ಬೆಳಗಾವಿ: ಮಹಾನಗರ ಪಾಲಿಕೆಯಲ್ಲಿ ಮತ್ತಮೊಮ್ಮೆ ಬಿಜೆಪಿಯ ಕೈಮೇಲಾಗಿದ್ದೂ, ಪಾಲಿಕೆ ಮೇಯರ್ ಪಟ್ಟ ಮಗದೊಮ್ಮೆ ಬಿಜೆಪಿಗೆ ಒಲಿದಿದೆ. ಪಾಲಿಕೆ ಸದಸ್ಯ ಮಂಗೇಶ ಪವಾರ ಮೇಯರ್ ಆಗಿ ಹಾಗೂ ಉಪಮೇಯರ್ ಆಗಿ ವೀಣಾ ಜೋಶಿ ಆಯ್ಕೆಯಾಗಿದ್ದಾರೆ. ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಬಸವರಾಜ ಮೊದಗೇಕರ್ ತೀವ್ರ ಹಿನ್ನಡೆ ಅನುಭವಿಸಿದ್ದಾರೆ.
ಗದ್ದುಗೆ ಏರಲು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ನಾಯಕರು ಭಾರೀ ತಂತ್ರ-ಪ್ರತಿತಂತ್ರ ರೂಪಿಸಿದ್ದರಿಂದ ತೀವ್ರ ಕುತೂಹಲ ಮೂಡಿಸಿತ್ತು. ಕೊನೆಗೂ ಇಂದು ಈ ಕುತೂಹಲಕ್ಕೆ ತೆರೆ ಬಿದ್ದಿದೆ. ಸದ್ಯ ಬೆಳಗಾವಿ ಪಾಲಿಕೆ ಬಿಜೆಪಿ ಮಡಿಲಿಗೆ ಸೇರಿದೆ.
ಇದನ್ನೂ ಓದಿ: ಶುಶ್ರೂಷಕಿ ಸ್ವಾತಿ ಬ್ಯಾಡಗಿ ಕೊಲೆ ಪ್ರಕರಣ: 2 ಆರೋಪಿಗಳ ಬಂಧನ
3ನೇ ಅವಧಿಗೆ ಮೇಯರ್, ಉಪಮೇಯರ್ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ ಕೈ ಎತ್ತುವ ಮೂಲಕ ಆಯ್ಕೆಗೆ ಚುನಾವಣಾಧಿಕಾರಿ ಅವಕಾಶ ಕಲ್ಪಿಸಿದ್ದರು. ಮಂಗೇಶ್ ಪರ 40 & ವಿರುದ್ಧ 5 ಮತಗಳು ಚಲಾವಣೆ ಆಗಿವೆ. ಇನ್ನು ವೀಣಾ ಪರ 40 ಮತ್ತು ವಿರುದ್ಧವಾಗಿ ಬರೋಬ್ಬರಿ 19 ಮತಗಳು ಚಲಾವಣೆಯಾಗಿವೆ.
ಕನ್ನಡ ಹಾಗೂ ಮರಾಠ ಸಮುದಾಯಗಳನ್ನು ಬಿಜೆಪಿ ಈ ಬಾರಿ ಓಲೈಕೆ ಮಾಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಪ್ರತಿಸ್ಪರ್ಧಿ ಬಸವರಾಜ ಮೊದಗೇಕರ್ 20 ಮತಗಳನ್ನು ಪಡೆದರೆ ಪ್ರತಿಸ್ಪರ್ಧಿ ಲಕ್ಷ್ಮೀ ಲೋಕರಿ 20 ವೋಟ್ಗಳನ್ನು ಪಡೆದಿದ್ದಾರೆ.
ಇದನ್ನೂ ನೋಡಿ: LIVE: ಜನಚಳುವಳಿಗಳ ಬಜೆಟ್ ಅಧಿವೇಶನ