ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ಇಂದು ರಾಜೀನಾಮೆ ನೀಡಿದ್ದಾರೆ. ಮೈಸೂರು
ರಾಜ್ಯರಾಜಕಾರಣದಲ್ಲಿ ಮುಡಾ ಹಗರಣ ಸಾಕಷ್ಟು ವಿವಾದಕ್ಕೆಡೆ ಮಾಡಿಕೊಟ್ಟಿರುವ ಬೆನ್ನಲ್ಲೆ ಮರೀಗೌಡ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ನಾನಾ ವ್ಯಾಖ್ಯಾನಗಳಿಗೆ ಎಡೆಮಾಡಿಕೊಟ್ಟಿದೆ.
ನಿವೇಶನ ಹಂಚಿಕೆ ಅಕ್ರಮ ಹಾಗೂ ಬಹಿರಂಗಗೊಂಡ ಬೆನ್ನಲ್ಲೆ ಮರೀಗೌಡ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನನ್ನ ಮೇಲೆ ಯಾವುದೇ ಒತ್ತಡ ಇಲ್ಲ.ಆರೋಗ್ಯ ಸರಿಯಿಲ್ಲದ ಕಾರಣ ರಾಜೀನಾಮೆ ನೀಡಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.
ಮರೀಗೌಡ ಇಂದು ವಿಕಾಸಸೌಧದಲ್ಲಿರುವ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾಚೋಳನ್ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ. ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದರು. ಹೀಗಾಗಿ ರಾಜೀನಾಮೆ ಸಲ್ಲಿಸಿದ್ದೇನೆ ಎಂದರು. ಮೈಸೂರು
ಇದನ್ನು ಓದಿ : ಜಮೀನನ್ನು ನೀವು ಯಾವಾಗ ಹಿಂದಿರುಗಿಸುತ್ತೀರಿ ಎಂದು ಬಿಜೆಪಿ ಹಾಗೂ ಆರೆಸ್ಸೆಸ್ ನಾಯಕರನ್ನು ಪ್ರಶ್ನಿಸಿದ ಎನ್.ಎಸ್.ಭೋಸರಾಜು
ತಮಗೆ ಆರೋಗ್ಯ ಸರಿಯಿಲ್ಲದ ಕಾರಣ ರಾಜೀನಾಮೆ ನೀಡಿದ್ದೇನೆ. ಮುಡಾ ಅಕ್ರಮಗಳ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆಯಿಂದ ಸತ್ಯಾಂಶ ಹೊರಬರಲಿದೆ ಎಂದು ಹೇಳಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ತಮ್ಮ ಮೇಲೆ ಯಾವುದೇ ಒತ್ತಡವಿಲ್ಲ. ಆರೋಗ್ಯ ದೃಷ್ಟಿಯಿಂದ ರಾಜೀನಾಮೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದ ಅವರು, ನಿವೇಶನ ವಿಚಾರವಾಗಿ ಮುಖ್ಯಮಂತ್ರಿಯವರು ತಮ್ಮ ಮೇಲೆ ಯಾವುದೇ ಒತ್ತಡ ಹೇರಿಲ್ಲ. ಸಿದ್ದರಾಮಯ್ಯ ನಮ್ಮ ನಾಯಕರು, ೪೦ ವರ್ಷಗಳಿಂದ ಜತೆಯಲ್ಲೇ ಇದ್ದೇನೆ. ತಾಲ್ಲೂಕು, ಜಿಲ್ಲಾಪಂಚಾಯ್ತಿ ಅಧ್ಯಕ್ಷರನ್ನಾಗಿ ಮುಖ್ಯಮಂತ್ರಿಗಳು ತಮ್ಮನ್ನು ನೇಮಕ ಮಾಡಿದ್ದರು. ಮುಡಾ ವಿಚಾರದಲ್ಲೂ ಸಿಎಂ ಒತ್ತಡ ಹೇರಿಲ್ಲ ಎಂದು ತಿಳಿಸಿದರು. ತಮಗೆ ಎರಡು ಬಾರಿ ಪಾರ್ಶ್ವವಾಯು ಆಗಿತ್ತು. ಆರೋಗ್ಯ ಸರಿಯಿಲ್ಲ. ಆದ್ದರಿಂದ ಮುಡಾ ಅಧ್ಯಕ್ಷರಾಗಿ ಮುಂದುವರೆಯಲು ಸಾಧ್ಯವಾಗದ ಕಾರಣ ರಾಜೀನಾಮೆ ನೀಡಿದ್ದೇನೆ.
ನಗರಾಭಿವೃದ್ಧಿ ಇಲಾಖೆ ಸಚಿವರು ರಾಜೀನಾಮೆಗೆ ಒತ್ತಡ ಹೇರಿದ್ದರು ಎಂಬ ಮಾತುಗಳು ಸತ್ಯಕ್ಕೆ ದೂರವಾದದು ಎಂದು ಮರೀಗೌಡ ತಿಳಿಸಿದರು. ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತ ತನಿಖೆಗೆ ಆದೇಶ ನೀಡಿತ್ತು. ಅದಾದ ಬಳಿಕ ಹಗರಣ ಕುರಿತಂತೆ ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರು ೪ ತಂಡಗಳನ್ನು ರಚಿಸಿತ್ತು.
ಈಗಾಗಲೇ ಲೋಕಾಯುಕ್ತರು ಮೈಸೂರಿನ ಕೆಸರೆ ಗ್ರಾಮಕ್ಕೂ ತೆರಳಿ ನಿವೇಶನದ ಮಹಜರು ನಡೆಸಿ ಮಾಹಿತಿ ಸಂಗ್ರಹಿಸಿದ್ದರು. ಈ ಸ್ಥಳಕ್ಕೆ ಸಾಮಾಜಿಕ ಕಾರ್ಯಕರ್ತ ಹಾಗೂ ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ಕರೆದೊಯ್ದು ಪರಿಶೀಲನೆ ನಡೆಸಿದ್ದರು.
ಇದೇ ವೇಳೆ ಲೋಕಾಯುಕ್ತ ಪೊಲೀಸರು ಪ್ರಕರಣದ ಎ೩ ಮತ್ತು ಎ೪ ಆರೋಪಿಗಳಿಗೂ ನೋಟಿಸ್ ನೀಡಿ ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಿ ತನಿಖೆಯನ್ನು ಲೋಕಾಯುಕ್ತರು ಚುರುಕುಗೊಳಿಸಿದ್ದಾರೆ.
ಈ ವಿದ್ಯಮಾನಗಳ ಬೆನ್ನಲ್ಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ೧೪ ನಿವೇಶನಗಳನ್ನು ಮುಡಾಗೆ ವಾಪಸ್ ನೀಡಿದ್ದರು. ಇದೂ ಕೂಡ ಅಚ್ಚರಿಯ ಬೆಳವಣಿಗೆಗೆ ಕಾರಣವಾಗಿತ್ತು. ಈಗ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ಅವರನ್ನು ವಿಚಾರಣೆಗೆ ಗುರಿಪಡಿಸಬೇಕಾಗಿದೆ. ಇದರ ಬೆನ್ನಲ್ಲೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ ಸಲ್ಲಿಸಿರುವುದು ಕುತೂಹಲಕ್ಕೆಡೆ ಮಾಡಿಕೊಟ್ಟಿದೆ. ಮೈಸೂರು
ಇದನ್ನು ನೋಡಿ : ಸಾಹಿತ್ಯ ಸಮ್ಮೇಳನ – ರಾಜಕೀಯ ಹಸ್ತಕ್ಷೇಪ ಆಗದಿರಲಿ – ಡಾ. ಬಂಜಗೆರೆ ಜಯಪ್ರಕಾಶ್ Janashakthi Media