ಮಸ್ಕಿ ಬಿಜೆಪಿ ಅಭ್ಯರ್ಥಿ ಅನರ್ಹಗೊಳಿಸಲು ಡಿಕೆಶಿ ಆಗ್ರಹ

ಕಲಬುರ್ಗಿ: ‘ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಅಭ್ಯರ್ಥಿ ಪ್ರತಾಪ ಗೌಡ ಪಾಟೀಲಗೆ ಮತ ನೀಡಬೇಕೆಂದು ಬಿಜೆಪಿ ಪಕ್ಷದ ಮುಖಂಡರು ಮತದಾರರಿಗೆ ಹಣ ಹಂಚುತ್ತಿದ್ದಾರೆ. ಚುನಾವಣಾ ಅಕ್ರಮದಲ್ಲಿ ತೊಡಗಿರುವ ಬಿಜೆಪಿ ಅಭ್ಯರ್ಥಿಯನ್ನು ಚುನಾವಣಾ ಆಯೋಗ ತಕ್ಷಣ ಅನರ್ಹಗೊಳಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

‘ಬಿಜೆಪಿಯವರೇ ಮತದಾರರಿಗೆ ಹಣ ಹಂಚುತ್ತಿರುವುದನ್ನು ಜನತೆಯೇ ಬಹಿರಂಗಗೊಳಿಸಿದ್ದಾರೆ. ಈ ಬಗ್ಗೆ ವಿಡಿಯೋವೊಂದು ಹರಿದಾಡುತ್ತಿದ್ದು, ಇದನ್ನು ಆಧರಿಸಿ ಬಿಜೆಪಿ ಅಭ್ಯರ್ಥಿಯನ್ನು ಅನರ್ಹಗೊಳಿಸಲು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು’ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಇದನ್ನು ಓದಿ : ಅಧಿಕಾರಿಗಳ ಕಿರುಕುಳ ತಾಳಲಾರದೆ ಸಾರಿಗೆ ನೌಕರ ಆತ್ಮಹತ್ಯೆ

‘ಉಪ ಚುನಾವಣೆಗಳು ನಡೆಯುತ್ತಿರುವ ಭಾಗಗಳಲ್ಲಿ ಚುನಾವಣಾ ಕರ್ತವ್ಯದಲ್ಲಿರುವ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಪೊಲೀಸ್‌ ಸಿಬ್ಬಂದಿಗಳು ರಾಜ್ಯ ಸರ್ಕಾರದ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಬಿಗಿಯಾದ ಕ್ರಮಗಳನ್ನು ಅನುಸರಿಸಿದ್ದರೆ ಬಹಿರಂಗವಾಗಿಯೇ ಇಂಥ ಅಕ್ರಮಗಳ ಮೇಲೆ ಕ್ರಮಕೈಗೊಳ್ಳಬಹುದಿತ್ತು.’ ಎಂದು ಮಾತನಾಡಿದರು.

‘ರಾಜ್ಯ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ನಮ್ಮ ಸಂಪೂರ್ಣವಾಗಿ ಬೆಂಬಲವಿದೆ. ಉಪಚುನಾವಣೆ ಫಲಿತಾಂಶದ ಮೇಲೂ ಇದರ ಪರಿಣಾಮ ಬೀರಲಿದೆ. ರಾಜ್ಯದಲ್ಲಷ್ಟೇ ಅಲ್ಲ ದೇಶದ ಎಲ್ಲಾ ಕಡೆ ಕಾರ್ಮಿಕರಿಗೆ ಸಾಕಷ್ಟು ಅನ್ಯಾಯವಾಗುತ್ತಿದೆ. ದುಡಿಯುವ ವರ್ಗದ ನೋವು ಕೇಳುವ ಮನಸ್ಸು ರಾಜ್ಯ ಮತ್ತು ಕೇಂದ್ರ ಸರಕಾರಗಳಿಗೆ ಇಲ್ಲ’ ಎಂದೂ ಆರೋಪಿಸಿದರು.

Donate Janashakthi Media

Leave a Reply

Your email address will not be published. Required fields are marked *