ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿಯ 66ರ ಸುರತ್ಕಲ್-ಎನ್ಐಟಿಕೆ ಬಳಿ ಇರುವ ಟೋಲ್ಗೇಟ್ ಹತ್ತಿರ ವೈದ್ಯಕೀಯ ವಿದ್ಯಾರ್ಥಿಗಳನ್ನು ಸಂಘ ಪರಿವಾರದ ಕಾರ್ಯಕರ್ತರೆನ್ನಲಾದ ತಂಡವೊಂದು ಅವರನ್ನು ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿರುವ ಘಟನೆಯನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯವರೇ, ಮಂಗಳೂರಿನಲ್ಲಿ ಇರುವುದು ಬಿಜೆಪಿ ಸರ್ಕಾರನಾ? ಅಥವಾ ತಾಲಿಬಾನ್ಗಳದ್ದಾ? ಎಂದು ಟ್ವೀಟ್ ಮಾಡಿದ್ದಾರೆ.
ಸೆಪ್ಟೆಂಬರ್ 26ರಂದು ಜೀಪಿನಲ್ಲಿ ತೆರಳುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಗಳನ್ನು ತಂಡವೊಂದು ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿಗೊಳಿಸಿ ಹಲ್ಲೆ ನಡೆಸಿದ್ದಾರೆ. ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆ ಬಳಿಕ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಇಲಾಖೆ ನೆನ್ನೆ ರಾತ್ರಿ ಬಜರಂಗ ದಳದ ಜಿಲ್ಲಾ ಪ್ರಮುಖ ಪ್ರೀತಂ ಶೆಟ್ಟಿ, ಬಜರಂಗ ದಳ ಸುರತ್ಕಲ್ ಪ್ರಖಂಡ ಪ್ರಮುಖ ಅರ್ಶಿತ್, ಶ್ರೀನಿವಾಸ್, ರಾಕೇಶ್, ಅಭಿಷೇಕ್ ಎಂಬವರನ್ನು ಬಂಧಿಸಿದೆ ಬಂಧಿತ ಆರೋಪಿಗಳ ವಿರುದ್ಧ ಐಪಿಎಸ್ ಸೆಕ್ಷನ್ 341, 323, 504ರಡಿ ಪ್ರಕರಣ ದಾಖಲಿಸಿ ಠಾಣೆಯಲ್ಲೇ ಜಾಮೀನು ನೀಡಿ ಬಿಡುಗಡೆಗೊಳಿಸಲಾಗಿದೆ.
ಈ ಪ್ರಕರಣವನ್ನು ಪೊಲೀಸರು ನಿಭಾಯಿಸಿದ ಕ್ರಮಕ್ಕೆ ಸಾರ್ವಜನಿಕರಿಂದ ಅಸಮಾಧಾನ ವ್ಯಕ್ತವಾಗಿದೆ.