ನವದೆಹಲಿ: ಪ್ರಜಾಸತ್ತಾತ್ಮಕ ವಿಧಾನಗಳಿಂದ ಚುನಾವಣೆಗಳನ್ನು ಗೆಲ್ಲಲು ವಿಫಲವಾದ ಮೋದಿ ಆಡಳಿತವು ಪ್ರತಿಪಕ್ಷಗಳನ್ನು ಗುರಿಯಾಗಿಸಿಕೊಂಡು ಭಾರತದಲ್ಲಿ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲು ಕೇಂದ್ರೀಯ ಸಂಸ್ಥೆಗಳನ್ನು ಬಳಸುತ್ತಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಸಿಪಿಐ(ಎಂ) ಪೊಲಿಟ್‍ಬ್ಯುರೊ, ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿರುವುದನ್ನು ಖಂಡಿಸುತ್ತ ಹೇಳಿದೆ.
ಇದನ್ನು ಓದಿ: ಸಿಸೋಡಿಯಾ ಬಂಧನ ಬೆನ್ನಲ್ಲೇ ಹಲವು ಎಎಪಿ ನಾಯಕರ ಬಂಧನ!
ಅವರ ಬಂಧನ ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಲು ಕೇಂದ್ರ ತನಿಖಾ ಸಂಸ್ಥೆಗಳನ್ನು ಅಸ್ತ್ರವಾಗಿಸಿಕೊಳ್ಳುವ ಮೋದಿ ಸರ್ಕಾರದ ಯೋಜನೆಯ ಭಾಗವಾಗಿದೆ. ಪ್ರತಿಪಕ್ಷಗಳು ಸರ್ಕಾರ ನಡೆಸುವ ಪ್ರತಿಯೊಂದು ರಾಜ್ಯದಲ್ಲೂ ಆ ಪಕ್ಷಗಳ ನಾಯಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗುತ್ತದೆ, ವಿರೋಧ ಪಕ್ಷಗಳು ನಡೆಸುತ್ತಿರುವ ಸರ್ಕಾರಗಳನ್ನು ಅಸ್ಥಿರಗೊಳಿಸಲು ಬಂಧನಗಳನ್ನು ಮಾಡಲಾಗುತ್ತಿದೆ ಎಂದು ಅದು ಹೇಳಿದೆ.
ಇದನ್ನು ಓದಿ: ಅಬಕಾರಿ ನೀತಿ ಹಗರಣ: ಸಿಬಿಐ ವಿಚಾರಣೆಗೆ ಹಾಜರಾದ ಮನೀಶ್ ಸಿಸೋಡಿಯಾ
ಪ್ರತಿಪಕ್ಷ ನಾಯಕರ ಮೇಲಿನ ದಾಳಿಯು ಪ್ರಧಾನಿ, ಆಡಳಿತ ಪಕ್ಷ ಮತ್ತು ಅದಾನಿಯಂತಹ ಅದರ ಒಲವು ಪಡೆದಿರುವ ದೊಡ್ಡ ಉದ್ಯಮಿಗಳ ನಡುವಿನ ಸಂಬಂಧದ ಸ್ವರೂಪದ ಬಗ್ಗೆ ಹೆಚ್ಚುತ್ತಿರುವ ಪ್ರಶ್ನೆಗಳಿಂದ ಗಮನವನ್ನು ಬೇರೆಡೆಗೆ ತಿರುಗಿಸಲು ಸಹ ಆಗಿದೆ ಎಂದೂ ಸಿಪಿಐ(ಎಂ) ಪೊಲಿಟ್‍ಬ್ಯುರೊ ಹೇಳಿದೆ.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ