ಬೆಂಗಳೂರು | ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು : CM ಸಿದ್ದರಾಮಯ್ಯ

ಬೆಂಗಳೂರು : ಮನುಸ್ಮೃತಿಯಲ್ಲಿದ್ದ ಮನುಷ್ಯ ವಿರೋಧಿ, ಸಮಾನತೆ ವಿರೋಧಿ ನಿಯಮಗಳಿಗೆ ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಅವಕಾಶ ಇಲ್ಲದಂತಾಯಿತು. ಅದಕ್ಕೇ ಮನುವಾದಿಗಳು ನಮ್ಮ ಸಂವಿಧಾನವನ್ನು ವಿರೋಧಿಸುತ್ತಾರೆ. ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು. ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ “ಸಂವಿಧಾನ ದಿನಾಚರಣೆ – 2025” ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.

ಮನುವಾದಿಗಳು ಸಂವಿಧಾನ ರಚನೆ ಅಂಬೇಡ್ಕರ್ ಅವರಿಂದ ಆಗಿಲ್ಲ ಎಂದು ವಾದಿಸುತ್ತಾರೆ. ಆದರೆ ಅಂಬೇಡ್ಕರ್ ಅವರೇ ಸಂವಿಧಾನ ಶಿಲ್ಪಿ ಎನ್ನುವುದನ್ನು ಮರೆಯಬಾರದು. ಅಂಬೇಡ್ಕರ್ ಅವರಿಗೆ ಈ ದೇಶದ ಜಾತಿ ವ್ಯವಸ್ಥೆ ಮತ್ತು ಅಪಾಯಗಳು ಅಂಬೇಡ್ಕರ್ ಅವರಿಗೆ ಅರ್ಥ ಆಗಿತ್ತು. ಅದಕ್ಕೇ ನಮ್ಮ ಸಂವಿಧಾನದಲ್ಲಿ ಮೀಸಲಾತಿಯನ್ನು ಸೇರಿಸಿದರು.

ಇದನ್ನೂ ಓದಿ : ಖಾಸಗಿ ವಲಯದಲ್ಲಿ ಅಂಗವಿಕಲರಿಗೆ 5% ಮೀಸಲಾತಿ ನೀಡಬೇಕು: ರಾಜ್ಯ ಸರ್ಕಾರ

ಸಮಸಮಾಜ ನಿರ್ಮಾಣ, ಅಸಮಾನತೆ ನಿವಾರಣೆ ನಮ್ಮ ಸಂವಿಧಾನ ಮತ್ತು ಅಂಬೇಡ್ಕರ್ ಅವರ ಆಶಯವಾಗಿತ್ತು. We the people of INDIA ಎನ್ನುವುದೇ ನಮ್ಮ ಸಂವಿಧಾನದ ಮೂಲ ಮಂತ್ರ. ಈ ದೇಶದ ಜನತೆಗೆ ಎಂಥಾ ಸಂವಿಧಾನ ಬೇಕು ಎನ್ನುವ ಬಗ್ಗೆ ಒಂದು ವರ್ಷ ಕಾಲ ಸಂವಿಧಾನ ಸಭೆಯಲ್ಲಿ ಸಮಗ್ರ ಚರ್ಚೆ ಬಳಿಕ ಅಂಗೀಕರಿಸಲಾಗಿದೆ.

ಫೆಡರಲ್, ಯೂನಿಟರಿ, ರಿಟರ್ನ್, ಅನ್ ರಿಟರ್ನ್ ಸಂವಿಧಾನಗಳು ವಿಶ್ವದಲ್ಲಿವೆ. ನಮ್ಮದು ರಿಟರ್ನ್ (ಲಿಖಿತ) ಸಂವಿಧಾನ. ನಮ್ಮ ದೇಶದಲ್ಲಿರುವಷ್ಟು ಜಾತಿ, ಧರ್ಮಗಳು ಬೇರೆ ಯಾವ ದೇಶದಲ್ಲೂ ಇಲ್ಲ. ಹೀಗಾಗಿ ಈ ನೆಲಕ್ಕೆ ಒಪ್ಪಿಗೆಯಾಗುವ ಸಂವಿಧಾನವನ್ನು ಅಂಬೇಡ್ಕರ್ ಕೊಟ್ಟರು.

ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ಆಶಯ. ಆದರೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷ ಆದರೂ ಸಂವಿಧಾನದ ಆಶಯ ಈಡೇರಿಲ್ಲ.ಬಸವಣ್ಣನವರಾದಿಯಾಗಿ ಎಲ್ಲಾ ಮಹಾತ್ಮರೂ ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದರೂ ಪಟ್ಟಭದ್ರರು ಜಾತಿ ಹೋಗಲು ಬಿಡುತ್ತಿಲ್ಲ. ಕೆಳ ಜಾತಿಯ ಶೂದ್ರ ವರ್ಗದವರಿಗೆ ಆರ್ಥಿಕ ಶಕ್ತಿ ಬಂದಾಗ ಮಾತ್ರ ಜಾತಿ ವ್ಯವಸ್ಥೆ ದುರ್ಬಲವಾಗುತ್ತದೆ.

ಅಸಮಾನತೆ ಇರುವ ದೇಶದಲ್ಲಿ ಸಮಾನತೆ ಸುಲಭವಾಗಿ ಬರುವುದಿಲ್ಲ. ದಲಿತರನ್ನು, ಶೂದ್ರರನ್ನು ಹಿಂದುಳಿದವರನ್ನು, ಮುಸ್ಲೀಮರನ್ನು, ಅಲ್ಪಸಂಖ್ಯಾತರನ್ನು ದ್ವೇಷಿಸಿ ಎಂದು ನಮ್ಮ ಧರ್ಮವೂ ಹೇಳುವುದಿಲ್ಲ, ಯಾವ ಧರ್ಮವೂ ಹೇಳುವುದಿಲ್ಲ.
ಸಂವಿಧಾನ ಅಂಗೀಕಾರಕ್ಕೆ 285 ಮಂದಿ ಸದಸ್ಯರಲ್ಲಿ 284 ಮಂದಿ ಪೂರ್ತಿ ಸಹಿ ಹಾಕಿದರು. ಒಬ್ಬರು ಮಾತ್ರ ಹಾಕಲಿಲ್ಲ. ಹೀಗಾಗಿ ಬಹುತೇಕ ಎಲ್ಲರಿಗೂ ಒಪ್ಪಿಗೆ ಆಗುವಂತಹಾ ಸಂವಿಧಾನವನ್ನು ಅಂಬೇಡ್ಕರ್ ರಚಿಸಿದರು.

ಸಂವಿಧಾನದ ಸಮಾನತೆಯ ಆಶಯವನ್ನು ಈಡೇರಿಸುವ ಸಲುವಾಗಿಯೇ ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಹಲವು ಭಾಗ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿದೆ. ಎಲ್ಲಾ ಭಾಗ್ಯಗಳ ಹಿಂದೆ ಹಾಗೂ ಈಗ ಜಾರಿ ಮಾಡಿರುವ ಐದೂ ಗ್ಯಾರಂಟಿಗಳ ಹಿಂದೆ ಅಸಮಾನತೆ ನಿವಾರಿಸುವ ಮತ್ತು ಸರ್ವರಿಗೂ ಆರ್ಥಿಕ ಶಕ್ತಿ ಬರಲಿ ಎನ್ನುವ ಆಶಯ ಇದೆ ಎಂದರು.

ಇದನ್ನೂ ನೋಡಿ : ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಕೆಪಿಎಸ್ ವ್ಯವಸ್ಥೆ ಪರಿಹಾರವೋ? ಶಾಪವೋ? Janashakthi Media

Donate Janashakthi Media

Leave a Reply

Your email address will not be published. Required fields are marked *