ಇಂಫಾಲ:ಹಿಂಸಾಚಾರ ಪೀಡಿತ ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಸಿಬ್ಬಂದಿಗಳು ಗಾಯಗೊಂಡಿರುವ ಘಟನೆ ನಡೆದಿದೆ.
ರಾಜಧಾನಿ ಇಂಫಾಲದಿಂದ 50 ಕಿ.ಮೀ ದೂರದಲ್ಲಿ ಘಟನೆ ನಡೆದಿದೆ. ಗುರುವಾರ ಬೆಳ್ಳಿಗೆ ಆರಂಭವಾದ ಗುಂಡಿನ ದಾಳಿ ಶುಕ್ರವಾರ ಬೆಳಗಿನ ಜಾವದವರೆಗೂ ಮುಂದುವರೆದಿತ್ತು. ಘಟನೆಯಲ್ಲಿ ಜನರಿಲ್ಲದೆ ಖಾಲಿ ಇದ್ದ ಮನೆಯೊಂದಕ್ಕೆ ಬೆಂಕಿ ಬಿದ್ದಿದ್ದು ಸಂಪೂರ್ಣವಾಗಿ ಸುಟ್ಟು ಹೋಗಿದೆ.
ಇದನ್ನೂ ಓದಿ:ಮಣಿಪುರದಲ್ಲಿ ಮಹಿಳೆಯರನ್ನು ನಗ್ನಗೊಳಿಸಿ ಮೆರವಣಿಗೆ ಪ್ರಕರಣ:14 ಆರೋಪಿಗಳ ಗುರುತು ಪತ್ತೆ
ಘಟನೆ ನಡೆದ ಸುತ್ತಲಿನ ಪ್ರದೇಶಗಳಲ್ಲಿ ಡ್ರೋನ್ ಕಾರ್ಯಚರಣೆ ನಡೆಸಲಾಗುತ್ತಿದ್ದು, ದುಷ್ಕರ್ಮಿಗಳು ಗಾಯಗೊಂಡಿದ್ದಾರೆಯೇ ಎನ್ನುವ ಬಗ್ಗೆ ಇನ್ನಷ್ಟೇ ತಿಳಿಯಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಮೂರು ತಿಂಗಳಿನಿಂದ ನಡೆಯುತ್ತಿರುವ ಮೈತೇಯಿ ಮತ್ತು ಕುಕಿ ಸಮುದಾಯದ ನಡುವಿನ ಸಂಘರ್ಷ ಹಲವು ಅಹಿತಕರ ಘಟನೆಗಳಿಗೂ ಕಾರಣವಾಗಿದ್ದು,ಈ ವರೆಗೆ 160ಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ.