ಮಾರ್ಚ್‌ 23ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭ

ಬೆಂಗಳೂರು: 14ನೇ ಆವೃತ್ತಿಯ ʻಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವʼ ಮುಂದಿನ ತಿಂಗಳ ಮಾರ್ಚ್ 23ರಿಂದ ಆರಂಭವಾಗಲಿದೆ. ಈ ಬಗ್ಗೆ ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡಿದ್ದು, ಈ ಸಂಬಂಧ ರಚಿಸಲಾಗಿರುವ ಚಿತ್ರೋತ್ಸವದ ಲಾಂಛನವನ್ನು ಬಿಡುಗಡೆಗೊಳಿಸಿದೆ.

ಮಾರ್ಚ್‌ 23ರಿಂದ 30ರವರೆಗೆ ಚಲನಚಿತ್ರೋತ್ಸವ ನಡೆಯಲಿದೆ. ಮಾರ್ಚ್‌ 23ರಂದು ಉದ್ಘಾಟನೆಯಾಗಲಿದ್ದು, 26ರಂದು ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ವಿತರಣಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಚಲನಚಿತ್ರೋತ್ಸವದಲ್ಲಿ ಸಂವಾದ, ಚರ್ಚೆ, ವಿಚಾರ ಸಂಕಿರಣ, ಅತ್ಯುತ್ತಮ ನಿರ್ದೇಶಕರೊಂದಿಗೆ ಸಂವಾದ, ಕಾರ್ಯಗಾರಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕನ್ನಡ ನಟರು ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಸದಸ್ಯರ ಸಮ್ಮುಖದಲ್ಲಿ ಲಾಂಛನವನ್ನು ಬಿಡುಗಡೆಗೊಳಿಸಿ ಅಧಿಕೃತವಾಗಿ ಚಾಲನೆ ನೀಡಿದರು.

ಇದನ್ನು ಓದಿ: ಮಾರ್ಚ್‌ 3ರಿಂದ ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವ

ಸ್ಪರ್ಧಾ ವಿಭಾಗದಲ್ಲಿ ಏಷ್ಯಾ ಚಲನಚಿತ್ರಗಳು, ಭಾರತೀಯ ಚಲನಚಿತ್ರಗಳು, ಕನ್ನಡ ಚಲನಚಿತ್ರಗಳು, ಸಮಕಾಲೀನ ವಿಶ್ವ ಸಿನಿಮಾ, ಪುನರಾವಲೋಕನ ವಿಭಾಗ, ಭಾರತೀಯ ಸಿನಿಮಾ ಪುನರಾವಲೋಕನ, ಕನ್ನಡ ಸಿನಿಮಾ ಪುನರಾವಲೋಕನ  ಮಾಡಲಾಗುತ್ತದೆ. ಶ್ರೇಷ್ಠ ಚಲನಚಿತ್ರಗಳ ಪುನರ್ ಮನನ ಜೊತೆಗೆ ವಿಶ್ವ ಸಿನಿಮಾ, ಭಾರತೀಯ ಸಿನಿಮಾ ಮತ್ತು ಕನ್ನಡ ಸಿನಿಮಾಗಳ ಪುನರ್ ಮನನ ಮಾಡುವಂತ ಕಾರ್ಯ ಈ ಬಾರಿ ಚಿತ್ರೋತ್ಸವದಲ್ಲಿ ಇರಲಿದೆ.

ಪ್ರಸಕ್ತ 14ನೇ ಆವೃತ್ತಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವಿಭಾಗಗಳು ಮತ್ತು ಸ್ಪರ್ಧೆಗಳಲ್ಲಿ ಸುಮಾರು 300 ಚಲನಚಿತ್ರಗಳನ್ನು ಪ್ರದರ್ಶನಗೊಳ್ಳಲಿವೆ ಎನ್ನಾಗಿದೆ. ರಾಜ್ಯ ಚಲನಚಿತ್ರ ಅಕಾಡೆಮಿ ವಿಶ್ವದಾದ್ಯಂತ ಚಲನಚಿತ್ರಗಳನ್ನು ಕ್ಯುರೇಟಿಂಗ್ ಮಾಡಲು ಆರಂಭಿಸುತ್ತದೆ. ಉತ್ಸವದಲ್ಲಿನ ಸ್ಪರ್ಧೆಗೆ ಕುರಿತಂತೆ ಅಕಾಡೆಮಿಯು ಚಿತ್ರಗಳ ಆಯ್ಕೆ ಮಾಡಿ ಪ್ರದರ್ಶನಕ್ಕೆ ಅಂತಿಮಗೊಳಿಸಲು ಸಜ್ಜಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸರ್ಕಾರವು ನಾಲ್ಕು ಕೋಟಿ ಅನುದಾನ ನೀಡಿದ್ದು, ಪ್ರತಿವರ್ಷದಂತೆ ಈ ವರ್ಷವೂ ಅದ್ದೂರಿಯಾಗಿ ನಡೆಯಲಿದೆ.

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ನೀತಿಸಂಹಿತೆ ಜಾರಿ ಆಗುವ ಮುನ್ನವೇ ಚಲನಚಿತ್ರೋತ್ಸವ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಮಾಡಬೇಕು ಎಂಬುದು ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಲಾಗಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.  ನಾಲ್ಕು ವರ್ಷಗಳಿಂದ ಚಲನಚಿತ್ರ ಪ್ರಶಸ್ತಿಗಳನ್ನೂ ನೀಡಿಲ್ಲ. ಕನಿಷ್ಠ ಎರಡು ವರ್ಷಗಳ ಪ್ರಶಸ್ತಿ ಪ್ರದಾನ ಸಮಾರಂಭ ಮಾಡುವ ತರಾತುರಿ ಕೂಡ ನಡೆದಿದೆ ಎಂದು ಹೇಳಲಾಗುತ್ತಿದೆ.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *