ಮಾವಿಗೆ ಬೆಂಬಲ ಖರಿದಿ ಮೀತಿ 200 ಕ್ವಿಂಟಲ್‌ ಗೆ ವಿಸ್ತರಣೆ

ಬೆಂಗಳೂರು :  ರಾಜ್ಯದ ಮಾವು ಬೆಳೆಗಾರರಿಂದ ಬೆಂಬಲ ಬೆಲೆಯಡಿ ಮಾವು ಖರೀದಿಗೆ ಈ ಮೊದಲು ನಿಗದಿಪಡಿಸಿದ್ದ ಗರಿಷ್ಠ ಮಿತಿಯನ್ನು ದುಪ್ಪಟ್ಟು ಗೊಳಿಸಿ ಸರ್ಕಾರ ಆದೇಶಿಸಿದೆ.ಈ ಮೊದಲು ಪ್ರತಿ ಮಾವು ಬೆಳೆಗಾರರಿಂದ ಪ್ರತಿ ಎಕರೆಗೆ 20 ಕ್ವಿಂಟಲ್‌ನಂತೆ ಗರಿಷ್ಠ 5 ಎಕರೆಗೆ 100 ಕ್ವಿಂಟಲ್‌ವರೆಗೆ ಮಿತಿಗೊಳಿಸಲಾಗಿತ್ತು. ಇದೀಗ ಈ ಮಿತಿಯನ್ನು ಪ್ರತಿ ಎಕರೆಗೆ 40 ಕ್ವಿಂಟಲ್‌ನಂತೆ ಗರಿಷ್ಠ 5 ಎಕರೆಗೆ 200 ಕ್ವಿಂಟಲ್‌ವರೆಗೆ ಖರೀದಿ ಪ್ರಮಾಣ ಹೆಚ್ಚಿಸಿ ಪರಿಷ್ಕೃತ ಆದೇಶ ಹೊರಡಿಸಿದೆ. ಮಾವಿಗೆ

ರಾಜ್ಯದಲ್ಲಿ ಮಾವು ಬೆಲೆ ತೀವ್ರ ನೆಲಕಚ್ಚಿದ್ದರಿಂದ ಮಾವು ಬೆಳೆಗಾರರ ನೆರವಿಗೆ ಧಾವಿಸಿದ್ದ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದೊಂದಿಗೆ ಸಂವಹನ ನಡೆಸಿ ಬೆಂಬಲ ಬೆಲೆಯಡಿ ಮಾವು ಖರೀದಿಗೆ ಕ್ರಮ ವಹಿಸಿತ್ತು. ಪ್ರತಿ ಕೆ.ಜಿ ಮಾವಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಲಾ 2 ರು. ನಂತೆ ಒಟ್ಟು 4 ರು. ಬೆಂಬಲ ಬೆಲೆಯೊಂದಿಗೆ ಮಾವು ಖರೀದಿಗೆ ಕಳೆದ ಜೂನ್‌ 25 ರಂದು ಆದೇಶ ಹೊರಡಿಸಲಾಗಿತ್ತು.

ಈ ವೇಳೆ ಪ್ರತಿ ರೈತನಿಂದ ಖರೀದಿಗೆ ನಿಗದಿಪಡಿಸಿದ್ದ ಗರಿಷ್ಠ ಮಿತಿಯನ್ನು ಈಗ ಪರಿಷ್ಕರಿಸಲಾಗಿದೆ. ಕೃಷಿ ಸಚಿವ ಎನ್. ಚಲುವರಾಯಸ್ವಾಮಿರವರು ಖರೀದಿ ಮಿತಿ ವಿಸ್ತರಣೆ ಕುರಿತಂತೆ ಪತ್ರ ಬರೆದು ಕೇಂದ್ರಕ್ಕೂ ಮನವಿ ಮಾಡಿದ್ದು, ಖರೀದಿ ಕೇಂದ್ರಗಳಲ್ಲಿ ಅಗತ್ಯ ಕ್ರಮಕ್ಕೆ ನಿರ್ದೇಶನ ನೀಡಿದ್ದಾರೆ.

ಇದನ್ನೂ ಓದಿ:ʼಜೀವಮಾನ ಸಾಧನೆ ಪ್ರಶಸ್ತಿʼಗೆ ಹಿರಿಯ ಪತ್ರಕರ್ತ ಸನತ್‌ ಕುಮಾರ ಬೆಳಗಲಿ ಆಯ್ಕೆ

ಎಂಎಸ್​ಐ ಯೋಜನೆಯಡಿ ಖರೀದಿಗೆ ಕೇಂದ್ರ ಒಪ್ಪಿಗೆ: ಜೂನ್​ 11 ಹಾಗೂ 13 ರಂದು ಎಂಐಎಸ್ (ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆ)​ ಯೋಜನೆಯಡಿ ಮಾವು ಖರೀದಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ರಾಜ್ಯದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಕೇಂದ್ರ ಕೃಷಿ ಸಚಿವ ಶಿವರಾಜ್​ ಸಿಂಗ್​ ಚೌಹಾಣ್​ ಅವರು, ಜೂನ್ 25ರಂದು ಎಂಎಸ್​ಐ ಯೋಜನೆಯಡಿ ಮಾವಿಗೆ ಬೆಂಬಲ ಬೆಲೆ ಘೋಷಿಸಿದ್ದರು. ಜೊತೆಗೆ 2025-26ನೇ ಸಾಲಿನ ಮಾರುಕಟ್ಟೆ ಋತುವಿನಲ್ಲಿ ಮಾವಿಗೆ ಪಿಡಿಪಿಎಸ್​ ಯೋಜನೆ ಅನುಷ್ಠಾನಕ್ಕೂ ಸಮ್ಮತಿ ನೀಡಿದ್ದರು. ಆ ಯೋಜನೆಯಡಿ 2.5 ಲಕ್ಷ ಮೆಟ್ರಿಕ್​ ಟನ್​ ಮಾವು ಖರೀದಿಗೂ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

ಇದನ್ನೂ ನೋಡಿ : ಪರಿಸರ ಜಾಗೃತಿ | ‘ಪ್ಲಾಸ್ಟಿಕ್ ಬಳಕೆಯಿಂದ ಜೀವರಾಶಿಗೆ ಅಪಾಯ‘ Janashakthi Media

Donate Janashakthi Media

Leave a Reply

Your email address will not be published. Required fields are marked *