ಮಂಗಳೂರು: ದಲಿತ ಬಾಲಕಿಯ ಅತ್ಯಾಚಾರ; 3 ಸಂಘಪರಿವಾರದ ದುಷ್ಕರ್ಮಿಗಳ ಸೆರೆ; ಇನ್ನಿಬ್ಬರು ನಾಪತ್ತೆ

ದಲಿತ ಬಾಲಕಿಯ ಮೇಲೆ 2019ರಿಂದಲೂ ಅತ್ಯಾಚಾರ ನಡೆಸುತ್ತಿದ್ದ ದುಷ್ಕರ್ಮಿಗಳು

ಮಂಗಳೂರು: ಸಂಘ ಪರಿವಾರದ ಮೂವರು ದುಷ್ಕರ್ಮಿಗಳು ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ  ಪೊಲೀಸರು ಮೂವರು ಸಂಘಪರಿವಾರದ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಬಂಧಿತ ಆರೋಪಿಗಳನ್ನು ಮೂಡುಬಿದರೆ ಮೂಲದ ಪ್ರಸ್ತುತ ಬೆರಿಪದವಿ ನಿವಾಸಿ ಅಕ್ಷಯ್ ದೇವಾಡಿಗ (24), ಬಾಯಾರು ಗ್ರಾಮದ ಕೊಜಪ್ಪ ನಿವಾಸಿ ಕಮಲಾಕ್ಷ ಬೆಳ್ಚಾಡ (30), ಬೆರಿಪದವು ನಿವಾಸಿ ಸುಕುಮಾರ ಬೆಳ್ಚಾಡ (28) ಎಂದು ಗುರುತಿಸಲಾಗಿದೆ. ಬಾಲಕಿ ನೀಡಿದ ಮಾಹಿತಿಯಂತೆ ವಿಟ್ಲ ಠಾಣೆಯಲ್ಲಿ ಪೊಕ್ಸೋ ಹಾಗೂ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದೆ.

ಆರೋಪಿಗಳಲ್ಲಿ ಅಕ್ಷಯ್ ಬೆರಿಪದವಿನ ತನ್ನ ಅಣ್ಣನ ಮನೆಯಲ್ಲಿದ್ದುಕೊಂಡು ಪೈಟಿಂಗ್ ಕೆಲಸ ಮಾಡುತ್ತಿದ್ದರೆ, ಕಮಲಾಕ್ಷ ಗಾರೆ ಕೆಲಸ ಹಾಗೂ ಸುಕುಮಾರ ಚಾಲಕ ವೃತ್ತಿಯನ್ನು ಮಾಡಿಕೊಂಡಿದ್ದರು. ಮೂವರು ಆರೋಪಿಗಳೂ ಬಿಜೆಪಿ ಜೊತಗೆ ನಂಟಿರುವ ಸಂಘಪರಿವಾರ ಸಂಘಟನೆಗಳ ಕಾರ್ಯಕರ್ತರು ಎಂದು ಪೊಲೀಸರು ತಿಳಿಸಿದ್ದಾರೆ ವಾರ್ತಾಭಾರತಿ ವರದಿ ಹೇಳಿದೆ.

ಇದನ್ನೂ ಓದಿ: ನನ್ನ ಮಗಳನ್ನು ಕೊಂದವರಿಗೆ ಶಿಕ್ಷೆಯಾಗಬೇಕು – ಸೌಜನ್ಯ ತಾಯಿ

ಅತ್ಯಾಚಾರಕ್ಕೆ ಒಳಗಾರಿರುವ ಬಾಲಕಿಯು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿದವರಾಗಿದ್ದು, 2019ರಿಂದಲೂ ಅತ್ಯಾಚಾರಕ್ಕೆ ಒಳಗಾಗುತ್ತಲೆ ಇದ್ದಾರೆ ಎಂದು ವರದಿಯಾಗಿದೆ. 2019ನೇ ಇಸವಿಯಲ್ಲಿ ಆಕೆಯ ಸಂಬಂಧಿಕರ ಮನೆಯಲ್ಲಿ ಜಯಪ್ರಕಾಶ್‌ ಎಂಬಾತ ಅತ್ಯಾಚಾರ ನಡೆಸಿದ್ದನು.‌ ಅದಾಗಿ ಕಳೆದ ಜನವರಿಯಲ್ಲಿ ಅಚ್ಚು ಯಾನೆ ಅಕ್ಷಯ್‌ ಎಂಬಾತ ಬೆರಿಪದವು ಶಾಲೆಯ ಬಳಿಗೆ ಬಂದು ಬೇರೆ ಬೇರೆ ದಿನಗಳಲ್ಲಿ 3 ಬಾರಿ ಅತ್ಯಾಚಾರ ನಡೆಸಿದ್ದಾನೆ ಎಂದು ವರದಿಯಾಗಿದೆ.

ಕಳೆದ ಮೇ ತಿಂಗಳಿನಲ್ಲಿ ಬೆರಿಪದವು ರಾಜ ಎಂಬಾತ ಬಾಲಕಿಗೆ ಕರೆ ಮಾಡಿ ಮಾತನಾಡಿಕೊಂಡಿದ್ದು, ಬೆರಿಪದವು ವಿದ್ಯಾರಣ್ಯ ಶಾಲೆಯ ಗುಡ್ಡ ಜಾಗಕ್ಕೆ ಬರಲು ಹೇಳಿ, ಬಾಲಕಿಯನ್ನು ಮದುವೆಯಾಗುತ್ತೇನೆಂದು ಪುಸಲಾಯಿಸಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ನಡೆಸಿದ್ದಾರೆ. ಕಳೆದ ಜೂನ್‌ ತಿಂಗಳಿನ ಮೊದಲ ವಾರದಲ್ಲಿ ಅಚ್ಚು ಯಾನೆ ಅಕ್ಷಯ್‌ ಎಂಬಾತನ ಮುಖಾಂತರ ಸುಕುಮಾರ ಪರಿಚಯಿಸಿಕೊಂಡು ಮುದುವೆಯಾಗುತ್ತೇನೆಂದು ಬೆರಿಪದವು ಎಂಬಲ್ಲಿಗೆ ಬರಲು ಹೇಳಿ ಅಲ್ಲಿನ ವಿದ್ಯಾರಣ್ಯ ಶಾಲೆಯ ಗುಡ್ಡ ಜಾಗದಲ್ಲಿ ಬಾಲಕಿಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ನಡೆಸಿದ್ದಾನೆ.

ಅಲ್ಲದೆ ದಿನಾಂಕ 28.07.2023 ರಂದು ರಾತ್ರಿ ವೇಳೆ ಕಮಾಲಾಕ್ಷ ಬೆಳ್ಚಡ ಮದುವೆಯಾಗುತ್ತೇನೆಂದು ಭರವಸೆ ನೀಡಿ, ಆತನ ಮನೆಯಿರುವ ಬಾಯಾರು ಗ್ರಾಮದಲ್ಲಿರುವ ಅವರ ಸಂಬಂಧಿಯವರ ಖಾಲಿ ಮನೆಗೆ ಬರಲು ಹೇಳಿ ಬಾಲಕಿಯು ಹೋದಾಗ ಬಾಲಕಿಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ಮಾಡಿದ್ದಾನೆ. ಈ ಎಲ್ಲ ಘಟನೆಗಳನ್ನು ಬಾಲಕಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದು, ಅದರಂತೆ ಪೋಸ್ಕೋ-ಅತ್ಯಾಚಾರ ಪ್ರಕರಣ ದಾಖಲಾಗಿದೆ. ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಡಿಯೊ ನೋಡಿ: ನನ್ನ ಮಗಳನ್ನು ಕೊಂದವರಿಗೆ ಶಿಕ್ಷೆಯಾಗಬೇಕು – ಸೌಜನ್ಯ ತಾಯಿ Janashakthi Media

 

Donate Janashakthi Media

Leave a Reply

Your email address will not be published. Required fields are marked *