್ಲಿ ಸಂಯುಕ್ತ ಹೋರಾಟ -ಕರ್ನಾಟಕ ಸಂಯೋಜಕರು ಬಡಗಲಪುರ ನಾಗೇಂದ್ರ, ಜಿಸಿ ಬಯ್ಯಾರೆಡ್ಡಿ, ಮಾವಳ್ಳಿ ಶಂಕರ್ , ಎಸ್ ಎಸ್‌ ಹಿರೇಮಠ್‌, ಪಿಆರ್‌ಎಸ್‌ ಮಣಿ,  ಕುಮಾರ ಸಮತಳ, ಸೇರಿದಂತೆ ಅನೇಕ ನಾಯಕರು ಹಾಜರಿದ್ದರು.

 

ವಿಡಿಯೋ ನೋಡಿ: ರೈತ, ಕಾರ್ಮಿಕ, ದಲಿತ, ಕೂಲಿಕಾರರ, ಮಹಿಳೆಯರ ಹಕ್ಕುಗಳಿಗಾಗಿ ಮಹಾಧರಣಿ

Donate Janashakthi Media

Leave a Reply

Your email address will not be published. Required fields are marked *