ಕರ್ನಾಟಕದಿಂದ ರಾಜ್ಯಸಭೆಗೆ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

ಬೆಂಗಳೂರು: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜೂನ್‌ 5ರಂದು ಕರ್ನಾಟಕದಿಂದ ರಾಜ್ಯಸಭೆ ಚುನಾವಣೆಗೆ ತಮ್ಮ ನಾಮಪತ್ರಗಳನ್ನು ವಿದಾನಸೌಧದಲ್ಲಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಕೆ.ಸಿ. ವೇಣುಗೋಪಾಲ್ ಸೇರಿದಂತೆ ಹಲವಾರು ಸಚಿವರು ಹಾಗೂ ಹಿರಿಯ ನಾಯಕರು ಹಾಜರಿದ್ದರು.

ಅಧಿಕಾರಿಗಳ ಪ್ರಕಾರ, ನಾಮಪತ್ರಗಳನ್ನು ವಿಧಾನಸಭಾ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿಗೆ ಸಲ್ಲಿಸಲಾಯಿತು.

ಇದನ್ನೂ ಓದಿ: ಜಂತರ್ ಮಂತರ್ ಪ್ರತಿಭಟನೆಗೆ ಸಿದ್ಧತೆ: ಸಿಜೆಪಿ ಸ್ಥಾಪಕ ಅಭಿಜೀತ್ ದೀಪ್ಕೆ ಭಾರತಕ್ಕೆ ಪ್ರಯಾಣ

ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಖರ್ಗೆಯವರ ಅವಧಿ ಜೂನ್ 25ರಂದು ಮುಕ್ತಾಯವಾಗಲಿದೆ. ಈ ನಡುವೆ, ಕರ್ನಾಟಕದಿಂದ ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಪವನ್ ಖೇರಾ ಮತ್ತು ಮನ್ಸೂರ್ ಅಲಿ ಖಾನ್ ಅವರನ್ನು ಕೂಡ ಅಭ್ಯರ್ಥಿಗಳಾಗಿ ಘೋಷಿಸಿದೆ.

ಪವನ್ ಖೇರಾ ಎಐಸಿಸಿ ಸದಸ್ಯರಾಗಿದ್ದು, ಪಕ್ಷದ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥರಾಗಿದ್ದಾರೆ.

ಮನ್ಸೂರ್ ಅಲಿ ಖಾನ್ ಎಐಸಿಸಿ ಕಾರ್ಯದರ್ಶಿಯಾಗಿದ್ದು, 2024ರ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಇದನ್ನೂ ನೋಡಿ: ಬೀದಿಬದಿ ವ್ಯಾಪಾರಿಗಳ ಮೇಲೆ GBA ದಾಳಿ – ಬೀದಿ ವ್ಯಾಪಾರಿಗಳ ಆಕ್ರೋಶ Janashakthi Media

Donate Janashakthi Media

Leave a Reply

Your email address will not be published. Required fields are marked *