ಮಣಿಪುರ ಹಿಂಸಾಚಾರ:ತನಿಖೆ ಮೇಲ್ವಿಚಾರಣೆಗೆ ತ್ರಿಸದಸ್ಯ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಮಣಿಪುರ ಹಿಂಸಾಚಾರ ಪ್ರಕರಣ ಸಂಬಂಧ ತನಿಖೆಯ ಮೇಲ್ವಿಚಾರಣೆ ನಡೆಸಲು ಹಾಗೂ ಪರಿಹಾರಗಳನ್ನು ಸೂಚಿಸಲು ಸುಪ್ರೀಂ ಕೋರ್ಟ್‌ ಮೂವರು ನಿವೃತ್ತ ನ್ಯಾಯಮೂರ್ತಿಗಳನ್ನು ಒಳಗೊಂಡ ಸಮಿತಿಯೊಂದನ್ನು ಸೋಮವಾರ ರಚಿಸಿದೆ.

ಸುಪ್ರೀಂ ಕೋರ್ಟ್‌ ಸೋಮವಾರ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ ಮಾಜಿ ಮುಖ್ಯನ್ಯಾಯಮೂರ್ತಿ ಗೀತಾ ಮಿತ್ತಲ್‌ ಅವರ ನೇತೃತ್ವದಲ್ಲಿ ಮಣಿಪುರದಲ್ಲಿ ನಡೆದ ಹಿಂಸಾಚಾರ ಘಟನೆಗಳ ಕುರಿತು ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಮಣಿಪುರ ಪೊಲೀಸರು ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ನಡೆಸುತ್ತಿರುವ ತನಿಖೆಯನ್ನು ಪರಿಶೀಲಿಸಲು ಮೂವರು ಸದಸ್ಯರ ಎಲ್ಲಾ ಮಹಿಳಾ ನ್ಯಾಯಾಂಗಾ ಸಮಿತಿಯನ್ನು ರಚಿಸಿದೆ ಜೊತೆಗೆ ಈ ಸಮಿತಿಯಲ್ಲಿ ಮಾಜಿ ನ್ಯಾಯಮೂರ್ತಿಗಳಾದ ಶಾಲಿನಿ ಜೋಶಿ ಮತ್ತು ಆಶಾ ಮೆನನ್‌ ಕೂಡ ಇರಲಿದ್ದಾರೆ.

ಇದನ್ನೂ ಓದಿ:ಮಣಿಪುರ ಬೆತ್ತಲೆ ಮೆರವಣಿಗೆ ಐವರು ಪೊಲೀಸರ ಅಮಾನತು

ಸಿಬಿಐ ಹಾಗೂ ಪೊಲೀಸರು ನಡೆಯುತ್ತಿರುವ ತನಿಖೆಗಳನ್ನು ಪರಿಶೀಲಿಸುವ ಮತ್ತು ಪರಿಹಾರ ಕ್ರಮಗಳು ಹಾಗೂ ಪುನರ್ವಸತಿ ಕಲ್ಪಿಸುವ ಕೆಲಸ ಈ ಸಮಿತಿಯು ಮಾಡಲಿದೆ ಎಂದು ಕೋರ್ಟ್‌ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಮನೋಜ್‌ ಮಿಶ್ರಾ ಮತ್ತು ಜೆ.ಬಿ ಪರ್ದಿವಾಲಾ ಅವರನ್ನೊಳಗೊಂಡ ನ್ಯಾಯಪೀಠವು ಅರ್ಜಿ ವಿಚಾರನೆ ನಡೆಸಿತು.

ಮಹಿಳಾ ನ್ಯಾಯಮೂರ್ತಿಗಳನ್ನು ಒಳಗೊಂಡ ಸಮಿತಿಯನ್ನು ಕಾನೂನಿನ ನಂಬಿಕೆಯನ್ನು ಖಚಿತಪಡಿಸಿಕೊಳ್ಳಲು ರಚಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದೆ ನ್ಯಾಯಪೀಠ ಹೇಳಿದೆ.

Donate Janashakthi Media

Leave a Reply

Your email address will not be published. Required fields are marked *