ತನ್ನ ಗಡಿಪಾರು ಕ್ರಮ ಪ್ರಶ್ನಿಸಿ ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ ಮಹೇಶ್ ಶೆಟ್ಟಿ ತಿಮರೋಡಿ

ಬೆಂಗಳೂರು: ತನ್ನನ್ನು ಒಂಭತ್ತು ತಿಂಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಗೆ ಗಡಿಪಾರು ಮಾಡಿ ಆದೇಶಿಸಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದ್ದು, ಗೃಹ ಇಲಾಖೆ ಕಾರ್ಯದರ್ಶಿ, ಪುತ್ತೂರು ಉಪ ವಿಭಾಗಾಧಿಕಾರಿ, ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ, ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್‌ಸ್ಪೆಪೆಕ್ಟರ್​ ಅವರನ್ನು ಪ್ರತಿವಾದಿಗಳನ್ನಾಗಿ ಕಾಣಿಸಲಾಗಿದೆ.

ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ನೌಕರರ ಸಂಘದ​ ಅಧ್ಯಕ್ಷ ನಿಂಗರಾಜ ಕರೆಣ್ಣವರ್ ಮೇಲೆ ಹಲ್ಲೆ ಆರೋಪ : ಶಾಸಕ ಸವದಿ ವಿರುದ್ಧ ಎಫ್ಐಆರ್ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ ಆರೋಪದಡಿ ತಿಮರೋಡಿ ಅವರನ್ನು 2025ರ ಸೆಪ್ಟೆಂಬರ್ 18ರಂದು ಗಡಿಪಾರು ಮಾಡಿ ಆದೇಶಿಸಲಾಗಿತ್ತು. ಆ ಆದೇಶವನ್ನು ಹೈಕೋರ್ಟ್‌ 2025ರ ನವೆಂಬರ್ 17ರಂದು ರದ್ದುಪಡಿಸಿತ್ತು. ಅಂತೆಯೇ, ಪ್ರಕರಣವನ್ನು ಪುತ್ತೂರು ಉಪ ವಿಭಾಗಾಧಿಕಾರಿಗೆ ಹಿಂದಿರುಗಿಸಿದ್ದ ನ್ಯಾಯಪೀಠ, ‘ತಿಮರೋಡಿ ವಿವರಣೆ ಪಡೆದು ನಂತರ ಹೊಸದಾಗಿ ಆದೇಶ ಮಾಡಬೇಕು’ ಎಂದು ಉಪ ವಿಭಾಗಾಧಿಕಾರಿಗೆ ಆದೇಶಿಸಿತ್ತು.

ತಿಮರೋಡಿ ಅಹವಾಲು ಆಲಿಸಿದ ಉಪ ವಿಭಾಗಾಧಿಕಾರಿ, ತಿಮರೋಡಿ ಅವರನ್ನು 2025ರ ಡಿಸೆಂಬರ್ 16ರಿಂದ 2026ರ ಸೆಪ್ಟೆಂಬರ್ 16ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣೆ ಸರಹದ್ದಿಗೆ ಒಳಪಟ್ಟಂತೆ ಗಡಿಪಾರು ಮಾಡಿ ಡಿಸೆಂಬರ್ 16ರಂದು ಆದೇಶಿಸಿದ್ದರು.

ಇದನ್ನೂ ನೋಡಿ: ಮರ್ಯಾದೆಗೇಡು ಹತ್ಯೆ ನಿಷೇಧ ಕಾಯ್ದೆಗಾಗಿ ಪತ್ರ ಚಳವಳಿ Janashakthi Media

Donate Janashakthi Media

Leave a Reply

Your email address will not be published. Required fields are marked *