ಅಲ್ಪಸಂಖ್ಯಾತ ವಿಭಾಗದಲ್ಲಿ ಅಸಮಾಧಾನ: ಹಲವು ಪದಾಧಿಕಾರಿಗಳ ರಾಜೀನಾಮೆ

ದಾವಣಗೆರೆ: ವಿಧಾನ ಪರಿಷತ್ ಸದಸ್ಯ ಕೆ. ಅಬ್ದುಲ್ ಜಬ್ಬಾರ್ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬೆನ್ನಲ್ಲೇ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಜಿಲ್ಲಾ ವಿಭಾಗದ ಪದಾಧಿಕಾರಿಗಳು ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಅಸಮಾಧಾನ

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಉಪಾಧ್ಯಕ್ಷ ಮೊಹಮ್ಮದ್ ಸಿರಾಜ್, ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಕೆ. ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದರಿಂದ ಮನನೊಂದು ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಮಟ್ಟದ ಐವರು ರಾಜೀನಾಮೆ ನೀಡುತ್ತಿದ್ದೇವೆ.

ಕೆಪಿಸಿಸಿ ಸ್ಥಾನಕ್ಕೆ ರಾಜೀನಾಮೆ ಮಾತ್ರ ರಾಜೀನಾಮೆ ನೀಡಿದರೂ ಪಕ್ಷದ ಸಾಮಾನ್ಯ, ಶಿಸ್ತಿನ ಕಾರ್ಯಕರ್ತರಾಗಿ ಮುಂದುವರೆಯುತ್ತೇವೆ. ಪಕ್ಷದ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.‌ ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರವನ್ನು ಇ-ಮೇಲ್ ಮೂಲಕ ಕಳಿಸಿ ಕೊಡುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಅಂಬೇಡ್ಕರ್ ಜಯಂತಿ: ‘ಜಾತಿ ವಿನಾಶ’ ಕೃತಿಯ ಸಾಮೂಹಿಕ ಓದು, ವಿಶ್ಲೇಷಣೆ

ರಾಜ್ಯ ಉಪಾಧ್ಯಕ್ಷನಾದ ನನ್ನ ಜೊತೆಗೆ ಕಾರ್ಯದರ್ಶಿಗಳಾದ ಅಬ್ದುಲ್ ಘನಿ ತಾಹೀರ್, ಹುಸೇನ್ ಉಕ್ಕಡಗಾತ್ರಿ, ಉಬೇದುಲ್ಲ ಸಾಮಾಜಿಕವಾಗಿ ರಾಜೀನಾಮೆ ಸಲ್ಲಿಸುತ್ತಿದ್ದೇವೆ ಎಂದು ತಿಳಿಸಿದರು.

ರಾಜ್ಯ ಪದಾಧಿಕಾರಿಗಳ ಜೊತೆಗೆ ಜಿಲ್ಲಾ ಕಾರ್ಯಾಧ್ಯಕ್ಷ ಎ. ಅಬ್ದುಲ್ ಜಬ್ಬಾರ್, ಜಿಲ್ಲಾ ಕಾರ್ಯದರ್ಶಿ ಆಸಿಫ್ ಜುನೈದಿ, ನೂರ್ ಅಹ್ಮದ್, ಇನ್ನೂ ಕೆಲವು ಪದಾಧಿಕಾರಿಗಳು ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸುತ್ತಿ ದ್ದೇವೆ ಎಂದು ತಿಳಿಸಿದರು.

ಕೆ. ಅಬ್ದುಲ್ ಜಬ್ಬಾರ್ ಅವರು 45 ವರ್ಷಗಳಿಂದ ಕಾಂಗ್ರೆಸ್ ಕಾರ್ಯಕರ್ತರಾಗಿ, ನಾಯಕರಾಗಿ ಕೆಲಸ ಮಾಡಿದ್ದಾರೆ. ಅಂತಹವರ ವಿರುದ್ಧವೇ ಹಲವಾರು ಆರೋಪಗಳನ್ನು ಮಾಡುವುದರ ಜೊತೆಗೆ ಇಷ್ಟು ವರ್ಷಗಳ ಕಾಲ ನಿಷ್ಠೆಯಿಂದ ನಿರ್ವಹಿಸಿದ್ದ ಅವರಿಗೆ ಮಸಿ ಬಳಿಯುವಂತಹ ಕೆಲಸ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ನೋಡಿ: ಶಿಕ್ಷಣ ಮೌಲ್ಯಕೇಂದ್ರಿತವಾಗದೇ ಹಣಕೇಂದ್ರಿತವಾಗಿದೆ: ರವಿಕುಮಾರ್ ಬಾಗಿ Janashakthi Media

Donate Janashakthi Media

Leave a Reply

Your email address will not be published. Required fields are marked *