ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನ

ನವದೆಹಲಿ :ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಗುರುವಾರ ದೆಹಲಿಯಲ್ಲಿ ನಿಧನರಾಗಿದ್ದಾರೆ.

ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಸಿಂಗ್‌ ಅವರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ಕರೆತರಲಾಗಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಕಾರಣ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿತ್ತು. ಆದರೆ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ ಎಂದು ಅಸ್ಪತ್ರೆ ಮೂಲಗಳು ತಿಳಿಸಿವೆ.

ಮನಮೋಹನ್ ಸಿಂಗ್ ಅವರು 1991-96ರ ಅವಧಿಯಲ್ಲಿ ಪಿವಿ ನರಸಿಂಹರಾವ್ ನೇತೃತ್ವದ ಸರ್ಕಾರದಲ್ಲಿ ದೇಶದ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಮನಮೋಹನ್‌ ಸಿಂಗ್‌ 2004ರಿಂದ 2014ರವರೆಗೆ ಯುಪಿಎ ಸರಕಾರದ ಅವಧಿಯಲ್ಲಿಎರಡು ಬಾರಿ ಪ್ರಧಾನಿಯಾಗಿದ್ದರು. ಕಳೆದ ಏಪ್ರಿಲ್‌ನಲ್ಲಿಅವರು ರಾಜ್ಯಸಭಾ ಸದಸ್ಯರಾಗಿ ನಿವೃತ್ತಿ ಹೊಂದಿದ್ದರು. ಅವರ ಅಧಿಕಾರ ಅವಧಿಯಲ್ಲಿ ಖಾಸಗೀಕರಣ, ಉದಾರೀಕರಣ & ಜಾಗತೀಕರಣಕ್ಕೆ ಚಾಲನೆ ನೀಡುವ ಮೂಲಕ ಬಂಡವಾಳಿಗರ ಪರ ನೀತಿಗಳನ್ನು ಜಾರಿ ಮಾಡಿದ್ದರು.

ಭಾರತದ ಹೆಚ್ಚುತ್ತಿರುವ ಇಂಧನ ಬೇಡಿಕೆಗಳನ್ನು ಪೂರೈಸುವ ಪ್ರಯತ್ನದಲ್ಲಿ, ಸಿಂಗ್ 2005 ರಲ್ಲಿ US ಅಧ್ಯಕ್ಷ ಜಾರ್ಜ್ ಬುಷ್ ಅವರೊಂದಿಗೆ ಪರಮಾಣು ಸಹಕಾರ ಒಪ್ಪಂದಕ್ಕಾಗಿ ಮಾತುಕತೆ ನಡೆಸಿದ್ದರು.

ಮನಮೋಹನ್ ಸಿಂಗ್ ಚಂಡೀಗಢದ ಪಂಜಾಬ್ ವಿಶ್ವವಿದ್ಯಾಲಯ ಮತ್ತು ಗ್ರೇಟ್ ಬ್ರಿಟನ್‌ನ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡಿದರು . ನಂತರ ಅವರು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಪಡೆದರು .

ಮನಮೋಹನ್ ಸಿಂಗ್ ಅವರು 1964 ರಲ್ಲಿ ಇಂಡಿಯಾಸ್ ಎಕ್ಸ್‌ಪೋರ್ಟ್ ಟ್ರೆಂಡ್ಸ್ ಮತ್ತು ಪ್ರಾಸ್ಪೆಕ್ಟ್ಸ್ ಫಾರ್ ಸೆಲ್ಫ್-ಸಸ್ಟೈನ್ಡ್ ಗ್ರೋತ್ ಎಂಬ ಪುಸ್ತಕವನ್ನು ಬರೆದರು. ಅವರು ಅರ್ಥಶಾಸ್ತ್ರದ ನಿಯತಕಾಲಿಕಗಳ ಶ್ರೇಣಿಯಲ್ಲಿ ಪ್ರಕಟವಾದ ಅನೇಕ ಲೇಖನಗಳನ್ನು ಸಹ ಬರೆದಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *