“ಹಲವು ಕಾಂಗ್ರೆಸ್‌ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ” | ಬಿಜೆಪಿ ನಾಯಕ ರಾಧಾಮೋಹನ್ ದಾಸ್ ಹೇಳಿಕೆ

ಬೆಂಗಳೂರು: ಕರ್ನಾಟಕದ ಹಲವು ಕಾಂಗ್ರೆಸ್‌ ಶಾಸಕರು ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವದ ಒಳಜಗಳ ತೀವ್ರವಾಗಿದೆ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಡುವೆಯೂ ಮುಖ್ಯಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದೆ ಎಂದು ಅವರು ಟೀಕಿಸಿದರು. ಕಳೆದ ಹಲವು ತಿಂಗಳಿಂದ ರಾಜ್ಯ ಸರ್ಕಾರ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ದೂರಿದರು.

ಇದನ್ನೂ ಓದಿ : ಇಂಧನ ದರ ಏರಿಕೆ : ಜನರ ಜೇಬಿಗೆ ಮತ್ತೊಂದು ಹೊರೆ?

ರಾಜ್ಯ ಸರ್ಕಾರವನ್ನು ಗುರಿಯಾಗಿಸಿಕೊಂಡು ಮಾತನಾಡಿದ ಅವರು, “ಭರವಸೆಗಳನ್ನೆಲ್ಲ ಈಡೇರಿಸಲಾಗಿಲ್ಲ. ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ” ಎಂದು ಆರೋಪಿಸಿದರು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ ವಿರುದ್ಧ ತೀರ್ಪು ನೀಡಲಿದ್ದಾರೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದರು.

ಇದೇ ವೇಳೆ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಅಂತಿಮ ತೀರ್ಮಾನವನ್ನು ಪಕ್ಷದ ರಾಷ್ಟ್ರೀಯ ನಾಯಕತ್ವವೇ ಕೈಗೊಳ್ಳಲಿದೆ ಎಂದು ಹೇಳಿದರು. ವಿಧಾನ ಪರಿಷತ್‌ ಚುನಾವಣೆಗೆ ಸಂಬಂಧಿಸಿದಂತೆ ಸಾಧ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ ಎಂದೂ ತಿಳಿಸಿದರು.

ಇದನ್ನೂ ನೋಡಿ : ಯುವಜನರನ್ನು “ಕಾಕ್ರೋಚ್” ಎಂದವರ ವಿರುದ್ಧ ಡಿಜಿಟಲ್‌ ಚಳವಳಿ! – ಕಾಕ್ರೋಚ್ ಜನತಾ ಪಾರ್ಟಿ Janashakthi Media

Donate Janashakthi Media

Leave a Reply

Your email address will not be published. Required fields are marked *