ನವದೆಹಲಿ :ಮಹಾರಾಷ್ಟ್ರ ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭಗೊಂಡಿದ್ದು ಆರಂಭಿಕ ಮುನ್ನಡೆಯಲ್ಲಿ ಸಮಬಲದ ಪೈಪೋಟಿ ಕಾಣುತ್ತಿದೆ.
ಜಾರ್ಖಂಡ್‌ನಲ್ಲಿ ಎನ್‌ಡಿಎ 27 ರಲ್ಲಿ ಹಾಗೂ ‘ಇಂಡಿಯಾ’ ಕೂಟ 52 ಕ್ಷೇತ್ರಗಳಲ್ಲಿ, ಇತರರು 02 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದೆಕೊಂಡಿದ್ದಾರೆ.
ಮಹಾರಾಷ್ಟ್ರದಲ್ಲಿ ಮಹಾಯುತಿ (NDA)
220, ಮಹಾ ವಿಕಾಸ ಅಘಾಡಿಯು(INDIA) 52, ಇತರರು 16 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಮಹಾರಾಷ್ಟ್ರದ 288 ಕ್ಷೇತ್ರಗಳಿಗೆ ಹಾಗೂ ಜಾರ್ಖಂಡ್‌ನ 81 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಮತ ಎಣಿಕೆ ಆರಂಭಗೊಂಡಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನಾ ಹಾಗೂ ಎನ್‌ಸಿಪಿ ನೇತೃತ್ವದ ಮಹಾಯುತಿ ಬಣ ಹಾಗೂ ಕಾಂಗ್ರೆಸ್, ಶಿವಸೇನಾ (ಯುಬಿಟಿ) ಮತ್ತು ಎನ್‌ಸಿಪಿ (ಎಸ್‌ಪಿ) ಪಕ್ಷಗಳ ಮಹಾ ವಿಕಾಸ ಅಘಾಡಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಮತ್ತೊಂದೆಡೆ ಜಾರ್ಖಂಡ್‌ನಲ್ಲಿ ಕಾಂಗ್ರೆಸ್ ಹಾಗೂ ಜೆಎಂಎಂ ಮೈತ್ರಿ ವಿರುದ್ಧ ಬಿಜೆಪಿ ನೇತೃತ್ವದ ಎನ್‌ಡಿಎ ನಡುವೆ ನೇರ ಸ್ಪರ್ಧೆ ನಡೆದಿದೆ.
ಕರ್ನಾಟಕ : ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಆರಂಭಗೊಂಡಿದೆ. ಮೂರು ಪಕ್ಷಗಳು ತಲಾ ಒಂದೊಂದು ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಚನ್ನಪಟ್ಟಣದಲ್ಲಿ ಯೋಗೇಶ್ವರ ಮತ್ತು ನಿಖಲ್ ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ. ಒಂದು ಸುತ್ತಿನಲ್ಲಿ ಯೋಗೇಶ್ವರ್ ಮುನ್ನಡೆ ಕಾಯ್ದುಕೊಂಡರೆ, ಇನ್ನೊಂದು ಸುತ್ತಿನಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಸಂಡೂರಿನಲ್ಲಿ ಕಾಂಗ್ರೆಸ್ ನ ಅನ್ನಪೂರ್ಣ, ಶಿಗ್ಗಾಂವಿಯಲ್ಲಿ ಭರತ್ ಬೊಮ್ಮಾಯಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
(ಸುದ್ದಿ ಅಪ್ಡೇಟ್ ಆಗುತ್ತಿದೆ)