ನವದೆಹಲಿ: ದಕ್ಷಿಣ ದೆಹಲಿಯ ಮಲ್ವಿಯಾ ನಗರ ಪ್ರದೇಶದಲ್ಲಿರುವ ರೆಸ್ಟೋರೆಂಟ್ನಲ್ಲಿ ಜೂನ್ 3ರಂದು ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 21 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರಾದವರಲ್ಲಿ ಮಧ್ಯ ಏಷ್ಯಾ ಮತ್ತು ಆಫ್ರಿಕಾ ಮೂಲದ ವಿದೇಶಿಯರು ಕೂಡ ಸೇರಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಅಗ್ನಿ ಅವಘಡದಿಂದ 37ಕ್ಕೂ ಹೆಚ್ಚು ಜನರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರಲ್ಲಿ 18 ಮಂದಿಯನ್ನು ಮೃತ ಎಂದು ಘೋಷಿಸಲಾಗಿದೆ.
ಬೆಂಕಿ ಬೆಳಿಗ್ಗೆ ಸುಮಾರು 8:50ಕ್ಕೆ “ಲೆಮನ್ ಗ್ರೀನ್ ರೆಸ್ಟೋರೆಂಟ್” ನಲ್ಲಿ ಕಾಣಿಸಿಕೊಂಡಿದ್ದು, ನಂತರ ತಕ್ಷಣವೇ ದೆಹಲಿ ಅಗ್ನಿಶಾಮಕ ಸೇವೆ (DFS) ಘಟನಾ ಸ್ಥಳಕ್ಕೆ ತುರ್ತು ತಂಡಗಳನ್ನು ಕಳುಹಿಸಿದೆ. ಬೆಂಕಿ ಹತ್ತಿರದ ಮತ್ತೊಂದು ಆಹಾರಮಳಿಗೆಯಿಗೂ ಹರಡಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಕಾಂಗ್ರೆಸ್ ನಾಯಕ ಬಿಕೆ ಹರಿ ಪ್ರಸಾದ್ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ: ಹೈಕಮಾಂಡ್
ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳ ಪ್ರಕಾರ, ಎರಡು ನೀರಿನ ಟೆಂಡರ್ಗಳು, ಎರಡು ನೀರಿನ ಬೌಸರ್ಗಳು, ಕ್ವಿಕ್ ರೆಸ್ಪಾನ್ಸ್ ವಾಹನ ಸೇರಿದಂತೆ ಹಲವಾರು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಯಿತು.
ರಕ್ಷಣಾ ಕಾರ್ಯಾಚರಣೆಯ ವೇಳೆ ಅಗ್ನಿಶಾಮಕ ಸಿಬ್ಬಂದಿ ಧೂಮದಿಂದ ತುಂಬಿದ್ದ ಭೂಗತ ಮಹಡಿಗೆ ಪ್ರವೇಶಿಸಿ ಒಳಗೆ ಸಿಲುಕಿದ್ದ ಮೂವರನ್ನು ರಕ್ಷಿಸಿದ್ದಾರೆ.

ಘಟನೆಯ ಮಾಹಿತಿ ದೊರಕುತ್ತಿದ್ದಂತೆಯೇ ದಕ್ಷಿಣ ಜಿಲ್ಲೆ SDM ಹಾಗೂ DDMA ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ತುರ್ತು ಕಾರ್ಯಾಚರಣಾ ಕೇಂದ್ರಗಳನ್ನು (EOC) ಸಕ್ರಿಯಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಬೆಂಕಿ ಕಟ್ಟಡದ ನೆಲ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ರೆಸ್ಟೋರೆಂಟ್ನಿಂದ ಆರಂಭವಾಗಿರಬಹುದು ಎಂದು ಶಂಕಿಸಲಾಗಿದೆ. ಆದರೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ.
ಅಗ್ನಿ ಅವಘಡದ ಕಾರಣವನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದ್ದು, ಹೆಚ್ಚಿನ ವಿವರಗಳು ನಿರೀಕ್ಷಿಸಲಾಗುತ್ತಿವೆ.
ಇದನ್ನೂ ನೋಡಿ: ಬೆಂಗಳೂರಿನ ಸರಕಾರಿ ಶಾಲೆಗಳ ದುಸ್ಥಿತಿಗೆ ಯಾರು ಹೊಣೆ? – ಜಯರತ್ನ Janashakthi Media
