ನವದೆಹಲಿ: ಮೇ 4 ರಂದು ನಡೆದ ಘಟನೆಯ ವಿಡಿಯೊ ಕಳೆದ ವಾರ ಸಾಮಾಜಿಕ ಮಾಧ್ಯಮದ ಮೂಲಕ ಪ್ರಕರಣ ಹೊರಬಿದ್ದತ್ತು. ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ನಡೆಸಿ, ಲೈಗಿಂಕ ದೌರ್ಜನ್ಯ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಐಬಿ) ತನಿಖೆ ನಡೆಸಲಿದೆ ಎಂದು ಸರ್ಕಾರದ ಉನ್ನತ ಅಧಿಕಾರಿಯೊಬ್ಬರು ಗುರುವಾರ ಹೇಳಿದ್ದಾರೆ.
ಜನಾಂಗೀಯ ಹಿಂಸಾಚಾರದಿಂದ ಭಾಗಶಃ ನಲುಗಿಹೋದ ಮಣಿಪುರದಲ್ಲಿನ ಎಲ್ಲಾ ಘೋರ ಅರಪರಾಧಗಳಲ್ಲಿ ಆರೋಪಿಗಳ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳುವ ಯಾವುದೇ ಪ್ರಯತ್ನವನ್ನು ಬಿಡುವುದಿಲ್ಲ ಎಂದು ಅವರು ಹೇಳಿದ್ದಾರೆ. ಸರ್ಕಾರ ಈ ಹೇಯ ಕೃತ್ಯದ ವಿಚಾರಣೆಯನ್ನು ನಡೆಸುವಂತೆ ಕೇಂದ್ರ ಸಿಬಿಐ ಅನ್ನು ಕೋರಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.ಘಟನೆಯನ್ನು ಚಿತ್ರೀಕರಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಬಳಿಯಿಂದ ಮೊಬೈಲ್ ಪೋನ್ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಇದನ್ನೂ ಓದಿ:ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ:ಪ್ರತಿರೋಧವಾಗಿ ಹೊರ ಹೊಮ್ಮಿದ ಕವಿತೆಗಳು
ಶುಕ್ರವಾರ ಸರ್ಕಾರ ಮಣಿಪುರದ ಹೊರಗೆ ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್‌ಗೆ ತೆರಳುವ ಸಾಧ್ಯತೆಯಿದೆ.ಕೇಂದ್ರ ಗೃಹ ಸಚಿವಾಲಯವು ಮೈತೇಯಿ ಮತ್ತಯ ಕುಕಿ ಎರಡೂ ಸಮುದಾಯಗಳ ಮುಖಂಡರೊಂದಿಗೆ ಸಂಪರ್ಕದಲ್ಲಿದೆ.ರಾಜ್ಯದಲ್ಲಿ ಶಾಂತಿ ಪುನಃಸ್ಥಾಪಿಸಲು ಮಾತುಕತೆ ಮುಂದುವರಿದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮಣಿಪುರದಲ್ಲಿ ಅಧಿಕೃತ ದಾಖಲೆಗಳ ಪ್ರಕಾರ ಮೂರು ತಿಂಗಳಿಂದ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದಲ್ಲಿ ಸುಮಾರು 150 ಜನರು ಸಾವಿಗೀಡಾಗಿದ್ದಾರೆ. ಮಣಿಪುರದ ಹಿಂಸಾಚಾರಕ್ಕೆ ಸಂಬಂಧಿಸಿದ 5 ಗಂಭೀರ ಪ್ರಕರಣಗಳ ತನಿಖೆಯನ್ನು ಈಗಾಗಲೇ ಸಿಬಿಐಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.