ಕೇಂದ್ರ ಬಜೆಟ್‌-2023-24 ಮಹಿಳಾ ಸಮ್ಮಾನ್​ ಯೋಜನೆ ಘೋಷಣೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿ ಬಜೆಟ್ಟಿನಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಮಹಿಳಾ ಸಮ್ಮಾನ್‌ ಎಂಬ ಹೊಸ ಯೋಜನೆಯನ್ನು ಪರಿಚಯಿಸಲಾಗಿದೆ.

ಮುಂಬರುವ ಚುನಾವಣೆಯನ್ನು ದೃಷ್ಠಿಯಲ್ಲಿಟ್ಟುಕೊಂಡಿರುವ ಕೇಂದ್ರದ ಬಿಜೆಪಿ ಸರ್ಕಾರ ಮಹಿಳಾ ಮತದಾರರನ್ನು ಆಕರ್ಷಿಸುವ ಉದ್ದೇಶದಿಂದ ಈ ಯೋಜನೆ ಘೋಷಿಸಿದೆ ಎನ್ನಲಾಗುತ್ತಿದೆ.

ಮಹಿಳೆಯರಿಗೆ ಸಣ್ಣ ಉಳಿತಾಯದ ಯೋಜನೆ ಯಾಗಿರುವ ಮಹಿಳಾ ಸಮ್ಮಾನ್‌ ಯೋಜನೆಯಡಿ ಮಹಿಳೆಯರಿಗೆ ಶೇ 7.5 ಬಡ್ಡಿ ದರದಲ್ಲಿ 2 ಲಕ್ಷದವರೆಗೆ ಮಹಿಳಾ ಸಮ್ಮಾನ್​ ಪ್ರಮಾಣ ಪತ್ರದ ಅಡಿಯಲ್ಲಿ ಠೇವಣಿ ಇಡುವ ಅವಕಾಶವನ್ನು ಕಲ್ಪಿಸಲಾಗಿದೆ. 2025ರ ವರೆಗೆ ಈ ಯೋಜನೆಯ ಅಡಿಯಲ್ಲಿ ಠೇವಣಿ ಮಾಡಬಹುದು.

ಈ ಯೋಜನೆಯ ಅಡಿಯಲ್ಲಿ ಸ್ಥಿರ ಬಡ್ಡಿದರದೊಂದಿಗೆ ಎರಡು ವರ್ಷದವರೆಗೆ ಠೇವಣಿ ಇಡಬಹುದು ಅಥವಾ ವಾಪಸ್ಸು ಪಡೆಯಬಹುದು. ಇದು ಮಹಿಳೆಯರಿಗೆ ಸಣ್ಣ ಉಳಿತಾಯವಾಗಲಿದೆ. ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ನೆನಪಿಗಾಗಿ ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದು ಹಣಕಾಸು ಸಚಿವೆ ತಿಳಿಸಿದ್ದಾರೆ.

ಇನ್ನು, ಮಹಿಳೆಯರ ಆರ್ಥಿಕ ಸಬಲೀಕರಣದ ದೀನದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್, ಗ್ರಾಮೀಣ ಮಹಿಳೆಯರನ್ನು 81 ಲಕ್ಷ ಸ್ವಸಹಾಯ ಗುಂಪುಗಳಾಗಿ ಸಜ್ಜುಗೊಳಿಸುವ ಮೂಲಕ ಗಮನಾರ್ಹ ಯಶಸ್ಸು ಸಾಧಿಸಿದೆ ಎಂದು ಬಜೆಟ್‌ನಲ್ಲಿ ವಿವರಿಸಲಾಗಿದೆ.

Donate Janashakthi Media

Leave a Reply

Your email address will not be published. Required fields are marked *