ಮಂಡ್ಯ : ಮಹಿಳೆ ಮೇಲೆ ಅತ್ಯಾಚಾರ ಮಾಡಿ ಕೊಲೆ

Please follow and like us:

ಮಂಡ್ಯ : ಮಹಿಳೆಯೊರ್ವಳ ಮೇಲೆ ಅತ್ಯಾಚಾರ ಮಾಡಿ ಕೊಲೆಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂನಲ್ಲಿ ಈ ಘಟನೆ ನಡೆದಿದೆ. ಗಂಗಾ ಮೃತಳಾದ ವ್ಯಕ್ತಿ. ಮೂಲತಃ ತಮಿಳುನಾಡಿನವರಾದ ಇವರು ಅಲೆಮಾರಿ ವರ್ಗಕ್ಕೆ ಸೇರಿದವರು ಎಂದು ತಿಳಿದು ಬಂದಿದೆ.

ಗಂಗಾ ಅಲೆಮಾರಿ ಜನರಾದ ಕಾರಣ ಮೂರ್ನಾಲ್ಕು ತಿಂಗಳಿಗೊಮ್ಮೆ ಒಂದೊಂದು ಪ್ರದೇಶಕ್ಕೆ ಗುಳೆ ಹೋಗುತ್ತಿದ್ದರು. ಮೂರು ತಿಂಗಳ ಹಿಂದೆಯಷ್ಟೇ ಶ್ರೀರಂಗಪಟ್ಟಣದ ಗಂಜಾಂಗೆ ಬಂದು ನೆಲೆಸಿದ್ರು. ರವಿವಾರ (ಮೇ.14) ತಡರಾತ್ರಿ ಯಾರೋ ದುಷ್ಕರ್ಮಿಗಳು ಗಂಗಾಳ ಮೇಲೆ ಅತ್ಯಾಚಾರ ನಡೆದಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ.

ಗಂಗಾ, ಕಾವೇರಿ ನದಿಯಲ್ಲಿ ನಾಣ್ಯ ಹುಡುಕುವ ಕೆಲಸವನ್ನ ಮಾಡುತ್ತಿದ್ದರು. ರವಿವಾರ ತಡರಾತ್ರಿ ಯಾರೊ ದುಷ್ಕರ್ಮಿಗಳು ಗಂಗಾಳಿಗೆ ಮದ್ಯಪಾನ ಮಾಡಿಸಿ, ಬಳಿಕ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮೃತದೇಹವನ್ನ ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಗೆ ರವಾನಿಸಲಾಗಿದ್ದು. ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Please follow and like us:
Donate Janashakthi Media

Leave a Reply

Your email address will not be published. Required fields are marked *