ಭ್ರಷ್ಟಾಚಾರ ಆರೋಪ : ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್ ರಾಜೀನಾಮೆ

ಮುಂಬೈ : ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರು ತಮ್ಮ ವಿರುದ್ಧ ಮಾಡಿರುವ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಅವರು ಸೋಮವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಅನಿಲ್ ದೇಶಮುಖ್ ಅವರು ಇಂದು ಬೆಳಗ್ಗೆ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾಗಿ ಚರ್ಚಿಸಿದ ನಂತರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದರು ಮತ್ತು  ದೇಶಮುಖ್ ಅವರು ತಮ್ಮ ರಾಜೀನಾಮೆಯನ್ನು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ರವಾನಿಸಿದ್ದಾರೆ ಎಂದು ಎನ್ ಸಿಪಿ ಸಚಿವ ನವಾಬ್ ಮಲಿಕ್ ಅವರು ತಿಳಿಸಿದ್ದಾರೆ.

ಇದನ್ನು ಓದಿ : ಗೃಹ ಸಚಿವರ ನೂರು ಕೋಟಿ ಹಗರಣ – ರಾಜೀನಾಮೆಗೆ ಹೆಚ್ಚಿದ ಒತ್ತಡ

ಮಹಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಗೃಹ ಸಚಿವ ದೇಶ್‌ಮುಖ ತಮ್ಮ ರಾಜೀನಾಮೆ ಪತ್ರ ನೀಡಿದ್ದಾರೆ. ಉದ್ಧವ್ ಠಾಕ್ರೆ ರಾಜೀನಾಮೆ ಪತ್ರ ಪಡೆದುಕೊಂಡಿದ್ದಾರೆ. ಆದರೆ ಇನ್ನೂ ಅಂಗೀಕಾರ ಮಾಡಿಲ್ಲ.ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಂ ಬೀರ್ ಸಿಂಗ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಮುಂಬೈ ಹೈಕೋರ್ಟ್, ಇದು ಗಂಭೀರ ಆರೋಪಗಳಾಗಿದೆ. ಹೀಗಾಗಿ 15 ದಿನದಲ್ಲಿ ಪ್ರಾಥಮಿಕ ತನಿಖೆ ನಡೆಸುವಂತೆ ಸಿಬಿಐಗೆ ಸೂಚನೆ ನೀಡಿದೆ.

ಹೈಕೋರ್ಟ್ ಆದೇಶದ ಬೆನ್ನಲ್ಲೇ ಗೃಹ ಸಚಿವರ ರಾಜೀನಾಮೆಗೆ ಒತ್ತಡ ಹೆಚ್ಚಾಯಿತು. ಇತ್ತ ಉಚ್ಚ ನ್ಯಾಯಾಲಯವೇ ಸಿಬಿಐ ತನಿಖೆಗೆ ಆದೇಶಿಸಿದಾಗ, ಹುದ್ದೆಯಲ್ಲಿ ಮುಂದುವರಿಯಲು ಹೇಗೆ ಸಾಧ್ಯ? ಹೀಗಾಗಿ ತಕ್ಷಣವೇ ದೇಶ್‌ಮುಖ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪ್ರತಿ ತಿಂಗಳು 100 ಕೋಟಿ ರೂಪಾಯಿ ಹಫ್ತಾ ಸಂಗ್ರಹಿಸುವಂತೆ ಗೃಹ ಸಚಿವ ಟಾರ್ಗೆಟ್ ಮಾಡುತ್ತಿದ್ದರು ಅನ್ನೋ ಮಾಜಿ ಪೊಲೀಸ್ ಆಯುಕ್ತ ಪರಂ ಬೀರ್ ಸಿಂಗ್ ಆರೋಪ ಮೈತ್ರಿ ಸರ್ಕಾರದ ಬುಡ ಅಲ್ಲಾಡಿಸಿತ್ತು. ಈ ಕುರಿತು ಪರಂ ಬೀರ್ ಸಿಂಗ್ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ರಾಜ್ಯಪಾಲರಿಗೆ ಪತ್ರ ಬರೆದಿದ್ದರು.

 

ಇದನ್ನೂ ಓದಿದೇಶ್‌ಮುಖ್‌ ವಿರುದ್ಧ ಸಿಬಿಐ ಪ್ರಾಥಮಿಕ ತನಿಖೆ ನಡೆಸಲು ಬಾಂಬೆ ಹೈಕೋರ್ಟ್‌ ನಿರ್ದೇಶನ

Donate Janashakthi Media

Leave a Reply

Your email address will not be published. Required fields are marked *