ಮಣಿಪುರ ಹಿಂಸಾಚಾರ: ರೈಲು ಸಂಚಾರ, ಇಂಟರ್ನೆಟ್ ಸ್ಥಗಿತ

ಇಂಫಾಲ್‌ : ಮಣಿಪುರದಲ್ಲಿ ಬುಡಕಟ್ಟು ಮತ್ತು ಬುಡಕಟ್ಟು ಅಲ್ಲದ ಗುಂಪುಗಳ ನಡುವಿನ ಹಿಂಸಾಚಾರವನ್ನು ಹತ್ತಿಕ್ಕಲು ಮಣಿಪುರ ಸರ್ಕಾರವು ಗುರುವಾರ ಐದು ದಿನಗಳ ಕಾಲ ಬ್ರಾಡ್‌ಬ್ಯಾಂಡ್ ಇಂಟರ್ನೆಟ್ ಸೇವೆಗಳನ್ನು ನಿಷೇಧಿಸಿದೆ. ಈ ಬೆನ್ನಲ್ಲೇ ಇದೀಗ ಈಶಾನ್ಯ ಗಡಿ ರೈಲ್ವೆ ರಾಜ್ಯದಲ್ಲಿ ರೈಲು ಸೇವೆಗಳನ್ನು ನಿಲ್ಲಿಸಲು ಆದೇಶಿಸಿದೆ. ಪರಿಸ್ಥಿತಿ ಸುಧಾರಿಸುವವರೆಗೆ ಯಾವುದೇ ರೈಲುಗಳು ಮಣಿಪುರ ಪ್ರವೇಶಿಸುತ್ತಿಲ್ಲ.

ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಈಶಾನ್ಯ ಗಡಿ ರೈಲ್ವೇಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಸಬ್ಯಸಾಚಿ ಡಿ, ”ಪರಿಸ್ಥಿತಿ ಸುಧಾರಿಸುವವರೆಗೆ ಯಾವುದೇ ರೈಲುಗಳು ಮಣಿಪುರವನ್ನು ಪ್ರವೇಶಿಸುವುದಿಲ್ಲ. ರೈಲು ಸಂಚಾರವನ್ನು ನಿಲ್ಲಿಸುವಂತೆ ಮಣಿಪುರ ಸರ್ಕಾರ ಸಲಹೆ ನೀಡಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ” ಎಂದು ತಿಳಿಸಿದ್ದಾರೆ.ನಾಲ್ಕು ರೈಲುಗಳನ್ನು ರದ್ದುಗೊಳಿಸಲಾಗಿದೆ ಮತ್ತು ಮೇ 5-6 ಕ್ಕೆ ಮಾತ್ರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಭಾರತೀಯ ರೈಲ್ವೆ ಹೇಳಿದೆ.

ಇದನ್ನೂ ಓದಿಮಣಿಪುರ: ಪ್ರತಿಭಟನೆ ವೇಳೆ ಭುಗಿಲೆದ್ದ ಹಿಂಸಾಚಾರ! 8000ಕ್ಕೂ ಹೆಚ್ಚು ಜನರ ಸ್ಥಳಾಂತರ

ಮಣಿಪುರ ರಾಜ್ಯದಲ್ಲಿ ಅಲ್ಲಿಯ ಸರ್ಕಾರ ಈಗಾಗಲೇ ಮುನ್ನೆಚ್ಚರಿಕೆ ಕ್ರಮವಾಗಿ, ಮುಂದಿನ ಐದು ದಿನಗಳವರೆಗೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ. ರಾಜ್ಯದಲ್ಲಿ ಬುಡಕಟ್ಟು ಜನಾಂಗದವರು ಮತ್ತು ಬಹುಸಂಖ್ಯಾತ ಮೇಟಿ ಸಮುದಾಯದ ನಡುವೆ ವ್ಯಾಪಕ ಹಿಂಸಾಚಾರವನ್ನು ತಡೆಗಟ್ಟಲು ರಾಜ್ಯ ಸರ್ಕಾರವು ಆದೇಶಗಳನ್ನು ಹೊರಡಿಸಿದೆ. 9,000 ಕ್ಕೂ ಹೆಚ್ಚು ಸ್ಥಳಾಂತರಗೊಂಡಿದ್ದಾರೆ. ಸ್ಥಳದಲ್ಲಿ ಇದೀಗ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಪರಿಸ್ಥಿತಿ ಹತೋಟಿಯಲ್ಲಿಡಲು ಧ್ವಜ ಮೆರವಣಿಗೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *