ಉಪ ರಾಷ್ಟ್ರಪತಿ ಚುನಾವಣೆ : ಕರ್ನಾಟಕ ಮಾರ್ಗರೆಟ್ ಆಳ್ವಾ ವಿಪಕ್ಷಗಳ ಅಭ್ಯರ್ಥಿ

ನವದೆಹಲಿ : ಉಪ ರಾಷ್ಟ್ರಪತಿ ಚುನಾವಣೆ ಕಾವು ಜೋರಾಗಿದೆ. ಎನ್‌ಡಿಎ ಅಭ್ಯರ್ಥಿ ಘೋಷಿಸಿದ ಬೆನ್ನಲ್ಲೇ ಇದೀಗ ವಿಪಕ್ಷಗಳು ತಮ್ಮ ಅಭ್ಯರ್ಥಿಯನ್ನು ಘೋಷಿಸಿದೆ. ಕಾಂಗ್ರೆಸ್ ನಾಯಕಿ, ಮಾಜಿ ಸಚಿವೆ ಮಾರ್ಗರೇಟ್ ಆಳ್ವ ವಿಪಕ್ಷಗಳ ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಲಾಗಿದೆ.

ಕರ್ನಾಟಕದ ಮೂಲದ ಮಾರ್ಗರೇಟ್ ಆಳ್ವ ಯುಪಿಎ ಸರ್ಕಾರದಲ್ಲಿ ರಾಜಸ್ಥಾನ, ಉತ್ತರಖಂಡ ಹಾಗೂ ಗೋವಾ ರಾಜ್ಯಪಾಲೆಯಾಗಿ ಸೇವೆ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಮೂಲದ ಮಾರ್ಗರೇಟ್ ಆಳ್ವ ರಾಜ್ಯಸಭಾ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇಂದು ನಡದ ಮಹತ್ವದ ಸಭೆಯಲ್ಲಿ ಎನ್‌ಸಿಪಿ ನಾಯಕ ಶರದ್ ಪವಾರ್, ಉಪರಾಷ್ಟ್ರಪತಿ ಅಭ್ಯರ್ಥಿ ಘೋಷಿಸಿದ್ದಾರೆ. 17 ವಿಪಕ್ಷಗಳು ಒಮ್ಮತದಿಂದ ಮಾರ್ಗರೆಟ್ ಆಳ್ವ ಅವರನ್ನು ವಿಪಕ್ಷಗಳ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ಮಂಗಳವಾರ(ಜು.19) ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಶರದ್ ಪವಾರ್ ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಿಪಿಐ(ಎಂ) ನಾಯಕ ಸೀತಾರಾಂ ಯೆಚೂರಿ, ಶಿವಸೇನೆ ಮುಖಂಡ ಸಂಜಯ್ ರಾವುತ್, ಸಿಪಿಐ ನಾಯಕ ಡಿ ರಾಜಾ, ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ (MDMK) ನಾಯಕ ವೈಕೋ, ಟಿಆರ್‌ಎಸ್ ಸದಸ್ಯ ಕೇಶವ ರಾವ್,  ಸಮಾಜವಾದಿ ಪಕ್ಷದ ನಾಯಕ ಪ್ರೊ. ರಾಮ್ ಗೋಪಾಲ್ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಎನ್‌ಡಿಎ ಕೂಟ ಈಗಾಗಲೇ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ದಂಕರ್ ಅವರನ್ನು ಆಯ್ಕೆ ಮಾಡಿದೆ. ಇದರ ಬೆನ್ನಲ್ಲೇ ಇದೀಗ ವಿಪಕ್ಷ ಮಾರ್ಗರೆಟ್  ಆಳ್ವರನ್ನು ಕಣಕ್ಕಿಳಿಸಿದೆ. ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಅದೇ ದಿನ ಮತ ಏಣಿಕೆ ನಡೆಯಲಿದೆ. ನಾಮಪತ್ರ ಸಲ್ಲಿಕೆ ಮಾಡಲು ಜುಲೈ 19 ಕೊನೆಯ ದಿನಾಂಕವಾಗಿದೆ.

Donate Janashakthi Media

Leave a Reply

Your email address will not be published. Required fields are marked *