ಕಾಂಗ್ರೆಸ್‌ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

  • ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಪ್ರಕಟ
  • ನಿರೀಕ್ಷೆಯಂತೆಯೇ ಮಲ್ಲಿಕಾರ್ಜುನ ಖರ್ಗೆಗೆ ಗೆಲುವು
  • ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಕರ್ನಾಟಕದ ಖರ್ಗೆ ಆಯ್ಕೆ

ನವದೆಹಲಿ: ದೇಶದಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಕಾಂಗ್ರೆಸ್‌ ಅಧ್ಯಕ್ಷರ ಚುನಾವಣೆಗೆ ತೆರೆಬಿದ್ದಿದೆ. ನಿರೀಕ್ಷೆಯಂತೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರು 7,000 ಕ್ಕೂ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್‌ ಅದ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಪ್ರತಿಸ್ಪರ್ಧಿ ಶಶಿ ತರೂರ್ ಅವರು ಕೇವಲ 1,000 ಮತಗಳನ್ನು ತಮ್ಮದಾಗಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ. ಖರ್ಗೆಯವರ ಗೆಲುವಿಗೆ ಕರ್ನಾಟಕ ಮತ್ತು ದೆಹಲಿಯಲ್ಲಿ ಅವರ ಕಚೇರಿ ಮುಂದೆ ಬೆಂಬಲಿಗರು ಸಂಭ್ರಮಾಚರಣೆ ಮಾಡುತ್ತಿದ್ದಾರೆ.

ಎಐಸಿಸಿ ಅಧ್ಯಕೀಯ ಚುನಾವಣೆಯಲ್ಲಿ ಒಟ್ಟು 9,385 ಮತಗಳು ಚಲಾವಣೆಗೊಂಡಿದ್ದವು. ಇದರಲ್ಲಿ 415 ಮತಗಳನ್ನು ಅಮಾನ್ಯಗೊಳಿಸಲಾಗಿತ್ತು. ಈ ಪೈಕಿ 7,897 ಮತಗಳನ್ನು ಪಡೆದ ಮಲ್ಲಿಕಾರ್ಜುನ ಖರ್ಗೆ ಜಯಭೇರಿ ಭಾರಿಸಿದ್ದಾರೆ. ಪ್ರತಿಸ್ಪರ್ಧಿಯಾಗಿದ್ದ ಶಶಿ ತರೂರ್‌  1,072 ಮತಗಳನ್ನು ಪಡೆದು ಸೋಲನ್ನು ಅನುಭವಿಸಿದ್ದಾರೆ. 22 ವರ್ಷಗಳ ಬಳಿಕ ಕಾಂಗ್ರೆಸ್‌ಗೆ ಗಾಂಧಿ ಕುಟುಂಬದ ಸದಸ್ಯರಲ್ಲದವರು ಆಯ್ಕೆಯಾಗಿರುವುದು ಪಕ್ಷಕ್ಕೆ ಹೊಸ ಹುರುಪು ನೀಡಲಿದೆ ಎಂಬ ಮಾತುಗಳೂ ಕೇಳಿಬಂದಿದೆ.

ಇದನ್ನೂ ಓದಿ : ಇಂದು ಎಐಸಿಸಿ (AICC) ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

ಖರ್ಗೆ ಅವರಿಗೆ ಪ್ರಬಲ ಪೈಪೋಟಿ ನೀಡುವ ವಿಶ್ವಾಸ ಹೊಂದಿದ್ದ ಶಶಿ ತರೂರ್, ಫಲಿತಾಂಶ ಪ್ರಕಟಿಸಿದ ಕೆಲವೇ ನಿಮಿಷಗಳಲ್ಲಿ “ನಮ್ಮ ಪಕ್ಷದ ಪುನಶ್ಚೇತನ ನಿಜಕ್ಕೂ ಇಂದು ಆರಂಭವಾಗಿದೆ” ಎಂದು ಹೇಳಿದ್ದಾರೆ. ಪಕ್ಷದ ನೂತನ ಚುನಾಯಿತ ಅಧ್ಯಕ್ಷ ಖರ್ಗೆ ಅವರನ್ನು ಅಭಿನಂದಿಸಿರುವ ತರೂರ್, “ಐಎನ್‌ಸಿಯ ಅಧ್ಯಕ್ಷರಾಗುವುದು ಮಹಾನ್ ಗೌರವ ಮತ್ತು ಭಾರಿ ಹೊಣೆಗಾರಿಕೆಯಾಗಲಿದೆ. ಆ ಕರ್ತವ್ಯದಲ್ಲಿ ಯಶಸ್ವಿಯಾಗಲಿ ಎಂದು ಖರ್ಗೆ ಅವರಿಗೆ ಹಾರೈಸುತ್ತೇನೆ. ಸಾವಿರಾರು ಸಹೋದ್ಯೋಗಿಗಳಿಂದ ಬೆಂಬಲ ಪಡೆದಿರುವುದು ಮತ್ತು ದೇಶಾದ್ಯಂತ ಕಾಂಗ್ರೆಸ್‌ನ ಅಷ್ಟೊಂದು ಹಿತೈಷಿಗಳ ಭರವಸೆ ಹಾಗೂ ಆಕಾಂಕ್ಷೆಗಳನ್ನು ಕೊಂಡೊಯ್ಯುವುದು ವಿಶೇಷ ಅವಕಾಶವಾಗಿದೆ” ಎಂದು ಹೇಳಿದ್ದಾರೆ.

6ನೇ ಬಾರಿಗೆ ಚುನಾವಣೆ: 137 ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೆಸ್‌ ಪಕ್ಷ, ಸ್ವಾತಂತ್ರ್ಯ ನಂತರ ಅಧ್ಯಕ್ಷರ ಆಯ್ಕೆಗೆ 6ನೇ ಬಾರಿ ಚುನಾವಣೆ ಕಂಡಿದೆ. 1939, 1950, 1977, 1997, 2000 ಮತ್ತು 2022 ಈ ಅವಧಿ ಚುನಾವಣೆ ನಡೆದಿದೆ. ಉಳಿದಂತೆ ಬಹುತೇಕ ಸಂದರ್ಭ ಗಾಂಧಿ ಕುಟುಂಬದ ವ್ಯಕ್ತಿಯನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. 2000ದಲ್ಲಿ ನಡೆದಿದ್ದ ಅಧ್ಯಕ್ಷರ ಚುನಾವಣೆಯಲ್ಲಿ ಸೋನಿಯಾ ಗಾಂಧಿ, ಎದುರಾಳಿ ಜಿತೇಂದ್ರ ಪ್ರಸಾದ್‌ ವಿರುದ್ಧ ಭಾರಿ ಅಂತರದಿಂದ ಗೆದ್ದು ಆಯ್ಕೆಯಾಗಿದ್ದರು

Donate Janashakthi Media

Leave a Reply

Your email address will not be published. Required fields are marked *