ಮಣಿಪುರದಲ್ಲಿ ಮಹಿಳೆಯರನ್ನು ನಗ್ನಗೊಳಿಸಿ ಮೆರವಣಿಗೆ ಪ್ರಕರಣ:14 ಆರೋಪಿಗಳ ಗುರುತು ಪತ್ತೆ

ಇಂಫಾಲ: ಮೇ4 ರಂದು ಕಾಂಗ್‌ಪೋಕ್ಷಿ ಜಿಲ್ಲೆಯಲ್ಲಿ ಮಹಿಳೆಯರನ್ನು ನಗ್ನಗೊಳಿಸಿ ಮೆರವಣಿಗೆ ಮಾಡಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದ ಇನ್ನೂ 14 ಜನರನ್ನು ಗುರುತು ಪತ್ತೆ ಮಾಡಲಾಗಿದ್ದು ಅವರ ಬಂಧನಕ್ಕೂ ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ಮಣಿಪುರ ಪೊಲೀಸರು ಹೇಳಿದ್ದಾರೆ.

ಮಹಿಳೆಯರನ್ನು ನಗ್ನ ಮೆರವಣಿಗೆ ನಡೆದ ಘಟನೆಯ ವಿಡಿಯೊ ಬಹಿರಂಗವಾದ ಬಳಿದ 6 ಜನರದನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.ಈ  ಕೃತ್ಯದ ವಿಡಿಯೊ ಜುಲೈ 19ರಂದು ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿತ್ತು ವಿಡಿಯೊದಲ್ಲಿರುವ ಒಬ್ಬ ಮಹಿಳೆಯ ಪತಿ ಮಾಜಿ ಯೋಧರಾಗಿದ್ದು ಅಸ್ಸಾಂ ರೆಜಿಮೆಂಟ್‌ನಲ್ಲಿ ಸುಬೇದಾರ್‌ ಆಗಿ ಸೇವೆ ಸಲ್ಲಿಸಿದ್ದರು. ಕಾರ್ಗಿಲ್‌ ಯುದ್ಧದಲ್ಲೂ ಹೋರಾಡಿದ್ದರು.ಪ್ರಕರಣ ಸಂಬಂಧ ಜೂನ್‌ 21 ರಂದೇ ಸೈಕುಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂಓದಿ:ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ:ಪ್ರತಿರೋಧವಾಗಿ ಹೊರ ಹೊಮ್ಮಿದ ಕವಿತೆಗಳು

ನಗ್ನಗೊಳಿಸಿ ಮೆರವಣಿಗೆ ಮಾಡಿದ್ದಲ್ಲದೆ,ಇಬ್ಬರೂ ಮಹಿಳೆಯರನ್ನು ಬಿಡುಗಡೆ ಮಾಡುವ ಮೊದಲು ದುಷ್ಕರ್ಮಿಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

 

Donate Janashakthi Media

Leave a Reply

Your email address will not be published. Required fields are marked *