ಮುಂಬೈ: ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಖಲಾಪುರ ತೆಹಸಿಲ್‌ನ ಇರ್ಶಾಲವಾಡಿಯಲ್ಲಿ ಬುಧವಾರ ಭೀಕರ ಮಳೆಯಿಂದಾಗಿ ಸಂಭವಿಸಿದ ಭೂಕುಸಿತದಿಂದಾಗಿ ನಾಲ್ಕು ಮಂದಿ ಮೃತಪಟ್ಟಿದ್ದು, ಹಲವರು ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಈವರೆಗೆ 25 ಮಂದಿಯನ್ನು ರಕ್ಷಿಸಲಾಗಿದ್ದು, ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಕಳೆದ 36 ತಾಸಿನಲ್ಲಿ 150ರಿಂದ 200 ಮಿ.ಮೀ ಈ ಕೊಂಕಣ ಪ್ರದೇಶದಲ್ಲಿ ಮಳೆ ಸುರಿದಿದೆ.
ಇದನ್ನೂ ಓದಿ:ಉತ್ತರಾಖಂಡ ಭೀಕರ ದುರಂತ:ಟ್ರಾನ್ಸ್‌ಫಾರ್ಮರ್ ಸ್ಫೋಟ 15 ಮಂದಿ ಸಾವು
ಪ್ರಾಥಮಿಕ ಮಾಹಿತಿಯ ಪ್ರಕಾರ 30ಕ್ಕೂ ಹೆಚ್ಚು ಬುಡಕಟ್ಟು ಸಮುದಾಯದ ಕುಟುಂಬಗಳು ಇಲ್ಲಿ ವಾಸಿಸುತ್ತಿವೆ ಎಂದು ತಿಳಿದು ಬಂದಿದೆ. ಸುಮಾರು 17 ಮನೆಗಳಿಗೆ ಹಾನಿಯಾಗಿವೆ ಎಂದು ತಿಳಿದು ಬಂದಿದೆ.ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಎಂಎ) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ, ರಾಯಗಢ ಸ್ಥಳೀಯಾಡಳಿತ ಮತ್ತು ಪೊಲೀಸ್ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಮಹಾರಾಷ್ಟ್ರ ಪರ್ವತಾರೋಹಿಗಳ ತಂಡವನ್ನು (ಎಂಎಂಆರ್‌ಸಿಸಿ) ಸ್ಥಳಕ್ಕೆ ರವಾನಿಸಲಾಗಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಮೂವರು ಸಚಿವರು ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.
Landslide was reported in Khalapur's Irshalwadi in Raigad district. Some people are feared trapped. 2 NDRF teams have reached the spot and have started search and rescue. 2 more teams have left from Mumbai to join the operation. Raigad Police has set up a control room after the…
— ANI (@ANI) July 20, 2023