ಮುಂಬೈ: ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಜಿತ್ ಪವಾರ್ ಬಣದ ಶಾಸಕ ಪ್ರಕಾಶ್ ಸೋಲಂಕೆ ಅವರ ಮನೆಯನ್ನು ಮರಾಠ ಮೀಸಲಾತಿ ಪರ ಪ್ರತಿಭಟನಾಕಾರರು ಧ್ವಂಸಗೊಳಿಸಿ, ಬೆಂಕಿ ಹಚ್ಚಿರುವ ಘಟನೆ ಸೋಮವಾರ ನಡೆದಿದೆ. ಅವರ ಮನೆಯಲ್ಲಿ ನಿಲ್ಲಿಸಿದ್ದ ಕಾರಿಗೂ ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಬಂಗಲೆಯಲ್ಲಿ ಭಾರಿ ಬೆಂಕಿ ಮತ್ತು ಅದರ ಹೊಗೆ ಹತ್ತಿರದ ಪ್ರದೇಶಗಳಿಗೆ ಹರಡುವ ದೃಶ್ಯವು ದಾಖಲಾಗಿದೆ. ಮನೆಗೆ ಬೆಂಕಿ ಹಚ್ಚುವ ಮುನ್ನ ಪ್ರತಿಭಟನಾಕಾರರು ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿಯಾಗಿದೆ. ಮರಾಠ ಮೀಸಲಾತಿ
ಇದನ್ನೂ ಓದಿ: ಬಿಜೆಪಿ ಗೆದ್ದರೆ ತೆಲಂಗಾಣದಲ್ಲಿ ಮುಸ್ಲಿಂ ಮೀಸಲಾತಿ ರದ್ದುಗೊಳಿಸಲಿದೆ: ಕೇಂದ್ರ ಸಚಿವ ಕಿಶನ್ ರೆಡ್ಡಿ
ಅಕ್ಟೋಬರ್ 25 ರಿಂದ ಮೀಸಲಾತಿ ಪರವಾಗಿ ಹೋರಾಟ ನಡೆಸುತ್ತಿರುವ ಮನೋಜ್ ಜಾರಂಗೆ ಪಾಟೀಲ್ ಅವರ ಉಪವಾಸ ಸತ್ಯಾಗ್ರಹದ ವಿರುದ್ಧ ಪ್ರಕಾಶ್ ಸೋಲಂಕೆ ನೀಡಿದ್ದ ಹೇಳಿಕೆಯ ಕಾರಣಕ್ಕೆ ಉದ್ರಿಕ್ತ ಜನರ ಗುಂಪು ಈ ಕೃತ್ಯ ಎಸಗಿದೆ ಎಂದು ವರದಿಯಾಗಿದೆ.
#WATCH | Beed, Maharashtra: Maratha reservation agitators vandalised and set the residence of NCP MLA Prakash Solanke on fire. pic.twitter.com/8uAfmGbNCI
— ANI (@ANI) October 30, 2023
ಮನೋಜ್ ಜಾರಂಗೆ ವಿರುದ್ಧ ಸೋಲಂಕೆ ನೀಡಿರುವ ಹೇಳಿಕೆಯಲ್ಲಿ, “ಸಮಸ್ಯೆ (ಮೀಸಲಾಗಿ ಬೇಡಿಕೆ ಮತ್ತು ಅದನ್ನು ಜಾರಿಗೆ ತರಲು ರಾಜ್ಯ ಸರ್ಕಾರಕ್ಕೆ ನೀಡಿರುವ 40 ದಿನಗಳ ಗಡುವು) ಮಕ್ಕಳ ಆಟವಾಗಿ ಮಾರ್ಪಟ್ಟಿದೆ. ಗ್ರಾಮ ಪಂಚಾಯತ್ ಚುನಾವಣೆಯಲ್ಲೂ ಸ್ಪರ್ಧಿಸದ ವ್ಯಕ್ತಿ (ಮನೋಜ್ ಜಾರಂಗೆ ಪಾಟೀಲ್) ಇಂದು ಬುದ್ಧಿವಂತ ವ್ಯಕ್ತಿಯಾಗಿದ್ದಾನೆ” ಎಂದು ಸೋಲಂಕೆ ಹೇಳಿದ್ದರು. ಅವರ ಈ ಹೇಳಿಕೆಯ ಆಡಿಯೊ ವ್ಯಾಪಕವಾಗಿ ವೈರಲ್ ಆಗಿದ್ದು ಪ್ರತಿಭನಾಕಾರರು ಉದ್ರಿಕ್ತರಾಗಿದ್ದರು.
ಘಟನೆ ನಡೆದಾಗ ತಾನು ಮನೆಯೊಳಗೆ ಇದ್ದದ್ದಾಗಿ ಎನ್‌ಸಿಪಿ ಶಾಸಕ ಸೋಲಂಕೆ ಹೇಳಿದ್ದಾರೆ. “ಅದೃಷ್ಟವಶಾತ್, ನನ್ನ ಕುಟುಂಬ ಸದಸ್ಯರು ಅಥವಾ ಸಿಬ್ಬಂದಿಗೆ ಯಾವುದೇ ಗಾಯಗಳಾಗಿಲ್ಲ. ನಾವೆಲ್ಲರೂ ಸುರಕ್ಷಿತವಾಗಿದ್ದೇವೆ, ಆದರೆ ಬೆಂಕಿಯಿಂದಾಗಿ ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟವಾಗಿದೆ” ಎಂದು ಅವರು ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.
ಇದನ್ನೂ ಓದಿ: ಕೆಲಸ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಹೋರಾಟಕ್ಕೆ ಮುಂದಾದ ಬಿಸಿಯೂಟ ನೌಕರರು
ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠರಿಗೆ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ಆಂದೋಲನ ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ಪ್ರಮುಖ ರಾಜಕೀಯ ಚರ್ಚೆಯಾಗುತ್ತಿದೆ. ಮೀಸಲಾತಿ ವಿಚಾರವಾಗಿ ಹಿಂಗೋಲಿ ಸಂಸದ ಸ್ಥಾನಕ್ಕೆ ಶಿವಸೇನೆ ನಾಯಕ ಹೇಮಂತ್ ಪಾಟೀಲ್ ರಾಜೀನಾಮೆ ನೀಡುವುದಾಗಿ ಭಾನುವಾರ ಘೋಷಿಸಿದ್ದಾರೆ. ಯವತ್ಮಾಲ್‌ನ ಪ್ರತಿಭಟನಾ ಸ್ಥಳದಲ್ಲಿ ಅವರು ತಮ್ಮ ರಾಜೀನಾಮೆ ಪತ್ರವನ್ನು ಬರೆದಿದ್ದಾರೆ.
ಸಂಸದರ ರಾಜೀನಾಮೆಗೆ ಪ್ರತಿಕ್ರಿಯಿಸಿದ ಮೀಸಲಾತಿ ಪರ ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್, ರಾಜ್ಯದ ಮರಾಠಾ ಸಂಸದರು ಮತ್ತು ಶಾಸಕರು ಈ ಸಮಸ್ಯೆಯನ್ನು ಪರಿಹರಿಸಲು ವಿಶೇಷ ವಿಧಾನಸಭೆ ಅಧಿವೇಶನ ಕರೆಯಬೇಕು ಎಂದು ಸಲಹೆ ನೀಡಿದ್ದಾರೆ. ಮರಾಠ ಮೀಸಲಾತಿ
ಮರಾಠರ ಪ್ರಗತಿಯನ್ನು ತಡೆಯಲು ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಮಾಡುತ್ತಿರುವ ಪಿತೂರಿ ಇದಾಗಿದೆ ಎಂದು ಮರಾಠಾ ಮೀಸಲಾತಿ ವಿಧೇಯಕ ಮಂಡನೆ ವಿಳಂಬವಾಗುತ್ತಿರುವ ಬಗ್ಗೆ ಅವರು ಈ ಹಿಂದೆ ಆರೋಪಿಸಿದ್ದರು. ಮರಾಠ ಮೀಸಲಾತಿ
ವಿಡಿಯೊ ನೋಡಿ: ರಸ್ತೆ ಸಾರಿಗೆ ಕಾರ್ಮಿಕರನ್ನು ಶೋಷಿಸುವ ಮೋಟಾರು ತಿದ್ದುಪಡಿ ಕಾಯ್ದೆ ವಾಪಸ್ಸಾಗಲಿ