ಧರ್ಮಸ್ಥಳ ಪ್ರಕರಣ: ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಜೈಲಿನಿಂದ ಬಿಡುಗಡೆ

ಶಿವಮೊಗ್ಗ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವುದಾಗಿ ದೂರು ನೀಡಿ ಬಂಧಿತನಾಗಿದ್ದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಡಿಸೆಂಬರ್ 18ರಂದು ಬೆಳಗ್ಗೆ ಜೈಲಿನಿಂದ ಬಿಡುಗಡೆಯಾಗಿದ್ದಾನೆ.

ಚಿನ್ನಯ್ಯನಿಗೆ ನವೆಂಬರ್.‌24ರಂದು ಬೆಳ್ತಂಗಡಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿತ್ತು. ಆದರೆ ಚಿನ್ನಯ್ಯ ಕೋರ್ಟ್‌ ಆದೇಶದಂತೆ ವೈಯಕ್ತಿಕ ಬಾಂಡ್‌ ಹಾಗೂ ಇತರೆ ಅಂಶಗಳನ್ನು ಸಲ್ಲಿಸದ ಹಿನ್ನೆಲೆಯಲ್ಲಿ ಜಾಮೀನು ನೀಡುವ ಪ್ರಕ್ರಿಯೆ ವಿಳಂಬವಾಗಿತ್ತು. ಹೀಗಾಗಿ ಆತ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿಯೇ ಇದ್ದ.

ಇದನ್ನೂ ಓದಿ: ಭಾರತ vs ದಕ್ಷಿಣ ಆಫ್ರಿಕಾ 4ನೇ ಟಿ20 ಪಂದ್ಯ ರದ್ದು; ಅಭಿಮಾನಿಗಳ ಟೀಕೆ

ಚಿನ್ನಯ್ಯನ ಪತ್ನಿ ಮಲ್ಲಿಕಾ ಬೆಳ್ತಂಗಡಿ ನ್ಯಾಯಾಲಯದಲ್ಲಿ ಬುಧವಾರ ಜಾಮೀನು ಪ್ರಕ್ರಿಯೆ ಮುಗಿಸಿದ ಬಳಿಕ ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಚಿನ್ನಯ್ಯ ಬಿಡುಗಡೆ ಆಗಿದ್ದಾನೆ.

ಈತ ಎರಡು ದಿನಕ್ಕೊಮ್ಮೆ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರಾಗಿ ಸಹಿ ಹಾಕಬೇಕು ಹಾಗೂ ಮಾಧ್ಯಮಗಳೊಂದಿಗೆ ಮಾತನಾಡಬಾರದು ಎಂದು ಬೆಳ್ತಂಗಡಿ ನ್ಯಾಯಾಲಯವು ಷರತ್ತು ವಿಧಿಸಿದೆ.

ಇದನ್ನೂ ನೋಡಿ: ಮೊಟ್ಟೆ ತಿಂದರೆ ಕ್ಯಾನ್ಸರ್ ಬರುತ್ತಾ? ಭಯ ಬಿಡಿ ಸತ್ಯ ತಿಳಿಯಿರಿ Janashakthi Media

Donate Janashakthi Media

Leave a Reply

Your email address will not be published. Required fields are marked *