ಕೊರೊನಾ ರೂಪಾಂತರಿ : 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ; ಸಚಿವ ದಿನೇಶ್ ಗುಂಡೂರಾವ್

ಮಡಿಕೇರಿ: ಕೊರೊನಾ ರೂಪಾಂತರಿ ಬಗ್ಗೆ ರಾಜ್ಯದಲ್ಲಿ ಯಾರೂ ಕೂಡ ಆತಂಕಪಡಬೇಕಿಲ್ಲ. ಆದರೆ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ಮಾಡಲಾಗುತ್ತದೆ. ಇಂದಿನಿಂದಲೇ ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಮಾತಾನಾಡಿದ ಸಚಿವ ದಿನೇಶ್ ಗುಂಡೂರಾವ್ ಅವರು, ಮೊನ್ನೆ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದೇವೆ. ರವಿ ಅವರ ನೇತೃತ್ವದಲ್ಲಿ ನಿನ್ನೆಯೂ ಸಭೆ ನಡೆಸಿದ್ದಾರೆ. ಯಾವ ಕ್ರಮ ತೆಗೆದುಕೊಳ್ಳಬೇಕು ಎಂದು ಸಭೆಯಲ್ಲಿ  ಚರ್ಚೆ ನಡೆಸಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರದ ಜೊತೆಗೂ ಚರ್ಚೆ ಮಾಡಿದ್ದಾರೆ. ಕೆಲವು ಸಲಹೆ ಮಾರ್ಗಸೂಚಿ ಪಡೆದಿದ್ದೇವೆ. 60 ವರ್ಷ ಮೇಲ್ಪಟ್ಟವರು ಮತ್ತು ಹೃದಯ, ಕಿಡ್ನಿ ಸಂಬಂಧಿತ ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಹಾಗೂ ಜ್ವರ, ಕಫ, ಶೀತ ಇರುವಂತಹವರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು ಎಂದು ಮನವಿ ಮಾಡಿದ್ದೇವೆ ಎಂದರು.

ಈಗಾಗಲೇ ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಸಜ್ಜು ಆಗುವಂತೆಯೂ ಸೂಚನೆ ನೀಡಲಾಗಿದೆ. ಹಾಗೆಯೇ ಗಡಿ ಜಿಲ್ಲೆಗಳಾದ ಕೊಡಗು, ಮಂಗಳೂರು, ಚಾಮರಾಜನಗರದ ಭಾಗದಲ್ಲಿ ಹೆಚ್ಚಿನ ನಿಗಾ ಇಡುವಂತೆ ಸೂಚನೆ ಕೋಡಲಾಗಿದೆ. ಕೇರಳದಿಂದ ಬರುವವರ ಮೇಲೆ ಹೆಚ್ಚು ಟೆಸ್ಟ್ ಮಾಡುವಂತೆ ಆದೇಶ ಮಾಡಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಗುಡ್‌ನ್ಯೂಸ್‌ – ಕುನೋ ಪಾರ್ಕ್‌ನಲ್ಲಿ ಇನ್ಮುಂದೆ ಪ್ರವಾಸಿಗರಿಗೆ ಚೀತಾ ವೀಕ್ಷಣೆ ಭಾಗ್ಯ

ಉಸಿರಾಟದ ತೊಂದರೆ, ಇತರ ಸಮಸ್ಯೆಯಿಂದ ಬಳಲುತ್ತಿದ್ದವರಿಗೆ ಕಡ್ಡಾಯವಾಗಿ ಟೆಸ್ಟಿಂಗ್ ಮಾಡಲಾಗುತ್ತದೆ. ಆಗ ತಿಳಿಯುತ್ತದೆ ಕೋವಿಡ್ ದಿನಕ್ಕೆ ಹೆಚ್ಚು ಇದೆಯೇ ಅಥವಾ ಕಡಿಮೆ ಇದೆಯೇ ಎಂದು. ಆಗ ಏನು ಮಾಡಬೇಕು ಎಂದು ತೀರ್ಮಾನ ಮಾಡುತ್ತೇವೆ. ಈಗ ಆ ಹಂತದಲ್ಲಿ ಇದೆ. ಗಡಿ ಭಾಗದಲ್ಲಿ ಟೆಸ್ಟಿಂಗ್ ಹೆಚ್ಚು ಮಾಡುತ್ತೇವೆ. ಯಾರ ಯಾರ ಮೇಲೆ ಸಂಶಯ ಇದೆ ಅವರೆಲ್ಲರಿಗೂ ಟೆಸ್ಟ್ ಮಾಡಿಸುತ್ತೇವೆ ಎಂದು ತಿಳಿಸಿದರು.

ಇನ್ನೂ 2-3 ದಿನಗಳಲ್ಲಿ ಅದರ ತೀವ್ರತೆ ಗೋತ್ತಾಗಲಿದೆ. ಈಗ ಪ್ರಸ್ತುತ ಜನ ಸೇರುವ ಹಾಗೆ ಇಲ್ಲ. ಗುಂಪಿನಲ್ಲಿ ಓಡಾಟ ಮಾಡುವ ಹಾಗೆ ಇಲ್ಲ. ಸದ್ಯಕ್ಕೆ ರಾಜ್ಯದಲ್ಲಿ ಸಹಜ ಸ್ಥಿತಿಯಲ್ಲಿ ಇದೆ. ಹೆಚ್ಚು ಪಾಸಿಟಿವ್ ಬಂದರೆ ಮಾತ್ರ ನಿಷೇಧ. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *