ಮಹಿಳಾ ಪ್ರಯಾಣಿಕರಿಗೆ ಸರ್ಕಾರಿ ಬಸ್‍ಗಳಲ್ಲಿ 50% ರಿಯಾಯಿತಿ: ಮುಖ್ಯಮಂತ್ರಿ ಜೈರಾಮ್‌ ಠಾಕೂರ್

ಶಿಮ್ಲಾ: ಹಿಮಾಚಲ ಪ್ರದೇಶದ ಎಚ್‍ಆರ್‌ಟಿಸಿ ಸರ್ಕಾರಿ ಬಸ್‍ಗಳಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಟಿಕೆಟ್ ದರದಲ್ಲಿ ಶೇಕಡಾ 50ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಜೈರಾಮ್ ಠಾಕೂರ್ ಘೋಷಣೆ ಮಾಡಿದ್ದಾರೆ.

75ನೇ ಹಿಮಾಚಲ ದಿನದ ಆಚರಣೆಯ ಅಂಗವಾಗಿ ಮುಖ್ಯಮಂತ್ರಿ ಜೈರಾಮ್‌ ಠಾಕೂರ್ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಸರ್ಕಾರಿ ಬಸ್‍ನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ 50% ರಿಯಾಯಿತಿ ಸೇರಿದಂತೆ 125 ಯೂನಿಟ್ ವರೆಗೆ ಗೃಹಬಳಕೆಯ ವಿದ್ಯುತ್ ಉಚಿತವಾಗಿ ನೀಡುವುದಾಗಿ ತಿಳಿಸಿದ್ದಾರೆ.

ಜಲ ಶಕ್ತಿ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶಗಳಿಗೆ ನೀರಿನ ಬಿಲ್‍ನಲ್ಲಿ ರಿಯಾಯಿತಿ ನೀಡಿದ್ದಾರೆ. ಈ ಹಿಂದೆ 60 ಯೂನಿಟ್‍ವರೆಗಿನ ಗೃಹ ಬಳಕೆಯ ವಿದ್ಯುತ್ ಉಚಿತ ಸೇರಿದಂತೆ ಸರ್ಕಾರಿ ಬಸ್‍ನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಶೇಕಡಾ 25 ರಿಯಾಯಿತಿ ನೀಡಲಾಗಿತ್ತು. ಇದೀಗ ಈ ರಿಯಾಯಿತಿಯನ್ನು ಇನ್ನಷ್ಟು ಹೆಚ್ಚಿಸಲಾಗಿದೆ.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ, ಪೊಲೀಸ್ ಹಾಗೂ ಮಿಲಿಟರಿ ಪಡೆಗಳಿಂದ ಧ್ವಜ ವಂದನೆ ಸ್ವೀಕರಿಸಿದರು. ಈ ಮೂಲಕ ಜನಪರ ಕಾರ್ಯಕ್ರಮಗಳನ್ನು ಘೋಷಿಸಿರುವ ಈ ವರ್ಷಾಂತ್ಯದಲ್ಲಿ ಹಿಮಾಚಲ ಪ್ರದೇಶದಲ್ಲಿ ನಡೆಯಲಿರುವ ಚುನಾವಣೆಗೆ ತಯಾರಿ ಆರಂಭವಾಗಿದೆ.

Donate Janashakthi Media

Leave a Reply

Your email address will not be published. Required fields are marked *